ಕನ್ನಡ ಕಿರುತೆರೆ, ಹಿರಿತೆರೆಯ ನಟ ಉಮೇಶ್ ಹೆಗಡೆ ನಿಧನ

ಉಮೇಶ್ ಪಾರ್ಥಿವ ಶರೀರವನ್ನು ಅವರ ನಿವಾಸದಲ್ಲಿ ಇಡಲಾಗಿದೆ. ಕುಟುಂಬ ಸದಸ್ಯರ ಹಾಗೂ ಸ್ನೇಹಿತರ ಅಂತಿಮ ದರ್ಶನದ ಬಳಿಕ ಅಂತಿಮ ವಿಧಿವಿಧಾನ ನೆರವೇರಿಸಲಾಗುವುದು ಎಂದು ತಿಳಿಸಲಾಗಿದೆ.

ಕನ್ನಡ ಕಿರುತೆರೆ, ಹಿರಿತೆರೆಯ ನಟ ಉಮೇಶ್ ಹೆಗಡೆ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಾಗೂ ಕಿರುತೆರೆಯ ಹಿರಿಯ ಕಲಾವಿದ ಉಮೇಶ್ ಹೆಗ್ಡೆ (Umesh Hegde) ಇಂದು (ಅಕ್ಟೋಬರ್ 11) ನಿಧನ ಹೊಂದಿದ್ದಾರೆ. ಅವರು ಹೃದಯಾಘಾತದ ಕಾರಣದಿಂದ ನಿನ್ನೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಉಮೇಶ್ ಪಾರ್ಥಿವ ಶರೀರವನ್ನು ಅವರ ನಿವಾಸದಲ್ಲಿ ಇಡಲಾಗಿದೆ. ಕುಟುಂಬ ಸದಸ್ಯರ ಹಾಗೂ ಸ್ನೇಹಿತರ ಅಂತಿಮ ದರ್ಶನದ ಬಳಿಕ ಅಂತಿಮ ವಿಧಿವಿಧಾನ ನೆರವೇರಿಸಲಾಗುವುದು ಎಂದು ತಿಳಿಸಲಾಗಿದೆ.

ಕನ್ನಡ ಚಿತ್ರರಂಗದ ಗಣ್ಯರು ಉಮೇಶ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಉಮೇಶ್ ಹೆಗ್ಡೆ ಅವರಿಗೆ 71 ವರ್ಷ ವಯಸ್ಸಾಗಿತ್ತು ಎಂದು ತಿಳಿದುಬಂದಿದೆ. ಉಮೇಶ್, ಹಲವಾರು ಧಾರಾವಾಹಿಗಳು ಸಹಿತ ಸಿನಿಮಾಗಳಲ್ಲಿ ಕೂಡ ನಟಿಸಿದ್ದರು. ಅವರು ರಂಗಭೂಮಿ ಕಲಾವಿದರೂ ಆಗಿದ್ದರು. ಉಮೇಶ್ ಹೆಗಡೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿಯವರು. ಅವರ ನಿಧನ ವಾರ್ತೆಯನ್ನು ಪುತ್ರ ಆದರ್ಶ್ ಹೆಗ್ಡೆ ಸಾಮಾಜಿಕ ಜಾಲತಾಣಗಳಲ್ಲಿ ಖಚಿತಪಡಿಸಿದ್ದಾರೆ.

ಹಿರಿಯ ನಟ ಸತ್ಯಜಿತ್ ನಿಧನ
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ‌ ಬಳಲುತ್ತಿದ್ದ ಕನ್ನಡದ ಖ್ಯಾತ ನಟ ಸತ್ಯಜಿತ್ ಭಾನುವಾರ ನಿಧನ ಹೊಂದಿದ್ದರು. ಅವರಿಗೆ 72 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 2 ಗಂಟೆ ಸುಮಾರಿಗೆ ಸತ್ಯಜಿತ್ ಕೊನೆಯುಸಿರೆಳೆದಿದ್ದರು. ಬಳಿಕ, ಹೆಗಡೆ ನಗರದ ಶಬರಿ ನಗರದ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಇದನ್ನೂ ಓದಿ: Sathyajith Death: ‘ಆಸ್ಪತ್ರೆಗೆ ಬಾರದ ಮಗಳು ಸ್ಮಶಾನಕ್ಕೆ ಬಂದಳು’: ಸತ್ಯಜಿತ್​ ಪುತ್ರ ಆಕಾಶ್​

ಇದನ್ನೂ ಓದಿ: ಚಿರತೆ ಜತೆ ಫೈಟ್​ ಮಾಡ್ತೀನಿ ಅಂದಿದ್ದ ಸತ್ಯಜಿತ್​ಗೆ ಅಂಬರೀಷ್​ ಬೈದಿದ್ರು

Read Full Article

Click on your DTH Provider to Add TV9 Kannada