Kishore: ದೈವದ ಕುರಿತ ಪೋಸ್ಟ್​ನಿಂದ ಕಿಶೋರ್​ ಟ್ವಿಟರ್​ ಖಾತೆ ಸಸ್ಪೆಂಡ್​ ಆಗಿಲ್ಲ; ಅಸಲಿ ಕಾರಣ ತಿಳಿಸಿದ ನಟ

Kishore Twitter Account: ‘ಟ್ವಿಟರ್ ಅಕೌಂಟ್ ಸಸ್ಪೆಂಡ್ ಆದದ್ದು ನನ್ನ ಯಾವ ಪೋಸ್ಟಿನಿಂದಲೂ ಅಲ್ಲ. ಡಿಸೆಂಬರ್ 20ರಂದು ಹ್ಯಾಕ್ ಮಾಡಲಾಗಿದ್ದರಿಂದ ಎಂದು ತಿಳಿದುಬಂದಿದೆ’ ಅಂತ ಕಿಶೋರ್​ ಸ್ಪಷ್ಟನೆ ನೀಡಿದ್ದಾರೆ.

Kishore: ದೈವದ ಕುರಿತ ಪೋಸ್ಟ್​ನಿಂದ ಕಿಶೋರ್​ ಟ್ವಿಟರ್​ ಖಾತೆ ಸಸ್ಪೆಂಡ್​ ಆಗಿಲ್ಲ; ಅಸಲಿ ಕಾರಣ ತಿಳಿಸಿದ ನಟ
ನಟ ಕಿಶೋರ್
Follow us
TV9 Web
| Updated By: ಮದನ್​ ಕುಮಾರ್​

Updated on:Jan 04, 2023 | 7:02 PM

‘ಕಾಂತಾರ’ (Kantara Movie) ಸಿನಿಮಾದ ನಟ ಕಿಶೋರ್​ ಅವರ ಟ್ವಿಟರ್​ ಖಾತೆ ಸಸ್ಪೆಂಡ್​ ಆಗಿದ್ದರ ಬಗ್ಗೆ ದೊಡ್ಡ ಸುದ್ದಿ ಆಗಿತ್ತು. ಅವರು ದೈವದ ಕುರಿತು ಮಾಡಿದ ಪೋಸ್ಟ್​ ಕಾರಣಕ್ಕಾಗಿ ಟ್ವಿಟರ್​ ಖಾತೆಯನ್ನು ಸಸ್ಪೆಂಡ್​ ಮಾಡಲಾಗಿದೆ ಎಂದು ಅನೇಕರು ನಂಬಿದ್ದಾರೆ. ಆ ಬಗ್ಗೆ ಸ್ವತಃ ಕಿಶೋರ್​ (Kantara Actor Kishore) ಅವರು ಈಗ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಟ್ವಿಟರ್​ ಅಕೌಂಟ್​ ಸಸ್ಪೆಂಡ್​ ಆಗಲು ಕಾರಣ ಏನು ಎಂಬುದನ್ನು ಅವರು ತಿಳಿಸಿದ್ದಾರೆ. ಈ ಕುರಿತು ಅವರು ಫೇಸ್​ಬುಕ್​ ಮತ್ತು ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ. ಕಿಶೋರ್​ ಅವರ ಟ್ವಿಟರ್​ ಖಾತೆ (Kishore Twitter Account) ಮೇಲೆ ಹ್ಯಾಕರ್​ಗಳ ಕಣ್ಣು ಬಿದ್ದಿದೆ. ಅಕೌಂಟ್​ ಸಸ್ಪೆಂಡ್​ ಆಗಲು ಇದು ಮುಖ್ಯ ಕಾರಣ ಎಂದು ಅವರು ತಿಳಿಸಿದ್ದಾರೆ.

‘ಕಾಂತಾರ’ ಸಿನಿಮಾದಲ್ಲಿ ಕಿಶೋರ್​ ಮಾಡಿದ ಪಾತ್ರ ಸಖತ್​ ಹೈಲೈಟ್​ ಆಗಿದೆ. ಅರಣ್ಯಾಧಿಕಾರಿಯಾಗಿ ಅವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ತುಳುನಾಡಿನ ದೈವದ ಬಗ್ಗೆ ತೋರಿಸಲಾಗಿದೆ. ಆ ದೈವಕ್ಕೆ ಅಪಮಾನ ಮಾಡಿದ ಯುವಕನೊಬ್ಬ ರಕ್ತಕಾರಿ ಸತ್ತಿದ್ದಾನೆ ಎಂಬ ಸುದ್ದಿಗೆ ಕಿಶೋರ್​ ಅವರು ಇತ್ತೀಚೆಗೆ ಪ್ರತಿಕ್ರಿಯೆ ನೀಡಿದ್ದರು. ಆದ್ದರಿಂದ ಅವರ ಟ್ವಿಟರ್​ ಅಕೌಂಟ್​ ಸಸ್ಪೆಂಡ್​ ಆಗಿದೆ ಎಂದೇ ಸುದ್ದಿ ಹಬ್ಬಿಸಲಾಗಿತ್ತು. ಆದರೆ ಅದು ನಿಜವಲ್ಲ ಎಂದು ಕಿಶೋರ್​ ಈಗ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: CM of Karnataka: ಮುಖ್ಯಮಂತ್ರಿಯ ಟ್ವಿಟರ್​ ಖಾತೆಯನ್ನೇ ಹ್ಯಾಕ್​ ಮಾಡಿದ ಕಿಡಿಗೇಡಿಗಳು

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

‘ಅನವಶ್ಯಕ ಊಹಾಪೋಹಗಳನ್ನು ತಡೆಯಲಿಕ್ಕಾಗಿಯಷ್ಟೆ. ನನ್ನ ಟ್ವಿಟರ್ ಅಕೌಂಟ್ ಸಸ್ಪೆಂಡ್ ಆದದ್ದು ನನ್ನ ಯಾವ ಪೋಸ್ಟಿನಿಂದಲೂ ಅಲ್ಲ. ಡಿಸೆಂಬರ್ 20ನೇ ತಾರೀಕು 2022ರಂದು ಹ್ಯಾಕ್ ಮಾಡಲಾಗಿದ್ದರಿಂದ ಎಂದು ತಿಳಿದುಬಂದಿದೆ. ತಕ್ಕ ಕ್ರಮ ಕೈಗೊಳ್ಳುವ ಭರವಸೆ ಟ್ವಿಟರ್ ಕೂಡ ಕೊಟ್ಟಿದೆ. ಎಲ್ಲರ ಕಾಳಜಿಗೆ ಧನ್ಯವಾದಗಳು’ ಎಂದು ಕಿಶೋರ್​ ಈಗ ಪೋಸ್ಟ್​ ಮಾಡಿದ್ದಾರೆ.

ವೈರಲ್​ ಆಗಿತ್ತು ಕಿಶೋರ್​ ಪೋಸ್ಟ್​:

‘ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ? ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಅನ್ನೊ ವೈರಲ್ ವಿಡಿಯೋ ವಾಟ್ಸಾಪಿನಲ್ಲಿ ಹರಿದು ಬಂತು. ಆ ಸಿನಿಮಾದ ಭಾಗವಾಗಿ ಈ ಥರದ ತಪ್ಪು ತಿಳುವಳಿಕೆಗಳನ್ನು ತಿದ್ದುವುದು ನನ್ನ ಬಾಧ್ಯತೆ ಎಂದು ನಂಬಿ ಬರೆಯುತ್ತಿದ್ದೇನೆ. ಕೊಲ್ಲುವ ಶಕ್ತಿಯಿರುವ  ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಏಕೆ ಇರುವುದಿಲ್ಲ? ಏಕೆಂದರೆ ಕತೆಗಾರನಿಗೆ ಕಥೆ ಮುಂದೆ ಸಾಗುವುದಿಲ್ಲ. ಅವನ ಮಟ್ಟಿಗೆ ಒಂದು ಕಥೆಯನ್ನು ಪರಿಣಾಮಕಾರಿಯಾಗಿ ಹೇಳುವ ತನ್ನ ಉದ್ದೇಶ ಸಾಧನೆಗೆ ದೈವವೊ, ದೆವ್ವವೊ ಒಂದು ಸಾಧನವಷ್ಟೆ. ಸಿನಿಮಾವಾಗಲಿ ಪುರಾಣವಾಗಲಿ. ದೈವವೋ ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿದರೆ ಉಂಟು ನಂಬದಿದ್ದರೆ ಇಲ್ಲ. ಹಾಗೆಂದು ಕಷ್ಟಕಾಲದಲ್ಲಿ ಮನಸ್ಥೈರ್ಯ ಕೊಡುವ ನಂಬಿಕೆಗಳನ್ನು ಅವಮಾನಿಸುವ ಅವಶ್ಯಕತೆಯೂ ಇಲ್ಲ. ಕಿಡಿಗೇಡಿಗಳನ್ನು ಶಿಕ್ಷಿಸಲು ಕಾನೂನಿದೆ. ಅವರವರ ನಂಬಿಕೆ ಅವರಿಗೆ. ನಂಬಿಕೆ ಇರಲಿ ಮೂಢನಂಬಿಕೆ ಬೇಡ. ಅದರ ಹೆಸರಲ್ಲಿ ದ್ವೇಷವೂ’ ಎಂದು ಕಿಶೋರ್​ ಮಾಡಿದ ಪೋಸ್ಟ್​ ವೈರಲ್​ ಆದ ಬೆನ್ನಲ್ಲೇ ಟ್ವಿಟರ್​ ಖಾತೆಯ ಸಸ್ಪೆಂಡ್​ ಕುರಿತು ಊಹಾಪೋಹಗಳು ಹುಟ್ಟಿಕೊಂಡವು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:02 pm, Wed, 4 January 23