Rakshita Suresh: ‘ಇನ್ನೂ ನಡುಗುತ್ತಿದ್ದೇನೆ’; ವಿದೇಶದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾದ ಕನ್ನಡದ ಗಾಯಕಿ ರಕ್ಷಿತಾ ಸುರೇಶ್

ಇತ್ತೀಚೆಗೆ ರಕ್ಷಿತಾ ಅವರು ಮಲೇಷಿಯಾಗೆ ತೆರಳಿದ್ದರು. ಅಲ್ಲಿ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಾಗ ಅವರು ಚಲಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ.

Rakshita Suresh: ‘ಇನ್ನೂ ನಡುಗುತ್ತಿದ್ದೇನೆ’; ವಿದೇಶದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾದ ಕನ್ನಡದ ಗಾಯಕಿ ರಕ್ಷಿತಾ ಸುರೇಶ್
ರಕ್ಷಿತಾ ಸುರೇಶ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:May 08, 2023 | 8:44 AM

ಕನ್ನಡದ ಗಾಯಕಿ ರಕ್ಷಿತಾ ಸುರೇಶ್ (Rakshita Suresh) ಅವರು ಮೇ 7ರಂದು ಮಲೇಷಿಯಾದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ. ಅವರು ಚಲಿಸುತ್ತಿದ್ದ ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ರಕ್ಷಿತಾ ಅವರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ (Social Media) ಅವರು ಮಾಹಿತಿ ಹಂಚಿಕೊಂಡಿದ್ದಾರೆ. ರಕ್ಷಿತಾ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್ ಪ್ರಾರ್ಥಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಮಾಡಿರುವ ಪೋಸ್ಟ್​ಗೆ ಫ್ಯಾನ್ಸ್ ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾ ರಿಲೀಸ್ ಆಗಿದೆ. ಮಣಿ ರತ್ನಂ ನಿರ್ದೇಶನದ ಈ ಸಿನಿಮಾದಲ್ಲಿ ವಿಕ್ರಮ್, ಕಾರ್ತಿ, ಐಶ್ವರ್ಯಾ ರೈ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಎ.ಆರ್​ ರೆಹಮಾನ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಚಿತ್ರದ ‘ಕಿರುನಗೆ..’ ಸಾಂಗ್​ನ ರಕ್ಷಿತಾ ಹಾಡಿದ್ದರು. ಇತ್ತೀಚೆಗೆ ಅವರು ಮಲೇಷಿಯಾಗೆ ತೆರಳಿದ್ದರು. ಅಲ್ಲಿ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಾಗ ಅವರು ಚಲಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ.

ಈ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿರುವ ರಕ್ಷಿತಾ, ‘ಇಂದು ಭೀಕರ ಅಪಘಾತಕ್ಕೆ ಒಳಗಾದೆ. ನಾನು ಚಲಿಸುತ್ತಿದ್ದ ಕಾರು ಡಿವೈಡರ್​​ಗೆ ಹೊಡೆಯಿತು. ನಾನು ಮಲೇಷಿಯಾ ವಿಮಾನ ನಿಲ್ದಾಣಕ್ಕೆ ತೆರಳುವಾಗ ಈ ಅಪಘಾತ ಆಗಿದೆ. 10 ಸೆಕೆಂಡ್​ನಲ್ಲಿ ಇಡೀ ಜೀವನ ಒಮ್ಮೆ ಕಣ್ಮುಂದೆ ಹಾದು ಹೋಯಿತು’ ಎಂದಿದ್ದಾರೆ.

ಇದನ್ನೂ ಓದಿ: Laal Salaam Movie: ಮೊಹಿದ್ದೀನ್ ಭಾಯ್ ಆಗಿ ಬಂದ ರಜನಿಕಾಂತ್; ‘ಲಾಲ್ ಸಲಾಮ್’ ಚಿತ್ರದಲ್ಲಿ ಹೊಸ ಗೆಟಪ್

‘ಏರ್​ಬ್ಯಾಗ್​ಗೆ ಧನ್ಯವಾದ. ಇಲ್ಲವಾದಲ್ಲಿ ಪರಿಸ್ಥಿತಿ ಮತ್ತಷ್ಟು ಕೆಟ್ಟದಾಗಿ ಇರುತ್ತಿತ್ತು. ನಡೆದ ಘಟನೆಯಿಂದ ಇನ್ನೂ ನಡುಗುತ್ತಿದ್ದೇನೆ. ನಾನು, ನನ್ನ ಜೊತೆ ಇದ್ದವರು, ಕಾರು ಚಾಲಕರು ಸುರಕ್ಷಿತವಾಗಿದ್ದಾರೆ ಅನ್ನೋದು ಖುಷಿಯ ವಿಚಾರ. ಗಾಯಗಳು ಆಗಿವೆ. ನಾನು ಬದುಕುಳಿದಿದ್ದೇನೆ’ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Accident: ಉತ್ತರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ, 5 ಸಾವು, 10 ಮಂದಿಗೆ ಗಾಯ

ರಕ್ಷಿತಾ ಸುರೇಶ್ ಅವರು ರಿಯಾಲಿಟಿ ಶೋ ಮೂಲಕ ಪರಿಚಯ ಆದವರು. ‘ರಿದಮ್ ತಧೀಮ್​’ ಹಾಗೂ ‘ಲಿಟ್ಲ್​ ಸ್ಟಾರ್ ಸಿಂಗರ್’ ರಿಯಾಲಿಟಿ ಶೋಗಳನ್ನು ಅವರು ಗೆದ್ದಿದ್ದಾರೆ. ಅವರು ‘ಪೊನ್ನಿಯಿನ್ ಸೆಲ್ವನ್ 2’ ಚಿತ್ರದ ‘ಕಿರುನಗೆ’ ಹಾಡನ್ನು ಹಾಡಿದ್ದಾರೆ. ಇದಲ್ಲದೆ ಇನ್ನೂ ಹಲವು ಹಾಡುಗಳು ಅವರ ಕಂಠದಿಂದ ಮೂಡಿ ಬಂದಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:06 am, Mon, 8 May 23

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ