Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಆಸ್ಕರ್​ಗೆ ಕಾಂತಾರ​ ಪೈಪೋಟಿ, ಕಮಲ್​ ಪತ್ರ ಸೇರಿದಂತೆ ಅನೇಕ ವಿಚಾರಕ್ಕೆ ರಿಷಬ್​ ಶೆಟ್ಟಿ ಪ್ರತಿಕ್ರಿಯೆ

Chikkaballapur Utsava | Rishab Shetty Interview: ಚಿಕ್ಕಬಳ್ಳಾಪುರ ಉತ್ಸವದಲ್ಲಿ ನಟ ರಿಷಬ್​ ಶೆಟ್ಟಿ ಭಾಗಿ ಆಗಿದ್ದಾರೆ. ಈ ವೇಳೆ ಅವರು ಟಿವಿ9 ಜೊತೆ ಎಕ್ಸ್​ಕ್ಲೂಸಿವ್​ ಆಗಿ ಮಾತನಾಡಿದ್ದಾರೆ.

Rishab Shetty: ಆಸ್ಕರ್​ಗೆ ಕಾಂತಾರ​ ಪೈಪೋಟಿ, ಕಮಲ್​ ಪತ್ರ ಸೇರಿದಂತೆ ಅನೇಕ ವಿಚಾರಕ್ಕೆ ರಿಷಬ್​ ಶೆಟ್ಟಿ ಪ್ರತಿಕ್ರಿಯೆ
ಚಿಕ್ಕಬಳ್ಳಾಪುರ ಉತ್ಸವದ ವೇಳೆ ಮಾತನಾಡಿದ ರಿಷಬ್ ಶೆಟ್ಟಿ
Follow us
TV9 Web
| Updated By: ಮದನ್​ ಕುಮಾರ್​

Updated on:Jan 13, 2023 | 9:45 PM

ನಟ ರಿಷಬ್​ ಶೆಟ್ಟಿ (Rishab Shetty) ಅವರು ‘ಕಾಂತಾರ’ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಸೂಪರ್​ ಹಿಟ್​ ಆದ ಬಳಿಕ ಅವರ ಡಿಮ್ಯಾಂಡ್​ ಹೆಚ್ಚಿತು. ಅನೇಕ ಸಮಾರಂಭಗಳಿಗೆ ಅವರು ಅತಿಥಿಯಾಗಿ ತೆರಳುತ್ತಿದ್ದಾರೆ. ಇಂದು (ಜ.13) ಚಿಕ್ಕಬಳ್ಳಾಪುರ ಉತ್ಸವದಲ್ಲಿ (Chikkaballapur Festival) ರಿಷಬ್​ ಶೆಟ್ಟಿ ಭಾಗಿ ಆಗಿದ್ದಾರೆ. ಈ ವೇಳೆ ‘ಟಿವಿ9 ಕನ್ನಡ’ದ ಜೊತೆ ಮಾತಿಗೆ ಸಿಕ್ಕ ಅವರು ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ‘ಕಾಂತಾರ’ (Kantara Movie) ಸಿನಿಮಾದ ಗೆಲುವು, ಆಸ್ಕರ್​ ಪ್ರಶಸ್ತಿ ಸ್ಪರ್ಧೆಗೆ ಅರ್ಹತೆ ಪಡೆದಿದ್ದು, ಮುಂದಿನ ಪ್ಲ್ಯಾನ್​.. ಹೀಗೆ ಹಲವು ವಿಷಯಗಳ ಬಗ್ಗೆ ಅವರು ಮಾತನಾಡಿದ್ದಾರೆ. ‘ಚಿಕ್ಕಬಳ್ಳಾಪುರ ಉತ್ಸವದಲ್ಲಿ ನಾವು ಭಾಗಿ ಆಗುತ್ತಿರುವುದು ಖುಷಿಯ ಸಂಗತಿ’ ಎಂದು ಅವರು ಹೇಳಿದ್ದಾರೆ.

ಕಮಲ್​ ಹಾಸನ್​ ಪತ್ರಕ್ಕೆ ರಿಷಬ್​ ಪ್ರತಿಕ್ರಿಯೆ:

‘ಕಾಂತಾರ’ ಚಿತ್ರಕ್ಕೆ ಕಮಲ್​ ಹಾಸನ್​, ರಜನಿಕಾಂತ್​ ಮುಂತಾದ ದಿಗ್ಗಜ ನಟರು ಮೆಚ್ಚುಗೆ ಸೂಚಿಸಿದ್ದಾರೆ. ಕಮಲ್​ ಹಾಸನ್​ ಅವರು ಪತ್ರ ಬರೆದಿದ್ದಾರೆ. ಆ ಬಗ್ಗೆ ರಿಷಬ್​ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ‘ಈ ನಟರಿಂದ ನನಗೆ ದೊಡ್ಡ ಸ್ಫೂರ್ತಿ ಸಿಕ್ಕಿದೆ. ಅವರ ಸಿನಿಮಾಗಳಿಗೆ ನಾನು ಅಭಿಮಾನಿಯಾಗಿ ಚಿತ್ರರಂಗಕ್ಕೆ ಬಂದೆ. ನಾವು ಆರಾಧಿಸುವ ನಟರಿಂದ ಮೆಚ್ಚುಗೆ ಸಿಕ್ಕಾಗ ಖುಷಿ ಆಗುತ್ತದೆ. ಮುಂದಿನ ಕೆಲಸಕ್ಕೆ ಒಂದು ಪಾಸಿಟಿವ್​ ಶಕ್ತಿ ಸಿಕ್ಕಂತೆ ಆಗಿದೆ’ ಎಂದು ರಿಷಬ್​ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: Kamal Haasan: ‘ನಿಮ್ಮ ಮುಂದಿನ ಚಿತ್ರದಿಂದ ಕಾಂತಾರ ಸಿನಿಮಾ ದಾಖಲೆ ಮುರಿಯಿರಿ’; ರಿಷಬ್​ ಶೆಟ್ಟಿಗೆ ಕಮಲ್​ ಹಾಸನ್​ ಸಲಹೆ

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

400 ಕೋಟಿ ರೂಪಾಯಿ ನಿರೀಕ್ಷೆ ಇರಲಿಲ್ಲ:

‘ಕಾಂತಾರ’ ಸಿನಿಮಾ ವಿಶ್ವಾದ್ಯಂತ 400 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿತು. ಆ ಬಗ್ಗೆ ನಿರೀಕ್ಷೆ ಇತ್ತಾ ಎಂಬ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ. ‘ನಾನು ಮೊದಲ ಸಿನಿಮಾದಿಂದಲೂ ನಿರೀಕ್ಷೆ ಇಟ್ಟುಕೊಂಡವನಲ್ಲ. ಕೆಲಸದ ಮೇಲೆ ನನ್ನ ಗಮನ ಇರುತ್ತದೆ’ ಎಂದು ರಿಷಬ್​ ಹೇಳಿದ್ದಾರೆ.

ಆಸ್ಕರ್​ ರೇಸ್​ ಬಗ್ಗೆ ರಿಷಬ್​ ಮಾತು:

‘ನಮಗೆ ನಮ್ಮ ಸರ್ಕಾರ ನೀಡುವ ರಾಷ್ಟ್ರ ಪ್ರಶಸ್ತಿಯೇ ದೊಡ್ಡ ಮನ್ನಣೆ. ಆಸ್ಕರ್​ ರೀತಿಯ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ಬಗ್ಗೆಯೂ ಗೌರವ ಇದೆ. ಅದಕ್ಕೆ ಅರ್ಹತೆ ಪಡೆದ ಸಿನಿಮಾಗಳಲ್ಲಿ ನಮ್ಮ ಸಿನಿಮಾ ಕೂಡ ಇದೆ ಎಂಬುದು ತಿಳಿದಾಗ ಖುಷಿ ಆಗುತ್ತದೆ. ನಾವು ಸಿನಿಮಾ ಮಾಡೋಕೆ ಆಗಲ್ಲ. ತಾನಾಗಿಯೇ ಆಗುತ್ತದೆ’ ಎಂದು ರಿಷಬ್​ ಶೆಟ್ಟಿ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:45 pm, Fri, 13 January 23

ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ