‘ಹಿಂದೆಂದಿಗೂ ನೋಡದ ವಿಸ್ಮಯ ಕಣ್ತುಂಬಿಕೊಳ್ಳಿ’; ‘ಕಾಂತಾರ 2’ ಬಗ್ಗೆ ಬಿಗ್ ಅಪ್​ಡೇಟ್

|

Updated on: Nov 25, 2023 | 9:52 AM

Kantara Chapter 1: ‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಅವರು ನಟನಾಗಿ, ನಿರ್ದೇಶಕನಾಗಿ ಗೆದ್ದಿದ್ದರು. ಎರಡು ಶೇಡ್​ನ ಪಾತ್ರವನ್ನು ಅವರು ಯಶಸ್ವಿಯಾಗಿ ನಿರ್ವಹಿಸಿದ್ದರು. ಈಗ ಈ ಚಿತ್ರಕ್ಕೆ ಎರಡನೇ ಪಾರ್ಟ್ ಬರುತ್ತಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ.

‘ಹಿಂದೆಂದಿಗೂ ನೋಡದ ವಿಸ್ಮಯ ಕಣ್ತುಂಬಿಕೊಳ್ಳಿ’; ‘ಕಾಂತಾರ 2’ ಬಗ್ಗೆ ಬಿಗ್ ಅಪ್​ಡೇಟ್
ಕಾಂತಾರ
Follow us on

‘ಕಾಂತಾರ’ ಸಿನಿಮಾ (Kantar Movie) ರಿಲೀಸ್ ಆಗಿ ವರ್ಷದ ಮೇಲಾಗಿದೆ. ಈ ಚಿತ್ರಕ್ಕೆ ಪ್ರೀಕ್ವೆಲ್ ಬರಲಿದೆ ಎಂದು ಈ ಮೊದಲೇ ಘೋಷಣೆ ಆಗಿತ್ತು. ಸಿನಿಮಾ ಶೂಟಿಂಗ್ ಶುರುವಿನ ಬಗ್ಗೆ ಆಗೊಂದು, ಈಗೊಂದು ಸುದ್ದಿ ಹರಿದಾಡುತ್ತಲೇ ಇತ್ತು. ಆದರೆ, ಯಾವುದೂ ಅಧಿಕೃತ ಆಗಿರಲಿಲ್ಲ. ಈಗ ‘ಹೊಂಬಾಳೆ ಫಿಲ್ಮ್ಸ್’ ಕಡೆಯಿಂದ ಈ ಬಗ್ಗೆ ಮಾಹಿತಿ ಸಿಕ್ಕಿದೆ. ‘ಕಾಂತಾರ 2’ ಚಿತ್ರದ ಫಸ್ಟ್ ಪೋಸ್ಟರ್ ನವೆಂಬರ್ 27ರ ಮಧ್ಯಾಹ್ನ 12:25ಕ್ಕೆ ಅನಾವರಣಗೊಳ್ಳಲಿದೆ. ಈ ವಿಚಾರ ತಿಳಿದು ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಅವರು ನಟನಾಗಿ, ನಿರ್ದೇಶಕನಾಗಿ ಗೆದ್ದಿದ್ದರು. ಎರಡು ಶೇಡ್​ನ ಪಾತ್ರವನ್ನು ಅವರು ಯಶಸ್ವಿಯಾಗಿ ನಿರ್ವಹಿಸಿದ್ದರು. ದೈವ ಬಂದಂತೆ ಆಡುವಾಗ ಅವರ ಹಾವ-ಭಾವ ನೋಡಿ ಎಲ್ಲರೂ ಬೆಕ್ಕಸ ಬೆರಗಾಗಿದ್ದರು. ಈಗ ಈ ಚಿತ್ರಕ್ಕೆ ಎರಡನೇ ಪಾರ್ಟ್ ಬರುತ್ತಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ.

‘ಪ್ರತಿ ಕ್ಷಣವೂ ದೈವಿಕ ಸ್ಪರ್ಶವನ್ನು ಅನುಭವಿಸುವುದರ ಜೊತೆ ಇತಿಹಾಸದ ನಿಗೂಢ ಸತ್ಯವನ್ನು ಅನ್ವೇಷಿಸಿ. ಹಿಂದೆಂದಿಗೂ ನೋಡದ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಕಾತುರರಾಗಿ. ಇದು ಬರಿ ಬೆಳಕಲ್ಲ, ದರ್ಶನ. ಕಾಂತಾರ ಚಾಪ್ಟರ್ 1 ಫಸ್ಟ್ ಲುಕ್ ನವೆಂಬರ್ 27, ಮಧ್ಯಾಹ್ನ 12:25ಕ್ಕೆ’ ಎಂದು ಹೊಂಬಾಳೆ ಫಿಲ್ಮ್ಸ್ ಬರೆದುಕೊಂಡಿದೆ.

ಇದನ್ನೂ ಓದಿ: ‘ಕಾಂತಾರ 2’ಗಾಗಿ ಗೆಟಪ್ ಬದಲಿಸಿದ ರಿಷಬ್ ಶೆಟ್ಟಿ?

ಟೈಟಲ್ ಕಾರ್ಡ್​ನಲ್ಲಿ ಕೇವಲ ‘ಕಾಂತಾರ’ ಎಂದಷ್ಟೇ ಇದೆ. ‘ಕಾಂತಾರ ಚಾಪ್ಟರ್ 1’ ಎಂದು ಹ್ಯಾಶ್​ಟ್ಯಾಗ್ ಹಾಕಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ರಿಷಬ್ ಶೆಟ್ಟಿ ಅವರ ಹೊಸ ಅವತಾರ ನೋಡಲು ಫ್ಯಾನ್ಸ್ ಕಾದಿದ್ದಾರೆ. ಇದಕ್ಕೆ ಸೋಮವಾರದವರೆಗೆ ಕಾಯಲೇಬೇಕು.

‘ಕಾಂತಾರ 2’ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿದೆ. ರಿಷಬ್ ಶೆಟ್ಟಿ ನಿರ್ದೇಶನದ ಈ ಸಿನಿಮಾ ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ, ಬೆಂಗಾಲಿ ಹಾಗೂ ಇಂಗ್ಲಿಷ್​ನಲ್ಲಿ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:47 am, Sat, 25 November 23