Top 5 Googled Films in India: ‘ಗೂಗಲ್​ ಟಾಪ್​ 5’ ಪಟ್ಟಿಯಲ್ಲಿ ಕಾಂತಾರ, ಕೆಜಿಎಫ್​ 2; ಇಡೀ ದೇಶಕ್ಕೆ ಗೊತ್ತು ಕನ್ನಡದ ತಾಕತ್ತು

KGF 2 | Kantara: 2022ರಲ್ಲಿ ಜನರು ಅತಿ ಹೆಚ್ಚು ಹುಡುಕಿದ ಭಾರತೀಯ ಸಿನಿಮಾಗಳ ಪಟ್ಟಿ ಲಭ್ಯವಾಗಿದೆ. ಟಾಪ್​ 5 ಸಿನಿಮಾಗಳಲ್ಲಿ ಕನ್ನಡದ ಎರಡು ಚಿತ್ರಗಳು ಇವೆ ಎಂಬುದು ವಿಶೇಷ.

Top 5 Googled Films in India: ‘ಗೂಗಲ್​ ಟಾಪ್​ 5’ ಪಟ್ಟಿಯಲ್ಲಿ ಕಾಂತಾರ, ಕೆಜಿಎಫ್​ 2; ಇಡೀ ದೇಶಕ್ಕೆ ಗೊತ್ತು ಕನ್ನಡದ ತಾಕತ್ತು
‘ಕೆಜಿಎಫ್: ಚಾಪ್ಟರ್ 2’, ‘ಕಾಂತಾರ’
Follow us
TV9 Web
| Updated By: ಮದನ್​ ಕುಮಾರ್​

Updated on:Dec 08, 2022 | 8:40 AM

2022ರ ವರ್ಷ ಕನ್ನಡ ಚಿತ್ರರಂಗದ ಪಾಲಿಗೆ ವಿಶೇಷವಾಗಿದೆ. ಈ ವರ್ಷ ಕನ್ನಡದ ಹಲವು ಸಿನಿಮಾಗಳು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿವೆ. ಅದರಲ್ಲೂ ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಹಾಗೂ ರಿಷಬ್​ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾಗಳು ಮಾಡಿದ ಮೋಡಿಗೆ ಸಾಟಿಯೇ ಇಲ್ಲ. ಇಡೀ ವಿಶ್ವವೇ ಕರುನಾಡಿನ ಕಡೆಗೆ ತಿರುಗಿ ನೋಡುವಂತಹ ಸಾಧನೆಯನ್ನು ಈ ಚಿತ್ರಗಳು ಮಾಡಿವೆ. ಈ ಎರಡೂ ಸಿನಿಮಾಗಳು ಮೂಡಿಬಂದಿದ್ದು ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಿಂದ ಎಂಬುದು ವಿಶೇಷ. ಗೂಗಲ್​ ಹುಡುಕಾಟದಲ್ಲಿಯೂ ‘ಕಾಂತಾರ’ (Kantara) ಮತ್ತು ‘ಕೆಜಿಎಫ್​ 2’ ಸಿನಿಮಾಗಳು ಸದ್ದು ಮಾಡಿವೆ. 2022ರಲ್ಲಿ ಜನರು ಅತಿ ಹೆಚ್ಚು ಸರ್ಜ್​ ಮಾಡಿದ ಭಾರತದ ಟಾಪ್ 5 ಸಿನಿಮಾಗಳಲ್ಲಿ (Top Five Googled Movies in India) ಈ ಎರಡು ಚಿತ್ರಗಳು ಸ್ಥಾನ ಪಡೆದುಕೊಂಡಿವೆ.

ಈ ವರ್ಷ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ. ಇಡೀ ವರ್ಷದ ಆಗುಹೋಗುಗಳನ್ನು ಜನರು ಮೆಲುಕು ಹಾಕುತ್ತಿದ್ದಾರೆ. ಅದೇ ರೀತಿ ಗೂಗಲ್​ ಕೂಡ ತನ್ನ ಕೆಲವು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ವರ್ಷ ಜನರು ಅತಿ ಹೆಚ್ಚು ಹುಡುಕಿದ ಭಾರತೀಯ ಸಿನಿಮಾಗಳ ಪಟ್ಟಿ ಲಭ್ಯವಾಗಿದೆ. 5 ಸಿನಿಮಾಗಳಲ್ಲಿ ಕನ್ನಡದ ಎರಡು ಚಿತ್ರಗಳು ಇವೆ ಎಂಬುದು ವಿಶೇಷ.

ಮೊದಲ ಸ್ಥಾನದಲ್ಲಿ ರಣಬೀರ್​ ಕಪೂರ್​-ಆಲಿಯಾ ಭಟ್​ ಜೋಡಿಯ ‘ಬ್ರಹ್ಮಾಸ್ತ್ರ’ ಸಿನಿಮಾ ಇದೆ. ಈ ಚಿತ್ರ ಕೂಡ ಗಲ್ಲಾಪೆಟ್ಟಿಗೆಯಲ್ಲಿ ಒಳ್ಳೆಯ ಕಮಾಯಿ ಮಾಡಿದೆ. ಸೆಪ್ಟೆಂಬರ್​ 9ರಂದು ಬಿಡುಗಡೆಯಾದ ಈ ಚಿತ್ರಕ್ಕೆ ಅಯಾನ್​ ಮುಖರ್ಜಿ ನಿರ್ದೇಶನವಿದೆ. ಈ ವರ್ಷ ಸೋತು ಸೊರಗಿದ್ದ ಬಾಲಿವುಡ್​ಗೆ​ ಹೊಸ ಚೈತನ್ಯ ನೀಡಿದ ಸಿನಿಮಾ ಇದು.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಇದನ್ನೂ ಓದಿ: Kantara Hindi OTT: ‘ಕಾಂತಾರ’ ಹಿಂದಿ ವರ್ಷನ್​ ಒಟಿಟಿ ರಿಲೀಸ್​ ಯಾವಾಗ? ಪ್ರಶ್ನೆಗಳಿಗೆ ಸುಸ್ತಾಗಿ ಡೇಟ್​ ತಿಳಿಸಿದ ರಿಷಬ್​ ಶೆಟ್ಟಿ

ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಎರಡನೇ ಸ್ಥಾನ ಪಡೆದುಕೊಂಡಿದೆ. ಮೂರನೇ ಸ್ಥಾನದಲ್ಲಿ ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಇದೆ. ನಾಲ್ಕನೇ ಸ್ಥಾನವನ್ನು ‘ಕಾಂತಾರ’ ಚಿತ್ರ ಪಡೆದುಕೊಂಡಿದ್ದರೆ, ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ 5ನೇ ಸ್ಥಾನದಲ್ಲಿದೆ.

ಇದನ್ನೂ ಓದಿ: Rishab Shetty: ‘ಕಾಂತಾರ’ ಹೀರೋ ರಿಷಬ್​ ಶೆಟ್ಟಿ ಜೊತೆ ಸೆಲ್ಫಿಗೆ ಮುಗಿಬಿದ್ದ ಕಲಬುರಗಿ ಅಭಿಮಾನಿಗಳು

ಕನ್ನಡದ ಸಿನಿಮಾಗಳು ಇಂಥ ಸಾಧನೆ ಮಾಡಿರುವುದು ಕರುನಾಡಿನ ಎಲ್ಲರಿಗೂ ಹೆಮ್ಮೆ ತಂದಿದೆ. ಆ ಮೂಲಕ ಕನ್ನಡದ ಗತ್ತು ಇಡೀ ದೇಶಕ್ಕೆ ಗೊತ್ತು ಎಂಬಂತಾಗಿದೆ. ಇಷ್ಟೇ ಅಲ್ಲದೇ, ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಜಾಗತಿಕ ಮಟ್ಟದ ‘ಟಾಪ್​ 10’ ಪಟ್ಟಿಯಲ್ಲಿ 7ನೇ ಸ್ಥಾನ ಪಡೆದುಕೊಂಡು ಹವಾ ಮಾಡುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:40 am, Thu, 8 December 22

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ