‘ಓಜಿ’ ಓಟಕ್ಕೆ ಹೊಡೆತ ಕೊಟ್ಟ ‘ಕಾಂತಾರ: ಚಾಪ್ಟರ್ 1’ ಅಬ್ಬರ
‘ಕಾಂತಾರ: ಚಾಪ್ಟರ್ 1’ ಮೂಲತಃ ಕನ್ನಡದ ಸಿನಿಮಾ. ಈ ಚಿತ್ರವನ್ನು ರಿಷಬ್ ಅವರೇ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಬೆರ್ಮೆ ಹೆಸರಿನ ಪಾತ್ರದಲ್ಲಿ ನಟಿಸಿದ್ದಾರೆ. ಇದು ‘ಕಾಂತಾರ’ ಸಿನಿಮಾದ ಪ್ರೀಕ್ಷೆಲ್. ‘ಕಾಂತಾರ’ ತೆಲುಗು ಭಾಗದಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದಿತ್ತು. ಈ ಕಾರಣದಿಂದಲೇ ಪ್ರೀಕ್ಷೆಲ್ ಬಗ್ಗೆ ನಿರೀಕ್ಷೆ ಮೂಡಿದೆ. ನಿರೀಕ್ಷೆಯನ್ನೂ ಮೀರಿ ಸಿನಿಮಾ ಗಳಿಕೆ ಮಾಡುತ್ತಿದೆ.

ಪವನ್ ಕಲ್ಯಾಣ್ ನಟನೆಯ ‘ಓಜಿ’ ಸಿನಿಮಾ ಸೆಪ್ಟೆಂಬರ್ 25ರಂದು ವಿಶ್ವಾದ್ಯಂತ ಬಿಡುಗಡೆ ಕಂಡಿದೆ. ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಹೀಗಿರುವಾಗಲೇ ಕನ್ನಡದ ‘ಕಾಂತಾರ: ಚಾಪ್ಟರ್ 1’ ಸಿನಿಮಾ ತೆಲುಗು ಭಾಷೆಯಲ್ಲೂ ರಿಲೀಸ್ ಆಗಿದೆ. ಈ ಚಿತ್ರವನ್ನು ಜನರು ಕೊಂಡಾಡುತ್ತಿದ್ದಾರೆ. ಈ ಚಿತ್ರ ಪವನ್ ಕಲ್ಯಾಣ್ ನಟನೆಯ ‘ಓಜಿ’ ಚಿತ್ರದ ಓಟಕ್ಕೆ ಬ್ರೇಕ್ ಹಾಕಿದೆ. ‘ಓಜಿ’ ಅಬ್ಬರ ಕೊಂಚ ಕಡಿಮೆ ಆಗಿದೆ.
‘ಕಾಂತಾರ: ಚಾಪ್ಟರ್ 1’ ಮೂಲತಃ ಕನ್ನಡದ ಸಿನಿಮಾ. ಈ ಚಿತ್ರವನ್ನು ರಿಷಬ್ ಅವರೇ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಬೆರ್ಮೆ ಹೆಸರಿನ ಪಾತ್ರದಲ್ಲಿ ನಟಿಸಿದ್ದಾರೆ. ಇದು ‘ಕಾಂತಾರ’ ಸಿನಿಮಾದ ಪ್ರೀಕ್ಷೆಲ್. ‘ಕಾಂತಾರ’ ತೆಲುಗು ಭಾಗದಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದಿತ್ತು. ಈ ಕಾರಣದಿಂದಲೇ ಪ್ರೀಕ್ಷೆಲ್ ಬಗ್ಗೆ ನಿರೀಕ್ಷೆ ಮೂಡಿದೆ. ನಿರೀಕ್ಷೆಯನ್ನೂ ಮೀರಿ ಸಿನಿಮಾ ಗಳಿಕೆ ಮಾಡುತ್ತಿದೆ.
‘ಓಜಿ’ ಸಿನಿಮಾ ಎರಡನೇ ಗುರುವಾರ ಅಂದರೆ ಅಕ್ಟೋಬರ್ 3ರಂದು 7 ಕೋಟಿ ರೂಪಾಯಿ ಗಳಿಸಲಷ್ಟೇ ಶಕ್ಯವಾಗಿದೆ. ಅನೇಕ ಕಡೆಗಳಲ್ಲಿ ‘ಓಜಿ’ ಸಿನಿಮಾ ಬದಲು ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ಪ್ರದರ್ಶಿಸಲಾಗುತ್ತಿದೆ. ಇದು ಕನ್ನಡ ಚಿತ್ರದ ಹೆಚ್ಚುಗಾರಿಕೆ. ‘ಕಾಂತಾರ’ ಸೀಕ್ವೆಲ್ನ ಒಟ್ಟಾರೆ ಕಲೆಕ್ಷನ್ ಎಷ್ಟು ಕೋಟಿ ರೂಪಾಯಿ ಆಗುತ್ತದೆ ಎನ್ನುವ ಕುತೂಹಲ ಮೂಡಿದೆ.
ಇದನ್ನೂ ಓದಿ: ಬಾಕ್ಸ್ ಆಫೀಸ್ನಲ್ಲಿ ‘ಕಾಂತಾರ: ಚಾಪ್ಟರ್ 1’ ಅಬ್ಬರ; ಎರಡೇ ದಿನಕ್ಕೆ 100 ಕೋಟಿ ರೂಪಾಯಿ ಕಲೆಕ್ಷನ್
‘ಓಜಿ’ ಸಿನಿಮಾ ಸದ್ಯ 175 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುತ್ತಿದೆ. ಈ ಚಿತ್ರ ಇನ್ನೂ ಕೆಲವು ವಾರ ಅಬ್ಬರಿಸುವ ಸೂಚನೆ ಇದೆ. ಸಿನಿಮಾದ ಒಟ್ಟಾರೆ ಗಳಿಕೆ 250 ಕೋಟಿ ರೂಪಾಯಿ ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಚಿತ್ರದಿಂದ ಪವನ್ ಕಲ್ಯಾಣ್ ಅವರು ದೊಡ್ಡ ಕಂಬ್ಯಾಕ್ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.