AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiran Raj: ‘ಕನ್ನಡತಿ’ ಸೀರಿಯಲ್​ ನಟ ಕಿರಣ್​ ರಾಜ್​ ಈಗ ‘ಶೇರ್​’; ಸೆಟ್ಟೇರಿತು ಹೊಸ ಸಿನಿಮಾ

Kannadathi Serial | Kiran Raj Film: ‘ಶೇರ್​’ ಸಿನಿಮಾದಲ್ಲಿ ನಾಯಕ-ನಾಯಕಿ ಅನಾಥರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಿರಣ್​ ರಾಜ್​ ಅವರಿಗೆ ಮಾಸ್​ ಹೀರೋ ಗೆಟಪ್​ ಇರಲಿದೆ ಎಂಬುದು ವಿಶೇಷ.

Kiran Raj: ‘ಕನ್ನಡತಿ’ ಸೀರಿಯಲ್​ ನಟ ಕಿರಣ್​ ರಾಜ್​ ಈಗ ‘ಶೇರ್​’; ಸೆಟ್ಟೇರಿತು ಹೊಸ ಸಿನಿಮಾ
ಸುರೇಖಾ, ಕಿರಣ್ ರಾಜ್
TV9 Web
| Edited By: |

Updated on: Aug 18, 2022 | 8:11 AM

Share

ನಟ ಕಿರಣ್​ ರಾಜ್​ ಅವರಿಗೆ ಕನ್ನಡ ಕಿರುತೆರೆಯಲ್ಲಿ ಸಖತ್​ ಬೇಡಿಕೆ ಇದೆ. ‘ಕನ್ನಡತಿ’ ಸೀರಿಯಲ್​ (Kannadathi Serial) ಮೂಲಕ ಅವರು ತುಂಬ ಫೇಮಸ್​ ಆಗಿದ್ದಾರೆ. ಹಾಗಂತ ಅವರು ಕಿರುತೆರೆಗೆ ಮಾತ್ರ ಸೀಮಿತವಾಗಿಲ್ಲ. ಕನ್ನಡ ಚಿತ್ರರಂಗದಲ್ಲೂ ಅವರು ಸಕ್ರಿಯರಾಗಿದ್ದಾರೆ. ಕಿರಣ್​ ರಾಜ್​ (Kiran Raj) ಹೀರೋ ಆಗಿ ನಟಿಸಿದ್ದ ‘ಬಡ್ಡೀಸ್’ ಸಿನಿಮಾ ಇತ್ತೀಚೆಗೆ ಬಿಡುಗಡೆಯಾಗಿ ಗಮನ ಸೆಳೆಯಿತು. ಅವರು ಮುಖ್ಯಭೂಮಿಕೆ ನಿಭಾಯಿಸಿರುವ ‘ಭರ್ಜರಿ ಗಂಡು’ ಸಿನಿಮಾ ಕೂಡ ಶೀಘ್ರದಲ್ಲೇ ತೆರೆಕಾಣಲಿದೆ. ಅದೇ ಚಿತ್ರದ ನಿರ್ದೇಶಕ ಪ್ರಸಿದ್ಧ್​ ಜೊತೆ ಸೇರಿ ಕಿರಣ್​ ರಾಜ್​ ಅವರು ಹೊಸ ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಈ ಚಿತ್ರಕ್ಕೆ ‘ಶೇರ್​’ (Sher Kannada Movie) ಎಂದು ಶೀರ್ಷಿಕೆ ಇಡಲಾಗಿದೆ. ಬೆಂಗಳೂರಿನ ಕಂಠೀರವ ಸ್ಡುಡಿಯೋದಲ್ಲಿ ಇತ್ತೀಚೆಗೆ ಈ ಸಿನಿಮಾದ ಮುತೂರ್ಹ ನೆರವೇರಿದೆ. ಸದ್ಯದಲ್ಲೇ ಶೂಟಿಂಗ್​ ಆರಂಭಿಸಲು ಸಕಲ ತಯಾರಿ ಮಾಡಿಕೊಳ್ಳಲಾಗಿದೆ.

ಬೀದರ್​ ಮೂಲದ ಡಾ. ಸುದರ್ಶನ್ ಸುಂದರರಾಜ್ ಅವರು ‘ಶೇರ್​’ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಮುಹೂರ್ತ ಸಂದರ್ಭದಲ್ಲಿ ಮೊದಲ ಸನ್ನಿವೇಶಕ್ಕೆ ಅವರೇ ಆರಂಭ ಫಲಕ ತೋರಿದ್ದಾರೆ. ಅನೇಕ ಗಣ್ಯರು ಆಗಮಿಸಿ ಕಿರಣ್​ ರಾಜ್​ ಮತ್ತು ಇಡೀ ‘ಶೇರ್​’ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಬಳಿಕ ಸುದ್ದಿಗೋಷ್ಠಿ ನಡೆಸಿ, ಸಿನಿಮಾ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಳ್ಳಲಾಯಿತು.

ಈ ಸಿನಿಮಾದಲ್ಲಿ ಕಿರಣ್​ ರಾಜ್​ಗೆ ಜೋಡಿಯಾಗಿ ಸುರೇಖಾ ನಟಿಸಲಿದ್ದಾರೆ. ಇದೊಂದು ಆ್ಯಕ್ಷನ್-ಥ್ರಿಲ್ಲರ್​ ಸಿನಿಮಾ. ಹೆಚ್ಚಿನ ದೃಶ್ಯಗಳು ಅನಾಥಾಶ್ರಮದಲ್ಲಿ ನಡೆಯುತ್ತದೆ. ನಾಯಕ-ನಾಯಕಿ  ಅನಾಥರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಿರಣ್​ ರಾಜ್​ ಅವರಿಗೆ ಈ ಸಿನಿಮಾದಲ್ಲಿ ಮಾಸ್​ ಹೀರೋ ಗೆಟಪ್​ ಇರಲಿದೆ ಎಂಬುದು ವಿಶೇಷ. ಆ ಬಗ್ಗೆ ನಿರ್ದೇಶಕ ಪ್ರಸಿದ್ಧ್​ ಮಾತನಾಡಿದ್ದಾರೆ.

ಇದನ್ನೂ ಓದಿ
Image
ಸರ್ಕಾರಿ ಶಾಲೆಗೆ ‘ಕನ್ನಡತಿ’ ಸೀರಿಯಲ್​ ನಟ ಕಿರಣ್​ ರಾಜ್​ ನೆರವಿನ ಹಸ್ತದಿಂದ ಬಂತು ಹೊಸ ಮೆರುಗು
Image
‘ಬಡ್ಡೀಸ್​’ ಚಿತ್ರದಲ್ಲಿ ಆ್ಯಕ್ಷನ್​ ಹೀರೋ ಆಗಿ ಅಬ್ಬರಿಸ್ತಾರೆ ‘ಕನ್ನಡತಿ’ ನಟ ಕಿರಣ್​ ರಾಜ್​; ಜೂನ್​ 24ಕ್ಕೆ ರಿಲೀಸ್​
Image
‘ಕನ್ನಡತಿ’ ಧಾರಾವಾಹಿಗಿಂತಲೂ ಮುಂಚೆ ನಟ ಕಿರಣ್​ ರಾಜ್​ ಈ ಸಿನಿಮಾ ಒಪ್ಪಿಕೊಂಡಿದ್ದು ಯಾಕೆ?
Image
‘ಕನ್ನಡತಿ’ ಹೀರೋ ಕಿರಣ್​ ರಾಜ್​ ದುಡಿಮೆಯ ಶೇ.40ರಷ್ಟು ಹಣ ಬಡವರಿಗೆ ಮೀಸಲು

‘ಕಿರಣ್ ರಾಜ್ ಅವರು ಲವರ್​ ಬಾಯ್​ ರೀತಿ ಫೇಮಸ್​ ಆದವರು. ಅವರಿಗೆ ರಗಡ್ ಲುಕ್ ಸರಿ ಹೊಂದುತ್ತಾ ಅಂತ ಅನೇಕರು ಕೇಳಿದ್ದರು. ಆದರೆ ಮಾಸ್ ಪಾತ್ರಕ್ಕೆ ಬೇಕಾದ ಕಿಕ್ ಬಾಕ್ಸಿಂಗ್, ಮಾರ್ಷಲ್ ಆರ್ಟ್ಸ್ ಮುಂತಾದವುಗಳನ್ನು ಕಿರಣ್ ರಾಜ್ ಅಭ್ಯಾಸ ಮಾಡಿದ್ದಾರೆ. ನನ್ನ ಹಾಗೂ ಕಿರಣ್ ರಾಜ್ ಕಾಂಬಿನೇಶನ್​ನಲ್ಲಿ ಮೂಡಿಬಂದಿರುವ ‘ಭರ್ಜರಿ ಗಂಡು’ ಸಿನಿಮಾ ಸೆಪ್ಟೆಂಬರ್​ನಲ್ಲಿ ಬಿಡುಗಡೆ ಆಗಲಿದೆ. ಆ ಚಿತ್ರದಲ್ಲಿ ಭಾಗಿಯಾಗಿದ್ದ ಬಹುತೇಕ ತಂಡವೇ ಈಗ ‘ಶೇರ್​’ ಚಿತ್ರಕ್ಕಾಗಿ ಕೆಲಸ ಮಾಡುತ್ತಿದೆ’ ಎಂದು ಪ್ರಸಿದ್ಧ್​ ಹೇಳಿದ್ದಾರೆ.

ಆಗಸ್ಟ್​ 22ರಂದು ‘ಶೇರ್​’ ಚಿತ್ರಕ್ಕೆ ಶೂಟಿಂಗ್​ ಆರಂಭ ಆಗಲಿದೆ. ‘ಭರ್ಜರಿ ಗಂಡು’ ಸಿನಿಮಾದಲ್ಲೂ ಸಾಹಸ ದೃಶ್ಯಗಳಲ್ಲಿ ನಟಿಸಿರುವ ಕಿರಣ್​ ರಾಜ್​ ಅವರು ಈಗ ಮತ್ತೆ ಕ್ಯಾಮೆರಾ ಎದುರು ಫೈಟಿಂಗ್​ ಮಾಡುವ ಉತ್ಸಾಹದಲ್ಲಿದ್ದಾರೆ. ಈ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯಾಗಿ ನಟಿ ತನೀಶಾ ಕಾಣಿಸಿಕೊಳ್ಳಲಿದ್ದಾರೆ. ಕಿಟ್ಟಿ ಕೌಶಿಕ್ ಛಾಯಾಗ್ರಹಣ, ಗುಮ್ಮಿನೇನಿ‌ ವಿಜಯ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಮೂಲತಃ ಬೀದರ್​​ನವರಾದ ಸುದರ್ಶನ್ ಸುಂದರರಾಜ್ ಅವರು ವಕೀಲರಾಗಿ ಕೆಲಸ ಮಾಡುತ್ತಿದ್ದಾರೆ. ನಿರ್ದೇಶಕರು ಹೇಳಿದ ಕಥೆ ಇಷ್ಟಪಟ್ಟು ಅವರು ಈ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ