
ಗಾಯಕ ಸೋನು ನಿಗಮ್ (Sonu Nigam) ಅವರು ಒಂದಾದ ಮೇಲೆ ಒಂದರಂತೆ ವಿವಾದ ಮಾಡಿಕೊಳ್ಳುತ್ತಲೇ ಇದ್ದಾರೆ. ಇತ್ತೀಚೆಗೆ ಕನ್ನಡಿಗರನ್ನು ಕೆಣಕಿ ಅವರು ಸುದ್ದಿ ಆಗಿದ್ದರು. ‘ಕನ್ನಡ ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ನಲ್ಲಿ ಭಯೋತ್ಪಾದನಾ ದಾಳಿ ಆಯಿತು’ ಎಂದು ಹೇಳಿದ್ದರು. ಇದರಿಂದ ಅವರು ಟೀಕೆ ಎದುರಿಸಿದ್ದರು. ಈಗ ಸೋನು ನಿಗಮ್ ಹೆಸರಿ ಟ್ವಿಟರ್ ಖಾತೆಯಿಂದ ಮಾಡಿದ ಟ್ವೀಟ್ ಒಂದು ಚರ್ಚೆಗೆ ಕಾರಣ ಆಗಿದೆ. ಅಸಲಿಗೆ ಅವರು ಇದನ್ನು ಮಾಡಿಯೇ ಇಲ್ಲ. ಸೋನು ನಿಗಮ್ ಟ್ವಿಟರ್ ಬಳಕೆ ಮಾಡೋದು ಬಿಟ್ಟು 7 ವರ್ಷಗಳೇ ಆಗಿವೆ.
ಬೆಂಗಳೂರಿನ ಚಂದಾಪುರದ ಎಸ್ಬಿಐ ಬ್ಯಾಂಕ್ಗೆ ಕೆಲಸದ ನಿಮಿತ್ತ ಗ್ರಾಹಕರೊಬ್ಬರು ಹೋದಾಗ ಅಲ್ಲಿನ ಬ್ಯಾಂಕ್ ಮ್ಯಾನೇಜರ್ ಪ್ರಿಯಾಂಕಾ ಉದ್ಧಟತನ ತೋರಿದ್ದರು. ಗ್ರಾಹಕನಿಗೆ ಹಿಂದಿ ಮಾತನಾಡುವಂತೆ ಹೇಳಿದ್ದೂ ಅಲ್ಲದೆ, ಯಾವತ್ತೂ ಕನ್ನಡ ಮಾತನಾಡಲ್ಲ ಎಂದು ದರ್ಪ ತೋರಿದ್ದರು.
ಎಸ್ ಬಿ ಐ ಬ್ಯಾಂಕ್ ನ ಬ್ರ್ಯಾಂಚ್ ಮ್ಯಾನೇಜರ್ ರವರ ಈ ರೀತಿಯ ದುಂಡಾವರ್ತನೆ ಸಹಿಸಲು ಆಗದು.
ಕರ್ನಾಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಸಂದರ್ಭದಲ್ಲಿ, ಅದರಲ್ಲಿಯೂ ಬ್ಯಾಂಕಿಂಗ್ ವಲಯದಲ್ಲಿ ಗ್ರಾಹಕರು ಮಾತನಾಡುವ ಸ್ಥಳೀಯ ಭಾಷೆಯಲ್ಲಿಯೇ ವ್ಯವಹರಿಸತಕ್ಕದ್ದು.
ಕರ್ನಾಟಕದಲ್ಲಿ ಬ್ಯಾಂಕಿಂಗ್ ಸೇವೆಗಳಲ್ಲಿ ಸ್ಥಳೀಯ ಕನ್ನಡಿಗರನ್ನು ಪರಿಗಣಿಸುವಂತೆ…
— Tejasvi Surya (@Tejasvi_Surya) May 21, 2025
ಎಸ್ಬಿಐ ಬ್ಯಾಂಕ್ನ ಬ್ರ್ಯಾಂಚ್ ಮ್ಯಾನೇಜರ್ ಅರವರ ಈ ರೀತಿಯ ದುಂಡಾವರ್ತನೆ ಸಹಿಸಲು ಆಗದು. ಕರ್ನಾಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಸಂದರ್ಭದಲ್ಲಿ, ಅದರಲ್ಲಿಯೂ ಬ್ಯಾಂಕಿಂಗ್ ವಲಯದಲ್ಲಿ ಗ್ರಾಹಕರು ಮಾತನಾಡುವ ಸ್ಥಳೀಯ ಭಾಷೆಯಲ್ಲಿಯೇ ವ್ಯವಹರಿಸತಕ್ಕದ್ದು. ಕರ್ನಾಟಕದಲ್ಲಿ ಬ್ಯಾಂಕಿಂಗ್ ಸೇವೆಗಳಲ್ಲಿ ಸ್ಥಳೀಯ ಕನ್ನಡಿಗರನ್ನು ಪರಿಗಣಿಸುವಂತೆ ನಾನು ಸಂಸತ್ತಿನ ಒಳಗೆ ಮತ್ತು ಹೊರಗೆ ಹಲವು ಬಾರಿ ಪ್ರಸ್ತಾಪಿಸಿದ್ದೇನೆ. ಇತ್ತೀಚೆಗಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಮುಂದೆಯೂ ನಾನು ಇದನ್ನೇ ಪುನರುಚ್ಚರಿಸಿ, ಸ್ಥಳೀಯ ಭಾಷೆ ಬಲ್ಲವರನ್ನೇ ನೇಮಕ ಮಾಡಿಕೊಳ್ಳುವಂತೆ ಒತ್ತಾಯಿಸಿದ್ದು, ಈ ಕುರಿತಂತೆ DFS ನೀತಿಯಡಿಯಲ್ಲಿಯೇ ನೇಮಕಾತಿ ಕೈಗೊಳ್ಳುವಂತೆ ಎಸ್ಬಿಐ ಬಳಿ ವಿನಂತಿಸುತ್ತೇನೆ. ಈ ರೀತಿಯ ವರ್ತನೆ ತೋರಿರುವ ಬ್ಯಾಂಕ್ ಅಧಿಕಾರಿ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಸಂಬಂಧಪಟ್ಟವರ ಬಳಿ ನಾನು ಒತ್ತಾಯಿಸಿದ್ದು, ಕರ್ನಾಟಕದಲ್ಲಿ ಸೇವೆ ಸಲ್ಲಿಸುವ ಬ್ಯಾಂಕಿಂಗ್ ವಲಯ ಸಿಬ್ಬಂದಿಗಳು ಗ್ರಾಹಕರೊಂದಿಗೆ ಕನ್ನಡದಲ್ಲೇ ವ್ಯವಹರಿಸುವ ಅಗತ್ಯತೆ ಇದೆ’ ಎಂದಿದ್ದರು.
Don’t dub Kannada movies in Hindi!
Don’t release Kannada movies pan-India!
Do you have the guts to say this to Kannada film stars, Mr. @Tejasvi_Surya, or you are just another language warrior?
— Sonu Nigam (@SonuNigamSingh) May 21, 2025
‘ಕನ್ನಡ ಸಿನಿಮಾ ಹಿಂದಿಗೆ ಡಬ್ ಮಾಡಬೇಡಿ. ಕನ್ನಡ ಸಿನಿಮಾನ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡಬೇಡಿ. ತೇಜಸ್ವಿ ಸೂರ್ಯ ಅವರೇ ಇದನ್ನು ಕನ್ನಡ ಹೀರೋಗಳಿಗೆ ಹೇಳುವ ಗಟ್ಸ್ ನಿಮಗೆ ಇದೆಯೇ ಅಥವಾ ನೀವೋಬ್ಬ ಭಾಷಾ ಹೋರಾಟಗಾರ ಅಷ್ಟೆಯೇ’ ಎಂದು ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ: ಎಂದಿಗೂ ಕನ್ನಡ ಮಾತನಾಡಲ್ಲ ಅಂತ ದರ್ಪ ತೋರಿದ್ದ SBI ಬ್ಯಾಂಕ್ ಮ್ಯಾನೇಜರ್: ಸಿಎಂ ಖಂಡನೆ ಬೆನ್ನಲ್ಲೇ ಎತ್ತಂಗಡಿ
ಸೋನು ನಿಗಮ್ ಅವರು ಟ್ವಿಟರ್ ಬಳಕೆ ಮಾಡೋದು ನಿಲ್ಲಿಸಿ ಏಳು ವರ್ಷಗಳು ಕಳೆದಿವೆ. ಆದರೆ, ಅವರ ಹೆಸರಲ್ಲಿ ಬೇರೊಬ್ಬರು ಖಾತೆ ತೆರೆದಿದ್ದಾರೆ. ಈ ಬಗ್ಗೆ ಸೋನು ನಿಗಮ್ ಪ್ರಶ್ನೆ ಮಾಡಿದ್ದರು. ಆದರೆ, ಆ ವ್ಯಕ್ತಿ ನನ್ನ ಹೆಸರು ಸೋನು ನಿಗಮ್ ಎಂದು ದಾಖಲೆ ನೀಡಿದ್ದರು. ಕೆಲವರು ತಪ್ಪಾಗಿ ಅರ್ಥೈಸಿಕೊಂಡು ಸೋನು ನಿಗಮ್ಗೆ ಬೈಯ್ಯುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 11:32 am, Thu, 22 May 25