Rajyotsava Award: ಖ್ಯಾತ ನಟರಾದ ಬ್ಯಾಂಕ್​ ಜನಾರ್ದನ್​, ಡಿಂಗ್ರಿ ನಾಗರಾಜ್​ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

Kannada Rajyotsava Award 2023: ಡಿಂಗ್ರಿ ನಾಗರಾಜ್​ ಮತ್ತು ಬ್ಯಾಂಕ್​ ಜನಾರ್ದನ್​ ಅವರು ನೂರಾರು ಸಿನಿಮಾಗಳ ಮೂಲಕ ಜನರನ್ನು ರಂಜಿಸಿದ್ದಾರೆ. ಹಲವು ಬಗೆಯ ಪಾತ್ರಗಳಿಗೆ ಅವರು ಬಣ್ಣ ಹಚ್ಚಿದ್ದಾರೆ. ಈ ಖ್ಯಾತ ನಟರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಆಗಿರುವುದಕ್ಕೆ ಅವರ ಅಭಿಮಾನಿಗಳಿಗೆ ಸಂತಸ ಆಗಿದೆ. ಚಿತ್ರರಂಗದವರು, ಆಪ್ತರು ಈ ಕಲಾವಿದರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

Rajyotsava Award: ಖ್ಯಾತ ನಟರಾದ ಬ್ಯಾಂಕ್​ ಜನಾರ್ದನ್​, ಡಿಂಗ್ರಿ ನಾಗರಾಜ್​ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ
ಬ್ಯಾಂಕ್​ ಜನಾರ್ದನ್​, ಡಿಂಗ್ರಿ ನಾಗರಾಜ್​
Follow us
ಮದನ್​ ಕುಮಾರ್​
|

Updated on:Oct 31, 2023 | 5:28 PM

2022-23ನೇ ಸಾಲಿನ ಕನ್ನಡ ರಾಜ್ಯೋತ್ಸವ (Karnataka Rajyotsava Award) ಪ್ರಶಸ್ತಿ ಪ್ರಕಟ ಆಗಿದೆ. ನಾಡಿನ ವಿವಿಧ ಕ್ಷೇತ್ರಗಳ ಅನೇಕ ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಈ ಬಾರಿ ಚಲನಚಿತ್ರ ಕ್ಷೇತ್ರದಿಂದ ಅನುಭವಿ ಕಲಾವಿದರಾದ ಬ್ಯಾಂಕ್​ ಜನಾರ್ದನ್​ ಮತ್ತು ಡಿಂಗ್ರಿ ನಾಗರಾಜ್ (Dingri Nagaraj)​ ಅವರಿಗೆ ಪ್ರಶಸ್ತಿ ಘೋಷಣೆ ಆಗಿದೆ. ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಈ ಕಲಾವಿದರು ಸಕ್ರಿಯರಾಗಿದ್ದಾರೆ. ನೂರಾರು ಸಿನಿಮಾಗಳ ಮೂಲಕ ಜನರನ್ನು ರಂಜಿಸಿದ್ದಾರೆ. ಡಿಂಗ್ರಿ ನಾಗರಾಜ್​ ಮತ್ತು ಬ್ಯಾಂಕ್​ ಜನಾರ್ದನ್ (Bank Janardhan)​ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಆಗಿರುವುದಕ್ಕೆ ಅವರ ಅಭಿಮಾನಿಗಳಿಗೆ ಸಂತಸ ಆಗಿದೆ. ಚಿತ್ರರಂಗದವರು, ಆಪ್ತರು, ಅಭಿಮಾನಿಗಳು ಈ ಕಲಾವಿದರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರವು ಇಂದು (ಅಕ್ಟೋಬರ್​ 31) ಮಧ್ಯಾಹ್ನ ಬಿಡುಗಡೆ ಮಾಡಿದೆ. ಸಂಘ-ಸಂಸ್ಥೆಗಳು ಮತ್ತು ವೈಯಕ್ತಿಕವಾಗಿ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ನೀಡಲಾಗುತ್ತಿದೆ. ಸಂಗೀತ, ಸಿನಿಮಾ, ಕ್ರೀಡೆ, ನ್ಯಾಯಾಂಗ, ರಂಗಭೂಮಿ, ಶಿಕ್ಷಣ, ಪರಿಸರ, ಮಾಧ್ಯಮ, ತಂತ್ರಜ್ಞಾನ ಸೇರಿದಂತೆ ಹಲವು ವಿಭಾಗಗಳಲ್ಲಿ ಪ್ರಶಸ್ತಿಗೆ ಅನೇಕರು ಭಾಜನರಾಗಿದ್ದಾರೆ.

ಇದನ್ನೂ ಓದಿ: Rajyotsava Award 2023 Winners List: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಇಲ್ಲಿದೆ ವಿಜೇತರ ಪಟ್ಟಿ

ಪೋಷಕ ಪಾತ್ರಗಳಲ್ಲಿ ಬ್ಯಾಂಕ್​ ಜನಾರ್ದನ್​ ಮತ್ತು ಡಿಂಗ್ರಿ ನಾಗರಾಜ್​ ಅವರು ಹೆಸರು ಮಾಡಿದ್ದಾರೆ. ಹಲವು ಸಿನಿಮಾಗಳಲ್ಲಿ ಅವರು ಹಾಸ್ಯ ಪಾತ್ರಗಳನ್ನು ನಿಭಾಯಿಸುವ ಮೂಲಕ ಜನರ ಮನ ಗೆದ್ದಿದ್ದಾರೆ. ಆ ಮೂಲಕ ಕನ್ನಡ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದಾರೆ. ‘ಶ್​’, ‘ಅಜಗಜಾಂತರ’, ‘ತರ್ಲೆ ನನ್ಮಗ’, ‘ಗೌರಿ ಗಣೇಶ​’ ಮುಂತಾದ ಸಿನಿಮಾಗಳಲ್ಲಿ ಬ್ಯಾಂಕ್​​ ಜನಾರ್ದನ್​ ಅವರ ನಟನೆಯನ್ನು ಮರೆಯುವಂತಿಲ್ಲ. ಕೆಲವೇ ದಿನಗಳ ಹಿಂದೆ ಅವರಿಗೆ ಹೃದಯಾಘಾತ ಆದ ಸುದ್ದಿ ಕೇಳಿಬಂದಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಸದ್ಯ ಬ್ಯಾಂಕ್​​ ಜನಾರ್ದನ್​ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Kannada Rajyotsava Speech: ಕನ್ನಡ ರಾಜ್ಯೋತ್ಸವಕ್ಕೆ ನಿಮ್ಮ ಭಾಷಣ ಹೀಗಿರಲಿ

ಡಿಂಗ್ರಿ ನಾಗರಾಜ್​ ಮೂಲತಃ ಬೆಂಗಳೂರಿನವರು. ಅವರ ತಂದೆ ನಾಟಕ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಬಾಲ ನಟನಾಗಿಯೇ ಡಿಂಗ್ರಿ ನಾಗರಾಜ್​ ಅವರು ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ನಂತರ ಅವರಿಗೆ ಸಿನಿಮಾಗಳಲ್ಲಿ ನಟಿಸುವ ಅವಕಾಶ ಸಿಕ್ಕಿತು. ಹಲವಾರು ಸಿನಿಮಾಗಳಲ್ಲಿ ನಟಿಸಿ ಅವರು ಜನಪ್ರಿಯತೆ ಪಡೆದರು. ಸ್ಯಾಂಡಲ್​ವುಡ್​ನ ಅನೇಕ ಸ್ಟಾರ್​ ಹೀರೋಗಳು ಜೊತೆ ಕೆಲಸ ಮಾಡುವ ಅವಕಾಶ ಅವರಿಗೆ ಒದಗಿಬಂತು. ಈಗ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿರುವುದು ಅವರ ಖ್ಯಾತಿ ಹೆಚ್ಚಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:03 pm, Tue, 31 October 23

ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ