‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್ ಅಬ್ಬರಕ್ಕೆ ಬಾಕ್ಸ್ ಆಫೀಸ್ ಶೇಕ್; ‘ಪಠಾಣ್’ ದಾಖಲೆಯೇ ಉಡೀಸ್

ರಿಷಬ್ ಶೆಟ್ಟಿ ನಟನೆಯ 'ಕಾಂತಾರ: ಚಾಪ್ಟರ್ 1' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಭಾರಿ ಯಶಸ್ಸು ಕಂಡಿದೆ. ಮೊದಲ ದಿನವೇ ಶಾರುಖ್ ಖಾನ್ ನಟನೆಯ'ಪಠಾಣ್' ಚಿತ್ರದ ದಾಖಲೆ ಮುರಿದಿದೆ. ತೆಲುಗು ರಾಜ್ಯಗಳಲ್ಲಿ ಬ್ಯಾನ್ ಕೂಗಿದ್ದರೂ, ಹೈದರಾಬಾದ್‌ನಲ್ಲಿ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಈ ಮೂಲಕ ರಿಷಬ್ ಶೆಟ್ಟಿ ಮತ್ತೊಂದು ದೊಡ್ಡ ಗೆಲುವು ಸಾಧಿಸಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್ ಅಬ್ಬರಕ್ಕೆ ಬಾಕ್ಸ್ ಆಫೀಸ್ ಶೇಕ್; ‘ಪಠಾಣ್’ ದಾಖಲೆಯೇ ಉಡೀಸ್
ಕಾಂತಾರ: ಚಾಪ್ಟರ್ 1

Updated on: Oct 03, 2025 | 6:58 AM

ರಿಷಬ್ ಶೆಟ್ಟಿ (Rishab Shetty) ನಟನೆಯ ಕಲೆಕ್ಷನ್ ಅಬ್ಬರಕ್ಕೆ ಇಡೀ ಬಾಕ್ಸ್ ಆಫೀಸ್ ಶೇಕ್ ಆಗಿದೆ. ಈ ಚಿತ್ರ ಎಲ್ಲರ ಊಹೇಗೂ ಮೀರಿದ ಕಲೆಕ್ಷನ್ ಮಾಡಿದೆ. ಈ ಚಿತ್ರದ ಅಬ್ಬರಕ್ಕೆ ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಬಾಕ್ಸ್ ಆಫೀಸ್​ ದಾಖಲೆಯೇ ಉಡೀಸ್ ಆಗಿದೆ. ಈ ಚಿತ್ರದ ಮೂಲಕ ರಿಷಬ್ ಶೆಟ್ಟಿ ಅವರು ಮತ್ತೊಂದು ದೊಡ್ಡ ಗೆಲುವು ಕಂಡಿದ್ದಾರೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ರಿಷಬ್ ಶೆಟ್ಟಿ ನಟನೆಯ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಭಾರತದಲ್ಲಿ ಕನ್ನಡ, ತೆಲುಗು ಸೇರಿದಂತೆ ಐದು ಭಾಷೆಗಳಲ್ಲಿ ರಿಲೀಸ್ ಆಗಿದೆ. ಸಿನಿಮಾ ಕನ್ನಡದವರ ಜೊತೆಗೆ ತೆಲುಗಿನಲ್ಲೂ ರಿಲೀಸ್ ಆಗಿ ಯಶಸ್ಸು ಕಂಡಿದೆ. ಈ ಸಿನಿಮಾ ಮೊದಲ ದಿನ ಬರೋಬ್ಬರಿ 60 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅಂದಹಾಗೆ ಇದು ಭಾರತದ ಕಲೆಕ್ಷನ್ ಮಾತ್ರ. ವಿದೇಶದ ಗಳಿಕೆಯೂ ಸೇರಿದರೆ ಸಿನಿಮಾದ ಕಲೆಕ್ಷನ್ ಮತ್ತಷ್ಟು ಏರಿಕೆ ಆಗುವ ನಿರೀಕ್ಷೆ ಇದೆ.

ರಿಷಬ್ ಶೆಟ್ಟಿ ಅವರು ಹೈದರಾಬಾದ್​ನಲ್ಲಿ ಕನ್ನಡ ಮಾತನಾಡಿದ್ದಕ್ಕೆ ಸಿನಿಮಾ ಮೇಲೆ ಬ್ಯಾನ್ ಹೇರಬೇಕು ಎಂಬ ಕೂಗು ತೆಲುಗು ರಾಜ್ಯಗಳಲ್ಲಿ ಕೇಳಿ ಬಂತು. ಆದರೆ, ಆ ಭಾಗದಲ್ಲಿಯೂ ಸಿನಿಮಾ ಅಬ್ಬರಿಸುತ್ತಿದೆ. ಹೈದರಾಬಾದ್ ಮೊದಲಾದ ಕಡೆಗಳಲ್ಲಿ ಸಿನಿಮಾ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಇದು ಚಿತ್ರದ ಹೆಚ್ಚುಗಾರಿಕೆ.

ಇದನ್ನೂ ಓದಿ
ಕ್ಲೈಮ್ಯಾಕ್ಸ್​ನಲ್ಲಿ ‘ಕಾಂತಾರ: ಚಾಪ್ಟರ್ 2’ ಬಗ್ಗೆ ಘೋಷಣೆ
ಪ್ರೀಮಿಯರ್ ಶೋಗಳಿಂದಲೇ ಕೋಟಿ ಕೋಟಿ ಬಾಚಿದ ‘ಕಾಂತಾರ: ಚಾಪ್ಟರ್ 1’
‘ಕಾಂತಾರ: ಚಾಪ್ಟರ್1’ ವಿಮರ್ಶೆ: ದಂತಕಥೆಯಲ್ಲಿ ಅದ್ದೂರಿತನ; ಇದು ದೈವದ ಕಥನ
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಬ್ಬರಕ್ಕೆ ಹಲವು ದಾಖಲೆಗಳು ಸೃಷ್ಟಿ ಆಗಿವೆ. ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಮೊದಲ ದಿನ ಭಾರತದಲ್ಲಿ ಗಳಿಕೆ ಮಾಡಿದ್ದು 57 ಕೋಟಿ ರೂಪಾಯಿ. ಈಗ ಈ ದಾಖಲೆಯನ್ನು ‘ಕಾಂತಾರ: ಚಾಪ್ಟರ್ 1’ ಉಡೀಸ್ ಮಾಡಿದೆ.

ಇದನ್ನೂ ಓದಿ: ಹೈದರಾಬಾದ್​​ನಲ್ಲಿ ಶುರುವಾದ ವಿವಾದಕ್ಕೆ ವಿಜಯವಾಡನಲ್ಲಿ ಅಂತ್ಯ ಹಾಡಿದ ರಿಷಬ್ ಶೆಟ್ಟಿ

ಇಂದು ವಾರದ ದಿನ ಆಗಿರುವುದರಿಂದ ಗಳಿಕೆ ಕೊಂಚ ಕುಗ್ಗಬಹುದು. ಆದರೆ, ಶನಿವಾರ ಹಾಗೂ ಭಾನುವಾರ ಸಿನಿಮಾ ಅಬ್ಬರಿಸೋದು ಪಕ್ಕಾ. ಈಗಾಗಲೇ ಬೆಂಗಳೂರಿನಲ್ಲಿ ವೀಕೆಂಡ್ ಟಿಕೆಟ್​ಗಳು ಬಹುತೇಕ ಸೋಲ್ಡ್ ಔಟ್ ಆಗಿದೆ. ಇದು ಸಿನಿಮಾದ ಮೇಲಿನ ಹೈಪ್ ಎಷ್ಟು ಎಂಬುದನ್ನು ತೋರಿಸುತ್ತದೆ. ದುಬಾರಿ ಟಿಕೆಟ್ ದರ ಕೂಡ ಸಿನಿಮಾದ ಕಲೆಕ್ಷನ್ ಹೆಚ್ಚಲು ಕಾರಣ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.