AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳವಾರವೂ ‘ಕಾಂತಾರ: ಚಾಪ್ಟರ್ 1’ ಅಧಿಕ ಕಲೆಕ್ಷನ್; ಭಾರತದಲ್ಲಿ 500 ಕೋಟಿ ಇನ್ನೂ ಸನಿಹ

'ಕಾಂತಾರ: ಚಾಪ್ಟರ್ 1' ಸಿನಿಮಾ ವಿಶ್ವಾದ್ಯಂತ ಅಬ್ಬರಿಸುತ್ತಿದೆ. ಭಾರತದಲ್ಲಿ 500 ಕೋಟಿ ಗಳಿಕೆಯ ಸನಿಹದಲ್ಲಿದೆ. ಜಾಗತಿಕವಾಗಿ ₹700 ಕೋಟಿಗೂ ಹೆಚ್ಚು ಬಾಚಿದೆ. ದೀಪಾವಳಿ ವೇಳೆಗೆ 1000 ಕೋಟಿ ಕ್ಲಬ್ ಸೇರುವ ಸಾಧ್ಯತೆಯಿದೆ. ರಿಷಬ್ ಶೆಟ್ಟಿ ನಿರ್ದೇಶನದ ಈ ಕನ್ನಡ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಿದೆ.

ಮಂಗಳವಾರವೂ ‘ಕಾಂತಾರ: ಚಾಪ್ಟರ್ 1’ ಅಧಿಕ ಕಲೆಕ್ಷನ್; ಭಾರತದಲ್ಲಿ 500 ಕೋಟಿ ಇನ್ನೂ ಸನಿಹ
ಕಾಂತಾರ
ರಾಜೇಶ್ ದುಗ್ಗುಮನೆ
|

Updated on: Oct 15, 2025 | 7:02 AM

Share

‘ಕಾಂತಾರ: ಚಾಪ್ಟರ್ 1’ ಸಿನಿಮಾ ವಿಶ್ವಮಟ್ಟದಲ್ಲಿ ಸೂಪರ್ ಹಿಟ್ ಆಗಿದೆ. ಈ ಸಿನಿಮಾದ ಗಳಿಕೆ ತಗ್ಗುವ ಸೂಚನೆಯೇ ಸಿಗುತ್ತಿಲ್ಲ. ಈ ಚಿತ್ರ ಭಾರತದಲ್ಲೇ 500 ಕೋಟಿ ರೂಪಾಯಿ ಗಳಿಸುವ ಸನಿಹದಲ್ಲಿ ಇದೆ. ಇನ್ನು, ವಿಶ್ವ ಮಟ್ಟದಲ್ಲಿ ದೀಪಾವಳಿ ಪೂರ್ಣಗೊಳ್ಳುವ ವೇಳೆಗೆ ಸಿನಿಮಾ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿದರೂ ಅಚ್ಚರಿ ಏನಿಲ್ಲ ಎಂಬ ಮಾತುಗಳು ವ್ಯಕ್ತವಾಗಿದೆ. ‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾದ ಒಟ್ಟಾರೆ ಗಳಿಕೆ ಎಷ್ಟು ಕೋಟಿ ರೂಪಾಯಿ ಆಗುತ್ತದೆ ಎನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ರಿಷಬ್ ಶೆಟ್ಟಿ ನಿರ್ದೇಶನ ಇದೆ. ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಸೂಪರ್ ಹಿಟ್ ಆಗಿದೆ. ವಾರದ ದಿನಗಳಲ್ಲೂ ಸಿನಿಮಾ ಅಬ್ಬರಿಸುತ್ತಿದೆ. ಎರಡನೇ ಭಾನುವಾರದವರೆಗೆ (ಅಕ್ಟೋಬರ್ 12) ಸಿನಿಮಾ ಭಾರತದಲ್ಲಿ 438 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಈಗ ಸಿನಿಮಾ ಸೋಮವಾರ ಹಾಗೂ ಮಂಗಳವಾರ ಉತ್ತಮ ಗಳಿಕೆ ಮಾಡಿದೆ.

ಸೋಮವಾರ ಸಿನಿಮಾ 13.35 ಕೋಟಿ ರೂಪಾಯಿ ಗಳಿಸಿದೆ. ಇನ್ನು, ಮಂಗಳವಾರ 13.50 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಕಲೆಕ್ಷನ್ 465 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಚಿತ್ರಕ್ಕೆ 500 ಕೋಟಿ ರೂಪಾಯಿ ಕ್ಲಬ್ ಸೇರಲು ಬೇಕಿರೋದು ಕೇವಲ 35 ಕೋಟಿ ರೂಪಾಯಿ ಮಾತ್ರ. ವಾರಾಂತ್ಯದೊಳಗೆ ಸಿನಿಮಾ 500 ಕೋಟಿ ರೂಪಾಯಿ ಕ್ಲಬ್ ಸೇರುವ ಸಾಧ್ಯತೆ ಇದೆ.

ಇದನ್ನೂ ಓದಿ
Image
ಸ್ಪರ್ಧಿಗಳಿಗೆ ಕೊನೆಯ ಅವಕಾಶ ಕೊಟ್ಟ ‘ಬಿಗ್ ಬಾಸ್​’; ಮಾಡು ಇಲ್ಲವೇ ಮಡಿ
Image
‘ಕಾಂತಾರ: ಚಾಪ್ಟರ್ 2’ ಯಾವಾಗ? ಕೊನೆಗೂ ಉತ್ತರಿಸಿದ ರಿಷಬ್ ಶೆಟ್ಟಿ
Image
ದಂಡಿಗೆ ಹೆದರಲಿಲ್ಲ, ದಾಳಿಗೆ ಹೆದರಲಿಲ್ಲ, ಕಾವ್ಯಾ ಕಣ್ಣಿಗೆ ಹೆದರಿದ ಗಿಲ್ಲಿ
Image
ಈ ವಾರ ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದು ಯಾರು? ಕಾದಿದೆ ದೊಡ್ಡ ಟ್ವಿಸ್

ಇನ್ನು, ವಿಶ್ವ ಮಟ್ಟದಲ್ಲಿ ಸಿನಿಮಾ ಈಗಾಗಲೇ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ದೀಪಾವಳಿ ಸಮಯದಲ್ಲಿ ಸಿನಿಮಾಗೆ ಬಂಪರ್ ಲಾಟರಿ ಹೊಡೆದರೆ ಅನಾಯಾಸವಾಗಿ 1000 ಕೋಟಿ ರೂಪಾಯಿ ಕ್ಲಬ್ ಸೇರಲಿದೆ. ಈ ಮೂಲಕ ಕನ್ನಡದ ಪಾಲಿಗೆ ಮತ್ತೊಂದು ಸಾವಿರ ಕೋಟಿ ರೂಪಾಯಿ ಕ್ಲಬ್ ಸಿನಿಮಾ ಸಿಕ್ಕಂತೆ ಆಗಲಿದೆ.

ಇದನ್ನೂ ಓದಿ: ರಿಷಬ್ ಶೆಟ್ಟಿ ಲುಂಗಿ ಕಟ್ಟೋದು ನೋಡಿ ಅಮಿತಾಭ್ ಶಾಕ್; ಇದನ್ನು ಕಲಿಯಬೇಕು ಎಂದ ಬಿಗ್ ಬಿ

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕೊನೆಯಲ್ಲಿ ‘ಕಾಂತಾರ: ಚಾಪ್ಟರ್ 2’ ಸಿನಿಮಾ ಮಾಡುವ ಘೋಷಣೆ ಮಾಡಿದ್ದಾರೆ. ಆದರೆ, ಸದ್ಯಕ್ಕಂತೂ ಇದು ಸೆಟ್ಟೇರುವ ಸೂಚನೆ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್