AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ‘ಕಾಂತಾರ 2’ ಶೂಟ್​ಗೆ ದಿನಾಂಕ ನಿಗದಿ? ಇಲ್ಲಿದೆ ರಿಷಬ್ ಶೆಟ್ಟಿ ಸಿನಿಮಾ ಕುರಿತ ಮಾಹಿತಿ

Kantara 2 Movie: ‘ಕಾಂತಾರ’ ಸಿನಿಮಾದ ಬಜೆಟ್ 15 ಕೋಟಿ ರೂಪಾಯಿ ದಾಟಲಿಲ್ಲ. ಆದರೆ, ಇದರ ಗಳಿಕೆ 400 ಕೋಟಿ ರೂಪಾಯಿ ಗಡಿಮುಟ್ಟಿದೆ. ಈ ಚಿತ್ರದ ಬಗ್ಗೆ ಹೊಸ ಅಪ್​ಡೇಟ್ ಸಿಕ್ಕಿದೆ.

Rishab Shetty: ‘ಕಾಂತಾರ 2’ ಶೂಟ್​ಗೆ ದಿನಾಂಕ ನಿಗದಿ? ಇಲ್ಲಿದೆ ರಿಷಬ್ ಶೆಟ್ಟಿ ಸಿನಿಮಾ ಕುರಿತ ಮಾಹಿತಿ
ರಿಷಬ್
Follow us
ರಾಜೇಶ್ ದುಗ್ಗುಮನೆ
|

Updated on:Jun 16, 2023 | 1:41 PM

ರಿಷಬ್ ಶೆಟ್ಟಿ (Rishab Shetty) ನಿರ್ದೇಶಿಸಿ, ನಟಿಸಿದ ‘ಕಾಂತಾರ’ ಸಿನಿಮಾ ಮಾಡಿದ ದಾಖಲೆ ತುಂಬಾನೇ ದೊಡ್ಡದು. ಈ ಚಿತ್ರ ಚಿಕ್ಕ ಬಜೆಟ್​ನಲ್ಲಿ ಸಿದ್ಧಗೊಂಡು ಭರ್ಜರಿ ಕಲೆಕ್ಷನ್ ಮಾಡಿತ್ತು. ಇದಕ್ಕೆ ಪ್ರೀಕ್ವೆಲ್ ಸಿದ್ಧಗೊಳ್ಳುವ ಬಗ್ಗೆ ಈ ಮೊದಲೇ ಘೋಷಣೆ ಆಗಿತ್ತು. ಇದರ ಸ್ಕ್ರಿಪ್ಟ್ ಕೆಲಸದಲ್ಲಿ ರಿಷಬ್ ಶೆಟ್ಟಿ ಬ್ಯುಸಿ ಇದ್ದರು. ಈಗ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್ ಒಂದು ಕೇಳಿ ಬರುತ್ತಿದೆ. ಆಗಸ್ಟ್ ತಿಂಗಳಲ್ಲಿ ಚಿತ್ರಕ್ಕೆ ಮುಹೂರ್ತ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ವಿಚಾರ ಕೇಳಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ.

‘ಕಾಂತಾರ’ ಸಿನಿಮಾದ ಬಜೆಟ್ 15 ಕೋಟಿ ರೂಪಾಯಿ ದಾಟಲಿಲ್ಲ. ಆದರೆ, ಇದರ ಗಳಿಕೆ 400 ಕೋಟಿ ರೂಪಾಯಿ ಗಡಿಮುಟ್ಟಿದೆ. ಈ ಮೂಲಕ ಸಿನಿಮಾದಿಂದ ನಿರ್ಮಾಪಕರು ದೊಡ್ಡ ಮಟ್ಟದ ಲಾಭ ಕಂಡಿದ್ದಾರೆ. ಈ ಕಾರಣಕ್ಕೆ ಚಿತ್ರಕ್ಕೆ ಎರಡನೇ ಪಾರ್ಟ್​ ಮಾಡಲು ರಿಷಬ್ ಶೆಟ್ಟಿ ಮುಂದೆ ಬಂದರು. ಮೂಲಗಳ ಪ್ರಕಾರ ಆಗಸ್ಟ್ 27ರಂದು ಸಿನಿಮಾಗೆ ಮುಹೂರ್ತ ನೆರವೇರುವ ಸಾಧ್ಯತೆ ಇದೆ. ಆ ಬಳಿಕ ಚಿತ್ರತಂಡ ನೇರವಾಗಿ ಶೂಟಿಂಗ್​ಗೆ ಇಳಿಯಲಿದೆ.

‘ಕಾಂತಾರ 2’ ಯಾವ ರೀತಿಯಲ್ಲಿ ಮೂಡಿಬರಬೇಕು ಎನ್ನುವ ಬಗ್ಗೆ ರಿಷಬ್ ಶೆಟ್ಟಿ ಅವರು ಸ್ಪಷ್ಟ ಕಲ್ಪನೆ ಇಟ್ಟುಕೊಂಡಿದ್ದಾರೆ. ಅದೇ ರೀತಿಯಲ್ಲಿ ಸಿನಿಮಾ ಕಟ್ಟಿಕೊಡಲಿದ್ದಾರೆ. ಬಜೆಟ್​ ವಿಚಾರದಲ್ಲಿ ಹೊಂಬಾಳೆ ಫಿಲ್ಮ್ಸ್​ ರಾಜಿ ಆಗುತ್ತಿಲ್ಲ. ಹೀಗಾಗಿ, ಅದ್ದೂರಿಯಾಗಿ ಸಿನಿಮಾ ಮೂಡಿಬರುತ್ತಿದೆ.

‘ನೀವು ನೋಡಿರೋದು ಎರಡನೇ ಭಾಗ. ಮೊದಲ ಭಾಗವನ್ನು ನಾನು ಕಟ್ಟಿಕೊಡುತ್ತಿದ್ದೇನೆ’ ಎಂದು ರಿಷಬ್ ಶೆಟ್ಟಿ ಈ ಮೊದಲು ಹೇಳಿದ್ದರು. ಈ ಮೂಲಕ ಪ್ರೀಕ್ವೆಲ್ ಮಾಡುತ್ತಿರುವ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದರು. ಈಗ ಸಿನಿಮಾ ಶೂಟಿಂಗ್ ಬಗ್ಗೆ ಹೊಸ ಮಾಹಿತಿ ಸಿಕ್ಕಿರುವ ವಿಚಾರ ಅಭಿಮಾನಿಗಳಿಗೆ ಖುಷಿ ತಂದಿದೆ.

ಇದನ್ನೂ ಓದಿ: ‘ಕಾಂತಾರ’ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿಗೆ ಹೆಚ್ಚಾಯ್ತು ದೇವರ ಮೇಲಿನ ಭಕ್ತಿ

‘ಕಾಂತಾರ 2’ ಚಿತ್ರಕ್ಕಾಗಿ ಮಳೆಗಾಲದ ಅವಶ್ಯಕತೆ ಇದೆ ಎನ್ನಲಾಗುತ್ತಿದೆ. ಈ ಕಾರಣದಿಂದಲೇ ಆಗಸ್ಟ್-ಸೆಪ್ಟೆಂಬರ್​ ತಿಂಗಳನ್ನು ರಿಷಬ್​ ಆಯ್ಕೆ ಮಾಡಿಕೊಂಡಿದ್ದಾರೆ. ಈ ಚಿತ್ರದಲ್ಲಿ ಯಾರೆಲ್ಲ ನಟಿಸುತ್ತಾರೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:38 am, Fri, 16 June 23

VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ