AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮವಾರವೂ ತಗ್ಗಲಿಲ್ಲ ‘ಕಾಂತಾರ’ ಅಬ್ಬರ, ಮುಂದುವರೆದ ದಾಖಲೆಯ ಗಳಿಕೆ

Kantara Chapter 1 collection: ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿ ಒಂದು ವಾರವಾಗಿದೆ. ಬಾಕ್ಸ್ ಆಫೀಸ್​​ನಲ್ಲಿ ಸಿನಿಮಾ ದಾಖಲೆಗಳನ್ನು ಬರೆಯುತ್ತಿದೆ. ವಾರಾಂತ್ಯದಲ್ಲಿ ಬಿಡುಗಡೆ ಆಗುವ ಸಿನಿಮಾಗಳು ಸೋಮವಾರದ ದಿನ ಮಕಾಡೆ ಮಲಗುವುದು ನೋಡುತ್ತಲೇ ಬಂದಿದ್ದೇವೆ. ಅಂದಹಾಗೆ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೊದಲ ಸೋಮವಾರ ಗಳಿಸಿದ್ದೆಷ್ಟು?

ಸೋಮವಾರವೂ ತಗ್ಗಲಿಲ್ಲ ‘ಕಾಂತಾರ’ ಅಬ್ಬರ, ಮುಂದುವರೆದ ದಾಖಲೆಯ ಗಳಿಕೆ
Kantara Chapter 1 Movie
ಮಂಜುನಾಥ ಸಿ.
|

Updated on:Oct 07, 2025 | 9:20 AM

Share

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿ ಐದು ದಿನಗಳಾಗಿವೆ. ಕಳೆದ ಗುರುವಾರ ಈ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ, ಮೊದಲ ದಿನವೇ ಸುಮಾರು 80 ಕೋಟಿಗೂ ಹೆಚ್ಚು ಮೊತ್ತವನ್ನು ಗಳಿಕೆ ಮಾಡಿ ಬಾಕ್ಸ್ ಆಫೀಸ್​​ನಲ್ಲಿ ದಾಖಲೆ ಬರೆದಿತ್ತು. ಆದರೆ ನಿನ್ನೆ ಸಿನಿಮಾದ ಮೊದಲ ‘ಪರೀಕ್ಷೆ’. ಗುರುವಾರ, ಶುಕ್ರವಾರ ಬಿಡುಗಡೆ ಆಗುವ ಸಿನಿಮಾಗಳು ಮೊದಲ ಮೂರು ಅಥವಾ ನಾಲ್ಕು ದಿನ ಒಳ್ಳೆಯ ಕಲೆಕ್ಷನ್ ಮಾಡಿ ಆ ಸೋಮವಾರದ ದಿನ ಮಕಾಡೆ ಮಲಗಿರುವುದೇ ಹೆಚ್ಚು. ಆದರೆ ‘ಕಾಂತಾರ: ಚಾಪ್ಟರ್ 1’ ಗಳಿಕೆ ಸೋಮವಾರವೂ ತಗ್ಗಿಲ್ಲ.

ಶನಿವಾರ, ಭಾನುವಾರಗಳಿಗೆ ಹೋಲಿಸಿದರೆ ಸಿನಿಮಾದ ಗಳಿಕೆ ಸೋಮವಾರ ತುಸು ಕುಸಿದಿದೆಯಾದರೂ ತೀರಾ ಹೀನಾಯ ಗಳಿಕೆ ಆಗಿಲ್ಲ ಬದಲಿಗೆ ಉತ್ತಮ ಮೊತ್ತವೇ ಚಿತ್ರ ನಿರ್ಮಾಪಕರ ಕೈ ಸೇರಿದೆ. ಸೋಮವಾರದ ದಿನ ‘ಕಾಂತಾರ: ಚಾಪ್ಟರ್ 1’ ಸಿನಿಮಾ 30 ಕೋಟಿಗೂ ಹೆಚ್ಚಿನ ಮೊತ್ತದ ಹಣವನ್ನು ಗಳಿಕೆ ಮಾಡಿದೆ. ಆ ಮೂಲಕ ಸಿನಿಮಾದ ಒಟ್ಟು ಕಲೆಕ್ಷನ್ 300 ಕೋಟಿಯನ್ನು ದಾಟಿದೆ.

ಸೋಮವಾರದಂದು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಭಾರತದ ಬಾಕ್ಸ್ ಆಫೀಸ್​​ನಲ್ಲಿ 30.50 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೊತ್ತದಲ್ಲಿ ಅತಿ ಹೆಚ್ಚಿನ ಮೊತ್ತ ಕರ್ನಾಟಕದಿಂದಲೇ ಕಲೆಕ್ಷನ್ ಆಗಿದೆ. ಕರ್ನಾಟಕದಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸೋಮವಾರದಂದು ಸಹ ಸುಮಾರು 75% ಆಕ್ಯುಪೆನ್ಸಿ ಇತ್ತೆನ್ನುತ್ತದೆ ವರದಿ. ತಮಿಳಿನಲ್ಲಿ 43%, ಮಲಯಾಳಂನಲ್ಲಿ 40%, ತೆಲುಗಿನಲ್ಲಿ ತುಸು ಕಡಿಮೆ 36% ಹಾಗೂ ಹಿಂದಿ ಭಾಗದಲ್ಲಿ 18% ಆಕ್ಯುಪೆನ್ಸಿ ಇತ್ತು.

ಇದನ್ನೂ ಓದಿ:ಕಾಂತಾರದ ಕನಕವತಿ ರುಕ್ಮಿಣಿ ವಸಂತ್ ಚಂದದ ಫೋಟೋಗಳು

ಸೋಮವಾರ 30.50 ಕೋಟಿ ಗಳಿಕೆಯ ಮೂಲಕ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಭಾರತದ ಕಲೆಕ್ಷನ್ ಕೇವಲ ಐದು ದಿನಕ್ಕೆ 250 ಕೋಟಿ ರೂಪಾಯಿ ದಾಟಿದೆ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದಾಖಲೆ ಸೃಷ್ಟಿಸಿದ್ದು, ಇನ್ನೊಂದು ವಾರದಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕಲೆಕ್ಷನ್ ಭಾರತದಲ್ಲಿ 500 ಕೋಟಿ ದಾಟುವ ನಿರೀಕ್ಷೆ ಇದೆ. ವಿದೇಶಗಳಲ್ಲಿಯೂ ಈ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿದ್ದು ಕಳೆದ ಐದು ದಿನಗಳಲ್ಲಿ ವಿದೇಶಗಳಲ್ಲಿ 100 ಕೋಟಿಗೂ ಹೆಚ್ಚಿನ ಮೊತ್ತವನ್ನು ಸಿನಿಮಾ ಕಲೆ ಹಾಕಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ 2022 ರಲ್ಲಿ ಬಿಡುಗಡೆ ಆಗಿದ್ದ ‘ಕಾಂತಾರ’ ಸಿನಿಮಾದ ಪ್ರೀಕ್ವೆಲ್ ಆಗಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನವನ್ನೂ ಮಾಡಿದ್ದು, ಹೊಂಬಾಳೆ ಫಿಲಮ್ಸ್ ಸಿನಿಮಾದ ನಿರ್ಮಾಣ ಸಂಸ್ಥೆ. ಸಿನಿಮಾನಲ್ಲಿ ರುಕ್ಮಿಣಿ ವಸಂತ್ ನಾಯಕಿ. ಸಿನಿಮಾನಲ್ಲಿ ಬಾಲಿವುಡ್​​ನಲ್ಲಿ ಮಿಂಚುತ್ತಿರುವ ಕನ್ನಡದ ನಟ ಗುಲ್ಷನ್ ದೇವಯ್ಯ, ಮಲಯಾಳಂ ನಟ ಜಯರಾಮ್ ಇನ್ನೂ ಹಲವು ನಟರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:13 am, Tue, 7 October 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್