AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ’ ದಾಖಲೆಯನ್ನು ಒಂದೇ ವಾರದಲ್ಲಿ ಮುರಿದ ‘ಕಾಂತಾರ: ಚಾಪ್ಟರ್ 1’

Kantara Chapter 1: ರಿಷಬ್ ಶೆಟ್ಟಿ ನಟನೆಯ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭಾರಿ ಗಳಿಕೆ ಮಾಡುತ್ತಿದೆ. ಸಿನಿಮಾ ಬಿಡುಗಡೆ ಆಗಿ ಎಂಟು ದಿನಗಳಾಗಿದ್ದು ಸಿನಿಮಾದ ವರ್ಲ್ಡ್ ವೈಡ್ ಕಲೆಕ್ಷನ್ 500 ಕೋಟಿ ಕಲೆಕ್ಷನ್ ಮಾಡಿದೆ. ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ, 2022ರ ‘ಕಾಂತಾರ’ ಸಿನಿಮಾದ ಲೈಫ್ ಟೈಮ್ ಕಲೆಕ್ಷನ್ ದಾಖಲೆಯನ್ನು ಒಂದೇ ವಾರಕ್ಕೆ ಮುರಿದಿದೆ.

‘ಕಾಂತಾರ’ ದಾಖಲೆಯನ್ನು ಒಂದೇ ವಾರದಲ್ಲಿ ಮುರಿದ ‘ಕಾಂತಾರ: ಚಾಪ್ಟರ್ 1’
Kantara Chapter 1
ಮಂಜುನಾಥ ಸಿ.
|

Updated on:Oct 10, 2025 | 1:17 PM

Share

ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿ ನಿನ್ನೆಗೆ (ಅಕ್ಟೋಬರ್ 09) ಎಂಟು ದಿನಗಳಾಗಿವೆ. ಬಾಕ್ಸ್ ಆಫೀಸ್​​ನಲ್ಲಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಭಾರತದಲ್ಲಿ ಮಾತ್ರವೇ ಅಲ್ಲದೆ ವಿದೇಶಗಳಲ್ಲಿಯೂ ಸಹ ಸಿನಿಮಾ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡುತ್ತಿದೆ. ಸಿನಿಮಾ ಬಿಡುಗಡೆ ಆದ ಎಂಟು ದಿನಗಳಲ್ಲಿ 2022ರ ‘ಕಾಂತಾರ’ ಮತ್ತು ‘ಕೆಜಿಎಫ್ 1’ ಸಿನಿಮಾದ ಕಲೆಕ್ಷನ್ ದಾಖಲೆಗಳನ್ನು ಮುರಿದಿದೆ ‘ಕಾಂತಾರ: ಚಾಪ್ಟರ್ 1’ ಸಿನಿಮಾ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆದ ಎಂಟು ದಿನಗಳಲ್ಲಿ ಭಾರತದಲ್ಲಿ 330 ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತವನ್ನು ಗಳಿಕೆ ಮಾಡಿದೆ. ವಾರದ ದಿನಗಳಲ್ಲಿಯೂ ಸಹ ಸಿನಿಮಾದ ಕಲೆಕ್ಷನ್​​​ನಲ್ಲಿ ದೊಡ್ಡ ಮಟ್ಟದ ಕುಸಿತ ಉಂಟಾಗಿಲ್ಲ ಎನ್ನುವುದು ವಿಶೇಷ. ಕಳೆದ ಸೋಮವಾರದಂದು 31.5 ಕೋಟಿ, ಮಂಗಳವಾರದಂದು 33.50 ಕೋಟಿ ಗಳಿಕೆ ಮಾಡಿದ್ದ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬುಧವಾರ ಕಲೆಕ್ಷನ್​​​ನಲ್ಲಿ ತುಸು ಕಡಿಮೆ ಆಗಿತ್ತು, 25 ಕೋಟಿ, ನಿನ್ನೆ ಗುರುವಾರದಂದು ಸಿನಿಮಾ 20.50 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಆದರೆ ಶುಕ್ರವಾರದಿಂದ ಮತ್ತೆ ಸಿನಿಮಾದ ಕಲೆಕ್ಷನ್ ಹೆಚ್ಚಾಗುವ ಸೂಚನೆಗಳಿವೆ. ವೀಕೆಂಡ್​​​ನಲ್ಲಿ ಮತ್ತೆ ಸಿನಿಮಾದ ಕಲೆಕ್ಷನ್ ಏರಿಕೆ ಆಗುವುದು ಪಕ್ಕಾ ಎನ್ನಲಾಗುತ್ತಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ಒಂದೇ ವಾರಕ್ಕೆ 2022 ರಲ್ಲಿ ಬಿಡುಗಡೆ ಆಗಿದ್ದ ‘ಕಾಂತಾರ’ ಮತ್ತು ಕನ್ನಡದ ಮೊದಲ ಬಾಕ್ಸ್ ಆಫೀಸ್ ಬ್ಲಾಕ್ ಬಸ್ಟರ್ ಸಿನಿಮಾ ‘ಕೆಜಿಎಫ್ 1’ ದಾಖಲೆಗಳನ್ನು ಹಿಂದಿಕ್ಕಿದೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಭಾರತದಲ್ಲಿ ಎಂಟು ದಿನಗಳಲ್ಲಿ ಸುಮಾರು 350 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಿಶ್ವದಾದ್ಯಂತ ಸುಮಾರು 500 ಕೋಟಿ ಗಳಿಕೆ ಮಾಡಿದೆ.

ಇದನ್ನೂ ಓದಿ:‘ಕಾಂತಾರ’ದಿಂದ ಪ್ಯಾನ್ ಇಂಡಿಯಾ ಸ್ಟಾರ್ ಆದ ರುಕ್ಮಿಣಿ ವಸಂತ್

2022ರ ‘ಕಾಂತಾರ’ ಸಿನಿಮಾ ವಿಶ್ವದಾದ್ಯಂತ 450 ಕೋಟಿ ಗಳಿಕೆ ಮಾಡಿತ್ತು. 2018 ರಲ್ಲಿ ಬಿಡುಗಡೆ ಆಗಿದ್ದ ‘ಕೆಜಿಎಫ್ 1’ ಸಿನಿಮಾ 250 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಇದೀಗ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೇವಲ ಒಂದು ವಾರದಲ್ಲಿ ಎರಡೂ ಸಿನಿಮಾಗಳ ದಾಖಲೆಗಳನ್ನು ಅಳಿಸಿ ಹಾಕಿದೆ. ಮಾತ್ರವಲ್ಲದೆ ರಜನೀಕಾಂತ್​​ರ ‘ಕೂಲಿ’ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ಅನ್ನೂ ಸಹ ಹಿಂದಿಕ್ಕಿ ಮುಂದೆ ನುಗ್ಗುತ್ತಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕೆ ಸುಮಾರು 125 ಕೋಟಿ ರೂಪಾಯಿ ಬಜೆಟ್ ಅನ್ನು ಹೊಂಬಾಳೆ ಫಿಲಮ್ಸ್ ಹಾಕಿದೆ. ಇತ್ತೀಚೆಗಿನ ಕೆಲ ಪ್ಯಾನ್ ಇಂಡಿಯಾ ಸಿನಿಮಾಗಳಿಗೆ ಹೋಲಿಸಿದರೆ ಈ ಬಜೆಟ್ ಬಹಳ ಸಣ್ಣದು. ಹಾಗಿದ್ದರೂ ಸಹ ಸಿನಿಮಾ ಭಾರಿ ದೊಡ್ಡ ಕಲೆಕ್ಷನ್ ಅನ್ನೇ ಮಾಡುತ್ತಿದೆ. ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸುಮಾರು 600 ಕೋಟಿಗೂ ಹೆಚ್ಚಿನ ಮೊತ್ತವನ್ನು ಗಳಿಕೆ ಮಾಡುವ ಅಂದಾಜಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:24 am, Fri, 10 October 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್