ಆಸ್ಕರ್ ರೇಸ್​​ನಲ್ಲಿ ಸ್ಥಾನ ಪಡೆದ ‘ಕಾಂತಾರ: ಚಾಪ್ಟರ್ 1’ ಸಿನಿಮಾ

ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಆಸ್ಕರ್ ರೇಸ್​​ಗೆ ಪ್ರವೇಶಿಸಿದೆ. ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ. ಭಾರತದಿಂದ ಅಧಿಕೃತ ಆಯ್ಕೆಯಲ್ಲದಿದ್ದರೂ, ಪ್ರತ್ಯೇಕ ಅರ್ಜಿ ಮೂಲಕ 'ಅತ್ಯುತ್ತಮ ಚಿತ್ರ' ವಿಭಾಗದಲ್ಲಿ ಸ್ಪರ್ಧಿಸುತ್ತಿದೆ. 850 ಕೋಟಿಗೂ ಹೆಚ್ಚು ಗಳಿಸಿ, ಒಟಿಟಿಯಲ್ಲೂ ಮೆಚ್ಚುಗೆ ಪಡೆದ ಈ ಚಿತ್ರ ಹಾಲಿವುಡ್ ಸಿನಿಮಾಗಳ ಜೊತೆ ಸ್ಪರ್ಧಿಸಲಿದೆ.

ಆಸ್ಕರ್ ರೇಸ್​​ನಲ್ಲಿ ಸ್ಥಾನ ಪಡೆದ ‘ಕಾಂತಾರ: ಚಾಪ್ಟರ್ 1’ ಸಿನಿಮಾ
ಕಾಂತಾರ

Updated on: Jan 09, 2026 | 8:40 AM

ರಿಷಬ್ ಶೆಟ್ಟಿ ನಟನೆಯ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಈಗ ಆಸ್ಕರ್ ರೇಸ್​​ನಲ್ಲಿ ಸ್ಥಾನ ಪಡೆದಿದೆ. ಇದು ಭಾರತದಿಂದ ಅಧಿಕೃತವಾಗಿ ಆಯ್ಕೆ ಆದ ಸಿನಿಮಾ ಅಲ್ಲ. ಪ್ರತ್ಯೇಕವಾಗಿ ಅರ್ಜಿ ಸಲ್ಲಿಕೆ ಮಾಡಿ ಸಿನಿಮಾ ರೇಸ್​ಗೆ ಪ್ರವೇಶ ಪಡೆದುಕೊಂಡಿದೆ. ‘ಅತ್ಯುತ್ತಮ ಚಿತ್ರ’ ರೇಸ್​​ನಲ್ಲಿ ರಿಷಬ್ ನಿರ್ದೇಶನದ ಚಿತ್ರ ಇದೆ ಎಂಬುದು ಕನ್ನಡಿಗರ ಪಾಲಿಗೆ ಹೆಮ್ಮೆಯ ಸಂಗತಿ. ಹಾಲಿವುಡ್ ಸಿನಿಮಾಗಳ ಜೊತೆ ರಿಷಬ್ ಸಿನಿಮಾ ಸ್ಪರ್ಧೆ ಮಾಡಬೇಕಿದೆ.

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಆ ಬಳಿಕ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ನಿರ್ದೇಶನ ಮಾಡಿದರು. ಈ ಚಿತ್ರವನ್ನು ಜನರು ಇಷ್ಟಪಟ್ಟಿದ್ದು, ಬಾಕ್ಸ್ ಆಫೀಸ್​​ನಲ್ಲಿ 850 ಕೋಟಿ ರೂಪಾಯಿಗೂ ಹೆಚ್ಚಿನ ಬಿಸ್ನೆಸ್ ಮಾಡಿದೆ.ಈ ಸಿನಿಮಾ ಒಟಿಟಿಯಲ್ಲೂ ಪ್ರಸಾರ ಕಂಡಿದೆ. ಹೀಗಿರುವಾಗಲೇ ಸಿನಿಮಾ ಆಸ್ಕರ್​ ರೇಸ್​​ನಲ್ಲಿ ಸ್ಥಾನ ಪಡೆದುಕೊಂಡಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ನಿರ್ಮಾಣ ಮಾಡಿದ್ದು ವಿಜಯ್ ಕಿರಗಂದೂರು ಅವರು ‘ಹೊಂಬಾಳೆ ಫಿಲ್ಮ್ಸ್’. ಈ ಸಂಸ್ಥೆ ಪ್ರಸ್ತುತಪಡಿಸಿದ ‘ಮಹಾವತಾರ ನರಸಿಂಹ’ ಕೂಡ ಸಾಮಾನ್ಯ ಪ್ರವೇಶ ಪಟ್ಟಿ ಮೂಲಕ ರೇಸ್​​ನಲ್ಲಿ ಸ್ಥಾನ ಪಡೆದಿದೆ. ಹಲವು ಹಂತಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಈ ಎರಡು ಸಿನಿಮಾಗಳ ಪೈಕಿ ಯಾವುದಾದರೂ ಚಿತ್ರಕ್ಕೆ ಗೆಲುವು ಸಿಗುತ್ತದೆಯೇ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಪ್ರೀತಿಯಿಂದ ವಿಶ್ ಮಾಡಿದ ರಿಷಬ್ ಶೆಟ್ಟಿ

ಈವರೆಗೆ ಭಾರತದಲ್ಲಿ ನಿರ್ಮಾಣವಾದ ಯಾವುದೇ ಚಿತ್ರಕ್ಕೆ ಆಸ್ಕರ್ ಸಿಕ್ಕಿಲ್ಲ. ಈ ಮೊದಲು ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ದಾಖಲೆ ಬರೆದಿತ್ತು. ಪ್ರತ್ಯೇಕವಾಗಿ ಅರ್ಜಿ ಸಲ್ಲಿಕೆ ಮಾಡಿ ರೇಸ್​​ನಲ್ಲಿ ಈ ಹಾಡು ಸ್ಥಾನ ಪಡೆದುಕೊಂಡಿತ್ತು. ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ರಿಷಬ್  ನಿರ್ದೇಶನ ಮಾಡಿ, ನಟಿಸಿದ್ದಾರೆ. ರುಕ್ಮಿಣಿ ವಸಂತ್, ಜಯರಾಮ್, ಗುಲ್ಶನ್ ದೇವಯ್ಯ ಸೇರಿದಂತೆ ಅನೇಕರು ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.