AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಅಪಘಾತಕ್ಕೆ ಒಳಗಾದ ‘ಕನ್ನಡತಿ’ ಕಿರಣ್​ ರಾಜ್​; ಸಿನಿಮಾ ರಿಲೀಸ್​ಗೂ ಮೊದಲೇ ಕಹಿ ಸುದ್ದಿ

ಕಿರಣ್ ರಾಜ್ ಅವರು ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಕಿರಣ್ ರಾಜ್ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅವರು ಓಡಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿನ ಬಲಭಾಗಕ್ಕೆ ಹಾನಿ ಆಗಿದೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  

ರಸ್ತೆ ಅಪಘಾತಕ್ಕೆ ಒಳಗಾದ ‘ಕನ್ನಡತಿ’ ಕಿರಣ್​ ರಾಜ್​; ಸಿನಿಮಾ ರಿಲೀಸ್​ಗೂ ಮೊದಲೇ ಕಹಿ ಸುದ್ದಿ
ಕಿರಣ್ ರಾಜ್
Malatesh Jaggin
| Edited By: |

Updated on:Sep 11, 2024 | 9:31 AM

Share

‘ಕನ್ನಡತಿ’ ಮೂಲಕ ಫೇಮಸ್ ಆದ ನಟ ಕಿರಣ್ ರಾಜ್​ ಅವರಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ. ಕಿರಣ್ ರಾಜ್​ ಎದೆ ಭಾಗಕ್ಕೆ ಪೆಟ್ಟಾಗಿದ್ದು, ಕಾರಿಗೆ ಹಾನಿ ಆಗಿದೆ. ಕಿರಣ್ ರಾಜ್​ಗೆ ಕೆಂಗೇರಿ ಬಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಎಕ್ಸಿಕ್ಯೂಟಿವ್​ ಪ್ರೊಡ್ಯೂಸರ್ ಪಾರಾಗಿದ್ದಾರೆ. ಕಿರಣ್ ರಾಜ್ ನಟನೆಯ ‘ರಾನಿ’ ಸಿನಿಮಾ ಈ ವಾರ ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಈ ರೀತಿ ಆಗಿದೆ.

ಕಿರಣ್ ರಾಜ್ ಅವರು ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ.  ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಕಿರಣ್ ರಾಜ್ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅವರು ಓಡಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿನ ಬಲಭಾಗಕ್ಕೆ ಹಾನಿ ಆಗಿದೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಕಿರಣ್ ರಾಜ್ ನಟನೆಯ ‘ರಾನಿ’ ಬಿಡುಗಡೆಗೆ ಮುಹೂರ್ತ ನಿಗದಿ

ಕಿರಣ್ ರಾಜ್ ಅವರು ಸದ್ಯ ಕಿರುತೆರೆಯಿಂದ ದೂರ ಇದ್ದಾರೆ. ಅವರು ಕೆಲವು ಸಿನಿಮಾಗಳನ್ನು ಮಾಡಿದ್ದಾರೆ. ಸೆಪ್ಟೆಂಬರ್ 12ರಂದು ಅವರ ನಟನೆಯ ‘ರಾನಿ’ ಸಿನಿಮಾ ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಈ ರೀತಿಯ ದುರ್ಘಟನೆ ನಡೆದಿದೆ ಅನ್ನೋದು ಬೇಸರದ ವಿಚಾರ.

ಕಿರಣ್ ರಾಜ್ ಅವರು ಕೇವಲ ಕನ್ನಡ ಮಾತ್ರವಲ್ಲದೆ ಹಿಂದಿ ಕಿರುತೆರೆಯಲ್ಲೂ ನಟಿಸಿ ಗಮನ ಸೆಳೆದಿದ್ದಾರೆ. ಅವರು ಆ ಬಳಿಕ ಕನ್ನಡ ಕಿರುತೆರೆಗೆ ಮರಳಿದರು. ‘ಕನ್ನಡತಿ’ ಧಾರಾವಾಹಿಯಲ್ಲಿ ಹರ್ಷ ಆಗಿ ಅವರು ಗಮನ ಸೆಳೆದರು. ಈ ಮೂಲಕ ಫೇಮಸ್ ಆದರು. ಈಗ ಅವರು ಹಿರಿತೆರೆಯಲ್ಲಿ ತೊಡಗಿಕೊಂಡಿದ್ದಾರೆ. ಅವರ ನಟನೆಯ ಸಿನಿಮಾಗಳು ರಿಲೀಸ್ ಆಗುತ್ತಿವೆ.

‘ರಾನಿ’ ಸಿನಿಮಾಗೆ ಗುರುತೇಜ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಕಿರಣ್ ರಾಜ್ ಅವರು ಹೀರೋ ಆಗಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಅನ್ನೋದು ಟ್ರೇಲರ್ ನೋಡಿದವರಿಗೆ ಗೊತ್ತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:50 am, Wed, 11 September 24

ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ