‘ಓಜಿ’ ಓಟಕ್ಕೆ ಹೊಡೆತ ಕೊಟ್ಟ ‘ಕಾಂತಾರ: ಚಾಪ್ಟರ್ 1’ ಅಬ್ಬರ

‘ಕಾಂತಾರ: ಚಾಪ್ಟರ್ 1’ ಮೂಲತಃ ಕನ್ನಡದ ಸಿನಿಮಾ. ಈ ಚಿತ್ರವನ್ನು ರಿಷಬ್ ಅವರೇ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಬೆರ್ಮೆ ಹೆಸರಿನ ಪಾತ್ರದಲ್ಲಿ ನಟಿಸಿದ್ದಾರೆ. ಇದು ‘ಕಾಂತಾರ’ ಸಿನಿಮಾದ ಪ್ರೀಕ್ಷೆಲ್. ‘ಕಾಂತಾರ’ ತೆಲುಗು ಭಾಗದಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದಿತ್ತು. ಈ ಕಾರಣದಿಂದಲೇ ಪ್ರೀಕ್ಷೆಲ್ ಬಗ್ಗೆ ನಿರೀಕ್ಷೆ ಮೂಡಿದೆ. ನಿರೀಕ್ಷೆಯನ್ನೂ ಮೀರಿ ಸಿನಿಮಾ ಗಳಿಕೆ ಮಾಡುತ್ತಿದೆ.

‘ಓಜಿ’ ಓಟಕ್ಕೆ ಹೊಡೆತ ಕೊಟ್ಟ ‘ಕಾಂತಾರ: ಚಾಪ್ಟರ್ 1’ ಅಬ್ಬರ
Kantara (6)

Updated on: Oct 04, 2025 | 4:37 PM

ಪವನ್ ಕಲ್ಯಾಣ್ ನಟನೆಯ ‘ಓಜಿ’ ಸಿನಿಮಾ ಸೆಪ್ಟೆಂಬರ್ 25ರಂದು ವಿಶ್ವಾದ್ಯಂತ ಬಿಡುಗಡೆ ಕಂಡಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಹೀಗಿರುವಾಗಲೇ ಕನ್ನಡದ ‘ಕಾಂತಾರ: ಚಾಪ್ಟರ್ 1’ ಸಿನಿಮಾ ತೆಲುಗು ಭಾಷೆಯಲ್ಲೂ ರಿಲೀಸ್ ಆಗಿದೆ. ಈ ಚಿತ್ರವನ್ನು ಜನರು ಕೊಂಡಾಡುತ್ತಿದ್ದಾರೆ. ಈ ಚಿತ್ರ ಪವನ್ ಕಲ್ಯಾಣ್ ನಟನೆಯ ‘ಓಜಿ’ ಚಿತ್ರದ ಓಟಕ್ಕೆ ಬ್ರೇಕ್ ಹಾಕಿದೆ. ‘ಓಜಿ’ ಅಬ್ಬರ ಕೊಂಚ ಕಡಿಮೆ ಆಗಿದೆ.

‘ಕಾಂತಾರ: ಚಾಪ್ಟರ್ 1’ ಮೂಲತಃ ಕನ್ನಡದ ಸಿನಿಮಾ. ಈ ಚಿತ್ರವನ್ನು ರಿಷಬ್ ಅವರೇ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಬೆರ್ಮೆ ಹೆಸರಿನ ಪಾತ್ರದಲ್ಲಿ ನಟಿಸಿದ್ದಾರೆ. ಇದು ‘ಕಾಂತಾರ’ ಸಿನಿಮಾದ ಪ್ರೀಕ್ಷೆಲ್. ‘ಕಾಂತಾರ’ ತೆಲುಗು ಭಾಗದಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದಿತ್ತು. ಈ ಕಾರಣದಿಂದಲೇ ಪ್ರೀಕ್ಷೆಲ್ ಬಗ್ಗೆ ನಿರೀಕ್ಷೆ ಮೂಡಿದೆ. ನಿರೀಕ್ಷೆಯನ್ನೂ ಮೀರಿ ಸಿನಿಮಾ ಗಳಿಕೆ ಮಾಡುತ್ತಿದೆ.

‘ಓಜಿ’ ಸಿನಿಮಾ ಎರಡನೇ ಗುರುವಾರ ಅಂದರೆ ಅಕ್ಟೋಬರ್ 3ರಂದು 7 ಕೋಟಿ ರೂಪಾಯಿ ಗಳಿಸಲಷ್ಟೇ ಶಕ್ಯವಾಗಿದೆ. ಅನೇಕ ಕಡೆಗಳಲ್ಲಿ ‘ಓಜಿ’ ಸಿನಿಮಾ ಬದಲು ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ಪ್ರದರ್ಶಿಸಲಾಗುತ್ತಿದೆ. ಇದು ಕನ್ನಡ ಚಿತ್ರದ ಹೆಚ್ಚುಗಾರಿಕೆ. ‘ಕಾಂತಾರ’ ಸೀಕ್ವೆಲ್​ನ ಒಟ್ಟಾರೆ ಕಲೆಕ್ಷನ್ ಎಷ್ಟು ಕೋಟಿ ರೂಪಾಯಿ ಆಗುತ್ತದೆ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ
‘ನೀವು ತೋರಿದ ದ್ವೇಷ ನೋಡಿ ಬೇಸರವಾಯಿತು’; ನೋವು ಹೊರ ಹಾಕಿದ ನಮ್ರತಾ ಗೌಡ
‘ನೀವು ಆಂಟಿ ಲವರ್ ಅನಿಸುತ್ತೆ’; ಅಭಿಷೇಕ್​ಗೆ ನೇರವಾಗಿ ಹೇಳಿದ ಜಾನ್ವಿ
ಬಾಕ್ಸ್ ಆಫೀಸ್​ನಲ್ಲಿ ‘ಕಾಂತಾರ: ಚಾಪ್ಟರ್ 1’ ಅಬ್ಬರ; 100 ಕೋಟಿ ಕಲೆಕ್ಷನ್
ಗುಟ್ಟಾಗಿ ನಡೆಯಿತು ರಶ್ಮಿಕಾ-ವಿಜಯ್ ನಿಶ್ಚಿತಾರ್ಥ? ಫೆಬ್ರವರಿಯಲ್ಲಿ ಮದುವೆ

ಇದನ್ನೂ ಓದಿ: ಬಾಕ್ಸ್ ಆಫೀಸ್​ನಲ್ಲಿ ‘ಕಾಂತಾರ: ಚಾಪ್ಟರ್ 1’ ಅಬ್ಬರ; ಎರಡೇ ದಿನಕ್ಕೆ 100 ಕೋಟಿ ರೂಪಾಯಿ ಕಲೆಕ್ಷನ್

‘ಓಜಿ’ ಸಿನಿಮಾ ಸದ್ಯ 175 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುತ್ತಿದೆ. ಈ ಚಿತ್ರ ಇನ್ನೂ ಕೆಲವು ವಾರ ಅಬ್ಬರಿಸುವ ಸೂಚನೆ ಇದೆ. ಸಿನಿಮಾದ ಒಟ್ಟಾರೆ ಗಳಿಕೆ 250 ಕೋಟಿ ರೂಪಾಯಿ ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಚಿತ್ರದಿಂದ ಪವನ್ ಕಲ್ಯಾಣ್ ಅವರು ದೊಡ್ಡ ಕಂಬ್ಯಾಕ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us