AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್​ ಬಾಬು ನಿರ್ದೇಶನದ ಹೊಸ ಸಿನಿಮಾಗೆ ‘ಕನ್ನಡತಿ’ ಧಾರಾವಾಹಿಯ ಸ್ಮೈಲ್ ಗುರು ರಕ್ಷಿತ್ ಹೀರೋ

ಸ್ಮೈಲ್ ಗುರು ರಕ್ಷಿತ್ ಹೀರೋ ಆಗಿ ನಟಿಸಲಿರುವ ಮೊದಲ ಸಿನಿಮಾಗೆ ಸ್ಕ್ರಿಪ್ಟ್​ ಕೆಲಸಗಳು ನಡೆಯುತ್ತಿವೆ. 2024ರ ಜನವರಿಯಲ್ಲಿ ಈ ಸಿನಿಮಾಗೆ ಚಿತ್ರೀಕರಣ ಆರಂಭ ಆಗಲಿದೆ. ‘ಅರಸು’, ‘ಆಕಾಶ್​’ ಮುಂತಾದ ಸಿನಿಮಾಗಳಿಗೆ ನಿರ್ದೇಶನ ಮಾಡಿ ಯಶಸ್ಸು ಕಂಡ ಮಹೇಶ್ ಬಾಬು ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ.

ಮಹೇಶ್​ ಬಾಬು ನಿರ್ದೇಶನದ ಹೊಸ ಸಿನಿಮಾಗೆ ‘ಕನ್ನಡತಿ’ ಧಾರಾವಾಹಿಯ ಸ್ಮೈಲ್ ಗುರು ರಕ್ಷಿತ್ ಹೀರೋ
ಸ್ಮೈಲ್​ ಗುರು ರಕ್ಷಿತ್​, ನಿರ್ದೇಶಕ ಮಹೇಶ್​ ಬಾಬು
ಮದನ್​ ಕುಮಾರ್​
|

Updated on: Oct 03, 2023 | 1:36 PM

Share

‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಪ್ರಸಾರವಾದ ಕನ್ನಡತಿ’ ಧಾರಾವಾಹಿ (Kannadathi Serial) ಸಾಕಷ್ಟು ಜನಪ್ರಿಯತೆ ಪಡೆಯಿತು. ಆ ಸೀರಿಯಲ್​ನಲ್ಲಿ ನಟಿಸಿದ ಬಹುತೇಕ ಕಲಾವಿದರಿಗೆ ಹೊಸ ಹೊಸ ಅವಕಾಶಗಳು ಸಿಕ್ಕವು. ಹಿರಿತೆರೆಯಲ್ಲಿ ಈಗಾಗಲೇ ಕಿರಣ್​ ರಾಜ್​ ಮಿಂಚಿದ್ದಾರೆ. ನಟಿ ರಂಜನಿ ರಾಘವನ್​ ಅವರಿಗೂ ಅವಕಾಶಗಳು ಬರುತ್ತಿವೆ. ಈಗ ಅದೇ ಧಾರಾವಾಹಿಯ ಮತ್ತೋರ್ವ ನಟ ಆದಿ ಅಲಿಯಾಸ್​ ಸ್ಮೈಲ್ ಗುರು ರಕ್ಷಿತ್ (Smile Guru Rakshth) ಕೂಡ ಸಿನಿಮಾದಲ್ಲಿ ಅವಕಾಶ ಪಡೆದಿದ್ದಾರೆ. ಅವರ ಮೊದಲ ಸಿನಿಮಾಗೆ ಚಾಲನೆ ಸಿಕ್ಕಿದೆ. ಆ ಸಿನಿಮಾಗೆ ಖ್ಯಾತ ನಿರ್ದೇಶಕ ಮಹೇಶ್​ ಬಾಬು (Mahesh Babu) ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ.

‘ಕನ್ನಡತಿ’ ಧಾರಾವಾಹಿಯಲ್ಲಿ ಆದಿ ಪಾತ್ರವನ್ನು ಮಾಡಿ ಫೇಮಸ್​ ಆದವರು ಸ್ಮೈಲ್ ಗುರು ರಕ್ಷಿತ್. ಸೀರಿಯಲ್​ ಮಾತ್ರವಲ್ಲದೇ ಅನೇಕ ರಿಯಾಲಿಟಿ ಶೋಗಳಲ್ಲಿ ಅವರು ಭಾಗವಹಿಸಿದ್ದಾರೆ. ‘ತಕಧಿಮಿತ’, ‘ಡ್ಯಾನ್ಸ್ ಡ್ಯಾನ್ಸ್’ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸಿದ ಅನುಭವ ಅವರಿಗೆ ಇದೆ. ‘ಪದ್ಮಾವತಿ’ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅವರು ಈಗ ದೊಡ್ಡ ಪರದೆಗೆ ಎಂಟ್ರಿ ನೀಡುತ್ತಿದ್ದಾರೆ. ಸ್ಯಾಂಡಲ್​ವುಡ್​ಗೆ ಕಾಲಿಡುತ್ತಿರುವ ಅವರು ಹೀರೋ ಆಗಿ ಅದೃಷ್ಟ ಪರೀಕ್ಷೆಗೆ ಇಳಿಯುತ್ತಿದ್ದಾರೆ.

ಇದನ್ನೂ ಓದಿ: ನಿಖಿಲ್​ ಕುಮಾರ್​ ಸಿನಿಮಾದ ಸೆಟ್​ಗೆ ಭೇಟಿ ನೀಡಿದ ಶಿವರಾಜ್​ಕುಮಾರ್​; ಫೋಟೋ ವೈರಲ್​

‘ಅರಸು’, ‘ಆಕಾಶ್​’ ಮುಂತಾದ ಸಿನಿಮಾಗಳಿಗೆ ನಿರ್ದೇಶನ ಮಾಡಿ ಯಶಸ್ಸು ಕಂಡವರು ಮಹೇಶ್ ಬಾಬು. ಹೊಸಬರ ಜೊತೆಗೂ ಅವರು ಸಿನಿಮಾ ಮಾಡಿ ಸೈ ಎನಿಸಿಕೊಂಡಿದ್ದಾರೆ. ಹೊಸ ಹೀರೋ ರಕ್ಷಿತ್ ಹಾಗೂ ಮಹೇಶ್​ ಬಾಬು ಕಾಂಬಿನೇಷನ್​ನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಸದ್ಯಕ್ಕೆ ಈ ಚಿತ್ರದ ಸ್ಕ್ರಿಪ್ಟ್​ ಕೆಲಸಗಳು ನಡೆಯುತ್ತಿವೆ. ಒಂದು ಕಲ್ಟ್​ ಆದಂತಹ ಲವ್​ ಸ್ಟೋರಿಯನ್ನು ಈ ಚಿತ್ರದಲ್ಲಿ ತೋರಿಸಲು ನಿರ್ದೇಶಕರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ‘ಜೋಡಿಹಕ್ಕಿ’ ಧಾರಾವಾಹಿ ನಟ ತಾಂಡವ್ ರಾಮ್​ಗೆ ಸಿನಿಮಾ ಆಫರ್​; ಭರತ್​ ನಾವುಂದ ನಿರ್ದೇಶನ

2024ರ ಜನವರಿಯಲ್ಲಿ ಈ ಸಿನಿಮಾಗೆ ಚಿತ್ರೀಕರಣ ಆರಂಭ ಆಗಲಿದೆ. ಲೀಡಿಂಗ್ ಸ್ಟ್ಯಾಂಡಿಂಗ್ ಮೇಕರ್ಸ್ ಎಂಎಂಎಂ ಗ್ರೂಪ್ಸ್​ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಸಾಕಷ್ಟು ತಯಾರಿ ನಡೆಸಿಕೊಂಡೇ ಸ್ಮೈಲ್ ಗುರು ರಕ್ಷಿತ್ ಅವರು ಶೂಟಿಂಗ್​ನಲ್ಲಿ ಭಾಗಿ ಆಗುತ್ತಿದ್ದಾರೆ. ಈ ಸಿನಿಮಾ ಮೂಲಕ ಮಹೇಶ್​ ಬಾಬು ಅವರು ತೋರಿಸಲಿರುವ ಪ್ರೇಮಕಥೆ ಹೇಗಿರಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!