‘ಕಾಂತಾರ: ಚಾಪ್ಟರ್ 1’ ವಿಶ್ವ ಬಾಕ್ಸ್ ಆಫೀಸ್ ಲೆಕ್ಕ ನೀಡಿದ ಹೊಂಬಾಳೆ ಫಿಲ್ಮ್ಸ್; ದಾಖಲೆ ಮೇಲೆ ದಾಖಲೆ
‘ಕಾಂತಾರ: ಚಾಪ್ಟರ್ 1’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದೆ. ಹೊಂಬಾಳೆ ಫಿಲ್ಮ್ಸ್ ನೀಡಿರುವ ಅಧಿಕೃತ ಮಾಹಿತಿ ಪ್ರಕಾರ, ಚಿತ್ರ ಮೂರು ವಾರಗಳಲ್ಲಿ 818 ಕೋಟಿ ರೂಪಾಯಿ ಗಳಿಕೆ ಮಾಡಿದೆ. ದೀಪಾವಳಿ ರಜೆಗಳ ಲಾಭ ಪಡೆದ ಈ ಚಿತ್ರ 'ಕೆಜಿಎಫ್ 2' ನಂತರ ಅತಿ ಹೆಚ್ಚು ಗಳಿಕೆ ಮಾಡಿದ ಕನ್ನಡದ ಸಿನಿಮಾ ಇದಾಗಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ (Kantara: Chapter 1) ಭಾರತದ ಬಾಕ್ಸ್ ಆಫೀಸ್‌ನಲ್ಲಿ 600 ಕೋಟಿ ರೂಪಾಯಿ ಗಳಿಕೆ ಮಾಡುವ ಸನಿಹದಲ್ಲಿ ಇದೆ. ಈಗ ವಿಶ್ವ ಬಾಕ್ಸ್ ಆಫೀಸ್ ಲೆಕ್ಕದ ಬಗ್ಗೆ ತಂಡದ ಕಡೆಯಿಂದ ಅಧಿಕೃತ ಮಾಹಿತಿ ಸಿಕ್ಕಿದೆ. ಈ ಸಿನಿಮಾ ಬರೋಬ್ಬರಿ 800 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ ಎಂದು ಹೊಂಬಾಳೆ ಫಿಲ್ಮ್ಸ್ ಹೇಳಿದೆ. ಈ ಮೂಲಕ ಚಿತ್ರ ಹಲವು ದಾಖಲೆಗಳನ್ನು ಈ ಚಿತ್ರ ಉಡೀಸ್ ಮಾಡಿದೆ.
‘ಕಾಂತಾರ: ಚಾಪ್ಟರ್ 1’ ಚಿತ್ರ ಅಕ್ಟೊಬರ್ 22ರಂದು ರಿಲೀಸ್ ಆಯಿತು. ಈ ಸಿನಿಮಾ ಬಿಡುಗಡೆ ಆಗಿ ಮೂರು ವಾರಗಳು ಕಳೆದಿವೆ. ಈ ಸಂದರ್ಭದಲ್ಲಿ ಹೊಂಬಾಳೆ ಫಿಲ್ಮ್ಸ್ ಅಧಿಕೃತ ಲೆಕ್ಕಾಚಾರದೊಂದಿಗೆ ಜನರ ಎದುರು ಬಂದಿದೆ. ಈ ಸಿನಿಮಾ ಮುರು ವಾರಗಳಲ್ಲಿ 818 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ಹೇಳಿದೆ. ಕಳೆದ ವಾರವೂ ಹೊಂಬಾಳೆ ಫಿಲ್ಮ್ಸ್ ಗಳಿಕೆ ಲೆಕ್ಕ ನೀಡಿತ್ತು. ಈ ಸಂದರ್ಭದಲ್ಲಿ 700+ ಕೋಟಿ ರೂಪಾಯಿ ಗಳಿಕೆ ಆಗಿದ್ದಾಗಿ ಹೇಳಿತ್ತು. ಅಂದರೆ ಕಳೆದ ಒಂದು ವಾರದಲ್ಲಿ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದಂತೆ ಆಗಿದೆ. ‘ಕೆಜಿಎಫ್ 2’ ಬಳಿಕ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರ ಎಂಬ ಹೆಗ್ಗಳಿಕೆ ಈ ಸಿನಿಮಾಗೆ ಸಿಕ್ಕಿದೆ.
ಇದನ್ನೂ ಓದಿ: ಮೊದಲ ಬಾರಿಗೆ ಅತೀ ಕಡಿಮೆ ಕಲೆಕ್ಷನ್ ಮಾಡಿದ ‘ಕಾಂತಾರ: ಚಾಪ್ಟರ 1’; ಮುಂದಿದೆ ದೊಡ್ಡ ಸವಾಲು
‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ದೀಪಾವಳಿ ಸಹಕಾರಿ ಆಗಿದೆ. ದೀಪಾವಳಿ ಸಂದರ್ಭದಲ್ಲಿ ಸಾಲು ಸಾಲು ರಜೆಗಳು ಇದ್ದಿದ್ದರಿಂದ ಸಿನಿಮಾ ಭಾರತದ ಬಾಕ್ಸ್ ಆಫೀಸ್‌ನಲ್ಲಿ ಡಬಲ್ ಡಿಜಿಟ್ ಕಲೆಕ್ಷನ್ ಮಾಡಿದೆ. ಸದ್ಯ ಕನ್ನಡದ ಜೊತೆಗೆ ಪರಭಾಷೆಯಲ್ಲೂ ಸಿನಿಮಾ ಅಬ್ಬರಿಸುತ್ತಾ ಇದೆ.
ಹಿಂದಿಯಲ್ಲೇ ಮೇಲುಗೈ
ಕನ್ನಡದ ಸಿನಿಮಾಗಳಿಗೆ ಪರಭಾಷೆಯಲ್ಲೂ ಬೇಡಿಕೆ ಬಂದಿದೆ ಎಂಬುದಕ್ಕೆ ‘ಕಾಂತಾರ: ಚಾಪ್ಟರ್ 1’ ಒಳ್ಳೆಯ ಉದಾಹರಣೆ. ಈ ಸಿನಿಮಾ ವೀಕ್ಷಣೆಗೆ ಬಾಲಿವುಡ್ನವರೂ ಕಾದಿದ್ದರು. ಈ ಸಿನಿಮಾ ಹಿಂದಿ ಭಾಷೆಯಲ್ಲಿ ಕನ್ನಡಕ್ಕಿಂತ ಹೆಚ್ಚಿನ ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ. ಭಾಷಾವಾರು ಲೆಕ್ಕವನ್ನು ಹೊಂಬಾಳೆ ಫಿಲ್ಮ್ಸ್ ನೀಡಲಿ ಎಂದು ಫ್ಯಾನ್ಸ್ ಕಾಯುತ್ತಾ ಇದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.




