Rajesh: ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರ; ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು
Kalatapasvi Rajesh: ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ರಾಜೇಶ್ ಅವರು ಬಳಲುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ (Kannada Actor Rajesh) ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಅವರಿಗೆ ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜೇಶ್ ಅವರಿಗೆ 82 ವರ್ಷ ವಯಸ್ಸಾಗಿದೆ. ಹಲವು ದಶಕಗಳಿಂದ ಚಿತ್ರರಂಗದಲ್ಲಿ ಅನುಭವ ಹೊಂದಿರುವ ಅವರು ಇತ್ತೀಚಿನ ವರ್ಷಗಳಲ್ಲಿ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ರಾಜೇಶ್ (Kalatapasvi Rajesh) ಅವರು ಬಳಲುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಕಸ್ತೂರಬಾ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಅವರು ಗುಣಮುಖರಾಗಲಿ ಎಂದು ಆಪ್ತರು ಮತ್ತು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ವೈದ್ಯರು ಸುದ್ದಿಗೋಷ್ಠಿ ನಡೆಸಿ, ರಾಜೇಶ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.
ರಾಜೇಶ್ ಅವರ ಆರೋಗ್ಯದ ಬಗ್ಗೆ ವೈದ್ಯರು ಹೆಲ್ತ್ ಅಪ್ಡೇಟ್ ನೀಡಿದ್ದಾರೆ. ‘ಫೆ.9ರಂದು ಉಸಿರಾಟದ ಸಮಸ್ಯೆಯಿಂದ ರಾಜೇಶ್ ಅಡ್ಮಿಟ್ ಆಗಿದ್ದರು. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದಾರೆ. ಅವರು ಪೂರ್ಣ ಗುಣಮುಖರಾಗಲು ಎಷ್ಟು ಕಾಲಾವಕಾಶ ಬೇಕು ಎಂಬುದನ್ನು ಕಾದುನೋಡಬೇಕು. ಸದ್ಯಕ್ಕೆ ಅವರು ಸೀರಿಯಸ್ ಆಗಿದ್ದಾರೆ’ ಎಂದು ವೈದ್ಯರು ತಿಳಿಸಿದ್ದಾರೆ.
‘ಸಂಬಂಧಪಟ್ಟ ವೈದ್ಯರೆಲ್ಲರೂ ಬಂದು ನೋಡಿದ್ದಾರೆ. ಉಸಿರಾಟದ ಸಮಸ್ಯೆ ಬಿಟ್ಟು ಬೇರೆ ಏನೂ ಕಾಣಿಸಿಲ್ಲ. ಅವರ ದೇಹದಲ್ಲಿ ಇನ್ಫೆಕ್ಷನ್ ಆಗಿದೆ. ಅದರಿಂದಲೇ ಆರೋಗ್ಯ ಸಮಸ್ಯೆ ಉಂಟಾಗಿದೆ. ಚಿಕಿತ್ಸೆಗೆ ನಿಧಾನವಾಗಿ ಸ್ಪಂದಿಸುತ್ತಿದ್ದಾರೆ. ಅವರ ಮಗಳು ಮತ್ತು ಮೊಮ್ಮಗ ಇಲ್ಲೇ ಇದ್ದಾರೆ. ಯಾವ ರೀತಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಬಗ್ಗೆ ಅವರಿಗೂ ಮಾಹಿತಿ ಇದೆ. ಕುಟುಂಬದ ಸದಸ್ಯರು ನಮ್ಮ ಜೊತೆ ಸಂಪರ್ಕದಲ್ಲಿ ಇದ್ದಾರೆ’ ಎಂದು ವೈದ್ಯರು ಹೇಳಿದ್ದಾರೆ.
ರಾಜೇಶ್ ಜನಿಸಿದ್ದು ಬೆಂಗಳೂರಿನಲ್ಲಿ. ಅವರ ಮೂಲ ಹೆಸರು ಮುನಿ ಚೌಡಪ್ಪ. ಬಳಿಕ ಅವರು ನಾಟಕಗಳಲ್ಲಿ ಅಭಿನಯಿಸುವಾಗ ವಿದ್ಯಾಸಾಗರ್ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದರು. ಚಿತ್ರರಂಗದಲ್ಲಿ ‘ತಲಾತಪಸ್ವಿ’ ರಾಜೇಶ್ ಎಂದೇ ಅವರು ಫೇಮಸ್ ಆದರು. 1960ರ ದಶಕದಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ನೂರಾರು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದರು.
ಇದನ್ನೂ ಓದಿ:
‘ಕಪಾಳಕ್ಕೆ ಹೊಡೆಯೋದ್ರಲ್ಲಿ ಪುಟ್ಟಣ್ಣ ಕಣಗಾಲ್ ನಂ.1’; ನಟ ರಾಜೇಶ್ ಹೇಳಿದ ಅಚ್ಚರಿಯ ಸಂಗತಿ
ಮಂಜುಳಾ ಮದುವೆ ಹಿಂದಿದೆ ದುರಂತ ಕಥೆ; ಸಾವಿನ ಕಾರಣ ವಿವರಿಸಿದ ಹಿರಿಯ ನಟ ರಾಜೇಶ್
Published On - 9:49 am, Mon, 14 February 22