‘ಕೆಜಿಎಫ್ 2’ ಜತೆ ಅಟ್ಯಾಚ್ ಆಗಿ ಬರಲಿದೆ ಎರಡು ಕನ್ನಡ ಚಿತ್ರಗಳ ಟೀಸರ್; ಗುಡ್​ ನ್ಯೂಸ್ ಕೊಟ್ಟ ಹೊಂಬಾಳೆ ಫಿಲ್ಮ್ಸ್​

ರಿಷಬ್​ ನಟನೆಯ ಜತೆಗೆ, ನಿರ್ದೇಶನದ ಜವಾಬ್ದಾರಿ ಹೊತ್ತಿರುವ ‘ಕಾಂತಾರ’ ಸಿನಿಮಾದ ಟೀಸರ್ ಕೂಡ ರಿಲೀಸ್ ಆಗುತ್ತಿದೆ. ‘ದಂತಕಥೆಯ ಮೊದಲ ಆಟ, ಕಾಂತಾರಾದ ಮೊದಲ ನೋಟ ನಾಳೆ ರಾತ್ರಿ 10:44ಕ್ಕೆ ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್​​ನಲ್ಲಿ’ ಎಂದು ಬರೆಯಲಾಗಿದೆ.

‘ಕೆಜಿಎಫ್ 2’ ಜತೆ ಅಟ್ಯಾಚ್ ಆಗಿ ಬರಲಿದೆ ಎರಡು ಕನ್ನಡ ಚಿತ್ರಗಳ ಟೀಸರ್; ಗುಡ್​ ನ್ಯೂಸ್ ಕೊಟ್ಟ ಹೊಂಬಾಳೆ ಫಿಲ್ಮ್ಸ್​
ಜಗ್ಗೇಶ್-ಕಾಂತಾರಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 12, 2022 | 10:04 PM

‘ಕೆಜಿಎಫ್​ ಚಾಪ್ಟರ್​ 2’ ಸಿನಿಮಾ (KGF Chapter 2) ಏಪ್ರಿಲ್​ 14ರಂದು ತೆರೆಗೆ ಬರುತ್ತಿದ್ದು, ಈ ಚಿತ್ರವನ್ನು ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ. ಕನ್ನಡದ ಚಿತ್ರವೊಂದು ಇಷ್ಟು ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿರುವುದು ಇದೇ ಮೊದಲು. ಈಗ ‘ಕೆಜಿಎಫ್​ 2’ ತೆರೆಗೆ ಬರುವುದಕ್ಕೂ ಮೊದಲು ಎರಡು ಗುಡ್​ನ್ಯೂಸ್ ನೀಡಿದೆ ಹೊಂಬಾಳೆ ಫಿಲ್ಮ್ಸ್​ (Hombale Films). ಈ ನಿರ್ಮಾಣ ಸಂಸ್ಥೆ ಅಡಿಯಲ್ಲಿ ರಿಲೀಸ್​​ ಆಗುತ್ತಿರುವ ಎರಡು ಚಿತ್ರಗಳ ಟೀಸರ್ ಮಾರ್ಚ್​ 13 ರಾತ್ರಿ 10.45ಕ್ಕೆ ರಿಲೀಸ್ ಆಗಲಿದೆ. ಈ ಟೀಸರ್​ಗಳು ‘ಕೆಜಿಎಫ್​ 2’ ಜತೆ ಅಟ್ಯಾಚ್ ಆಗಿರಲಿದೆ.

ದೊಡ್ಡದೊಡ್ಡ ಚಿತ್ರಗಳು ರಿಲೀಸ್​ ಆಗುವಾಗ ಮುಂಬರುವ ಸಿನಿಮಾಗಳ ಟ್ರೇಲರ್ ಅಥವಾ ಟೀಸರ್​ಗಳನ್ನು ಇದೇ ರೀತಿ ಅಟ್ಯಾಚ್​ ಮಾಡಿ ರಿಲೀಸ್ ಮಾಡುವ ಪದ್ಧತಿ ನಡೆದುಕೊಂಡುಬಂದೇ ಇದೆ. ಮಾರ್ಚ್​ 17ರಂದು ತೆರೆಗೆ ಬಂದ ‘ಜೇಮ್ಸ್’ ಸಿನಿಮಾದ ಜತೆಗೆ ‘ಬೈರಾಗಿ’ ಸಿನಿಮಾದ ಟೀಸರ್​ ಪ್ರಸಾರಗೊಂಡಿತ್ತು. ಅದೇ ರೀತಿ ‘ಕೆಜಿಎಫ್​ 2’ ಜತೆಗೆ ರಿಷಬ್ ಶೆಟ್ಟಿ ನಟನೆಯ ‘ಕಾಂತಾರಾ’ ಹಾಗೂ ಸಂತೋಷ್ ಆನಂದ್​ರಾಮ್​ ಅಭಿನಯದ ‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾದ ಟೀಸರ್ ಅಟ್ಯಾಚ್ ಆಗಿರಲಿದೆ.

‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾದಲ್ಲಿ ಜಗ್ಗೇಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಂತೋಷ್​ ಆನಂದ್​ರಾಮ್​ ನಿರ್ದೇಶನ ಸಿನಿಮಾಗಿದೆ. ಜಗ್ಗೇಶ್​ ಬಾಣಸಿಗನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಲುಕ್​ ಅಭಿಮಾನಿಗಳಿಗೆ ಇಷ್ಟವಾಗಿದೆ. ಈಗ ಟೀಸರ್ ಮೂಲಕ ಸಿನಿಮಾದ ಝಲಕ್ ಸಿಗಲಿದೆ. ‘ಅಸಹಾಯಕ ಹಯವಧನನ ಸ್ವಸಹಾಯ ಪದ್ಧತಿಯ ಅನಾವರಣ’ ಎನ್ನುವ ಕ್ಯಾಪ್ಶನ್​ನೊಂದಿಗೆ ಪೋಸ್ಟರ್​ ಪೋಸ್ಟ್​ ಮಾಡಲಾಗಿದೆ.

ರಿಷಬ್​ ನಟನೆಯ ಜತೆಗೆ, ನಿರ್ದೇಶನದ ಜವಾಬ್ದಾರಿ ಹೊತ್ತಿರುವ ‘ಕಾಂತಾರ’ ಸಿನಿಮಾದ ಟೀಸರ್ ಕೂಡ ರಿಲೀಸ್ ಆಗುತ್ತಿದೆ. ‘ದಂತಕಥೆಯ ಮೊದಲ ಆಟ, ಕಾಂತಾರಾದ ಮೊದಲ ನೋಟ ನಾಳೆ ರಾತ್ರಿ 10:44ಕ್ಕೆ ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್​​ನಲ್ಲಿ’ ಎಂದು ಹೊಂಬಾಳೆ ಫಿಲ್ಮ್ಸ್​ ಪೋಸ್ಟ್ ಮಾಡಿದೆ.

ಇದನ್ನೂ ಓದಿ: ‘ಗಂಧದ ಗುಡಿ ಬಗ್ಗೆ ನೀವು ಟ್ವೀಟ್ ಮಾಡಬೇಕು’; ಪುನೀತ್ ಹೇಳಿದ ಮಾತು ನೆನಪಿಸಿಕೊಂಡ ಯಶ್

ಕರ್ನಾಟಕದ ಯಾವ ನಗರದಲ್ಲಿ ಎಷ್ಟಿದೆ ‘ಕೆಜಿಎಫ್ 2’ ಟಿಕೆಟ್ ದರ? ಇಲ್ಲಿದೆ ವಿವರ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ