AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂಟ್ಯೂಬ್​ನಲ್ಲಿ ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್ ದಾಖಲೆ; 24 ಗಂಟೆಯಲ್ಲಿ ಆದ ವೀವ್ಸ್ ಎಷ್ಟು?

‘ಕಾಂತಾರ’ ಚಿತ್ರದ ಪ್ರಿಕ್ವೆಲ್ ಆಗಿ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಫಸ್ಟ್ ಲುಕ್ ಟೀಸರ್ ನವೆಂಬರ್ 27ರಂದು ರಿಲೀಸ್ ಆಗಿದೆ. 24 ಗಂಟೆಯಲ್ಲಿ ಈ ಟೀಸರ್ 12 ಮಿಲಿಯನ್ ವೀಕ್ಷಣೆ ಕಂಡಿದೆ. ಅಂದರೆ, 1.2 ಕೋಟಿ ವೀವ್ಸ್ ಆಗಿದೆ.

ಯೂಟ್ಯೂಬ್​ನಲ್ಲಿ ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್ ದಾಖಲೆ; 24 ಗಂಟೆಯಲ್ಲಿ ಆದ ವೀವ್ಸ್ ಎಷ್ಟು?
ರಿಷಬ್
ರಾಜೇಶ್ ದುಗ್ಗುಮನೆ
|

Updated on: Nov 28, 2023 | 12:56 PM

Share

‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಕಾರಣದಿಂದ ‘ಕಾಂತಾರ’ (Kantara Movie) ಪ್ರಿಕ್ವೆಲ್ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ನವೆಂಬರ್ 27ರಂದು ರಿಲೀಸ್ ಆದ ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್ ಕಂಡ ವೀಕ್ಷಣೆಯೇ ಇದಕ್ಕೆ ಸಾಕ್ಷಿ. ಏಳು ಭಾಷೆಗಳಲ್ಲಿ ರಿಲೀಸ್ ಆಗಿರುವ ಈ ಟೀಸರ್ ಬರೋಬ್ಬರಿ 12 ಮಿಲಿಯನ್ ಅಂದರೆ 1.2 ಕೋಟಿ ಬಾರಿ ವೀಕ್ಷಣೆ ಕಂಡಿದೆ. ಈ ಮೂಲಕ ಹಲವು ದಾಖಲೆಗಳನ್ನು ಇದು ಸರಿಗಟ್ಟಿದೆ.

ಕಳೆದ ವರ್ಷ ‘ಕಾಂತಾರ’ ಸಿನಿಮಾ ರಿಲೀಸ್ ಆಯಿತು. ಇದಾದ ಬಳಿಕ ಎರಡನೇ ಪಾರ್ಟ್ ಮಾಡಲು ರಿಷಬ್ ಶೆಟ್ಟಿ ಮುಂದಾದರು. ಸ್ಕ್ರಿಪ್ಟ್ ಕೆಲಸಕ್ಕೆ ಅವರು ಸಾಕಷ್ಟು ಶ್ರಮ ಹಾಕಿದ್ದಾರೆ. ಬಹಳ ಶ್ರದ್ಧೆಯಿಂದ ಕುಳಿತು ಅವರು ಸ್ಕ್ರಿಪ್ಟ್ ರೆಡಿ ಮಾಡಿಕೊಂಡಿದ್ದಾರೆ. ನವೆಂಬರ್ 27ರಂದು ಕುಂದಾಪುರ ಆನೆಗುಡ್ಡೆ ದೇವಾಲಯದಲ್ಲಿ ಚಿತ್ರತಂಡ ಸ್ಕ್ರಿಪ್ಟ್ ಪೂಜೆ ಮಾಡಿದೆ. ಜೊತೆಗೆ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ.

ರಿಷಬ್ ಶೆಟ್ಟಿ ಅವರು ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಖಡ್ಗ ಹಿಡಿದಿದ್ದಾರೆ. ಈ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ‘ಇದು ಬೆಳಕಲ್ಲ ದರ್ಶನ’ ಎನ್ನುವ ಡೈಲಾಗ್ ಕೇಳಿದೆ. ‘ಕಾಂತಾರ’ ಸಿನಿಮಾದಲ್ಲಿ ಈ ಡೈಲಾಗ್ ಹೆಚ್ಚು ಹೈಲೈಟ್ ಆಗಿತ್ತು. ಆ ಡೈಲಾಗ್ ಇಲ್ಲಿಯೂ ಇದೆ. ಕದಂಬರ ಕಾಲದ ಕಥೆ ಸಿನಿಮಾದಲ್ಲಿ ಇದೆ.

ಇದನ್ನೂ ಓದಿ: ‘ಕಥೆಯ ಬಗ್ಗೆ ಏನೂ ಹೇಳಲ್ಲ, ಸಿನಿಮಾನೇ ಮಾತನಾಡುತ್ತದೆ’; ‘ಕಾಂತಾರ ಚಾಪ್ಟರ್ 1’ ಬಗ್ಗೆ ರಿಷಬ್ ಶೆಟ್ಟಿ ಮಾತು

ಸದ್ಯ ರಿಷಬ್ ಶೆಟ್ಟಿ ಅವರು ಕಥೆಯ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ‘ಈ ಹಿಂದೆ ಏನಾಗಿತ್ತು ಎಂಬುದನ್ನು ಹೇಳ ಹೊರಟಿದ್ದೇವೆ. ಜವಾಬ್ದಾರಿ ಹೆಚ್ಚಿದೆ. ಕಥೆ ಹೇಳಲ್ಲ, ಸಿನಿಮಾನೇ ಮಾತನಾಡುತ್ತದೆ’ ಎಂದಿದ್ದರು ರಿಷಬ್ ಶೆಟ್ಟಿ. ‘ಕಾಂತಾರ’ ಸಿನಿಮಾದ ಆರಂಭದಲ್ಲಿ ರಾಜನ ಕಥೆ ಬರುತ್ತದೆ. ಅದೇ ‘ಕಾಂತಾರ ಚಾಪ್ಟರ್ 1’ ಚಿತ್ರದ ಜೀವಾಳವೇ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ