AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

24 ಗಂಟೆಯಲ್ಲಿ 107 ಮಿಲಿಯನ್ ವೀಕ್ಷಣೆ ಕಂಡ ‘ಕಾಂತಾರ: ಚಾಪ್ಟರ್ 1’ ಟ್ರೇಲರ್

ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆಯೇ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಟ್ರೇಲರ್ ಮೂಡಿಬಂದಿದೆ. ರಿಷಬ್ ಶೆಟ್ಟಿ ನಟನೆಯ ಈ ಸಿನಿಮಾವನ್ನು ‘ಹೊಂಬಾಳೆ ಫಿಲ್ಮ್ಸ್​’ ಬಹಳ ಅದ್ದೂರಿಯಾಗಿ ವಿಶ್ವಾದ್ಯಂತ ಬಿಡುಗಡೆ ಮಾಡುತ್ತಿದೆ. ಟ್ರೇಲರ್ ನೋಡಿದ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಅಕ್ಟೋಬರ್ 2ರಂದು ಈ ಸಿನಿಮಾ ತೆರೆಕಾಣಲಿದೆ.

24 ಗಂಟೆಯಲ್ಲಿ 107 ಮಿಲಿಯನ್ ವೀಕ್ಷಣೆ ಕಂಡ ‘ಕಾಂತಾರ: ಚಾಪ್ಟರ್ 1’ ಟ್ರೇಲರ್
Rishab Shetty
ಮದನ್​ ಕುಮಾರ್​
|

Updated on: Sep 23, 2025 | 5:40 PM

Share

2025ರ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ಕಾಂತಾರ: ಚಾಪ್ಟರ್ 1’ (Kantara Chapter 1) ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇವೆ. ಈ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿ ಧೂಳೆಬ್ಬಿಸುತ್ತಿದೆ. ರಿಷಬ್ ಶೆಟ್ಟಿ (Rishab Shetty), ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಮುಂತಾದವರು ನಟಿಸಿರುವ ಈ ಚಿತ್ರ ಅಕ್ಟೋಬರ್ 2ರಂದು ಬಿಡುಗಡೆ ಆಗಲಿದೆ. ಅಕ್ಟೋಬರ್ 1ರಂದು ಪ್ರೀಮಿಯರ್ ಶೋ ಇರಲಿದೆ. ಸದ್ಯಕ್ಕೆ ಎಲ್ಲ ಕಡೆಗಳಲ್ಲಿ ‘ಕಾಂತಾರ: ಚಾಪ್ಟರ್ 1’ ಟ್ರೇಲರ್ (Kantara Chapter 1 Movie Trailer) ಧೂಳೆಬ್ಬಿಸುತ್ತಿದೆ. ಯೂಟ್ಯೂಬ್ ಹಾಗೂ ಇತರೆ ಸೋಶಿಯಲ್ ಮೀಡಿಯಾ ಸೇರಿ 24 ಗಂಟೆಗಳಲ್ಲಿ ಬರೋಬ್ಬರಿ 107 ಮಿಲಿಯನ್​ಗಿಂತಲೂ ಅಧಿಕ ಬಾರಿ ವೀಕ್ಷಣೆ ಕಂಡು ಮುನ್ನುಗ್ಗುತ್ತಿದೆ.

‘ಹೊಂಬಾಳೆ ಫಿಲ್ಮ್ಸ್’ ಮೂಲಕ ‘ಕಾಂತಾರ: ಚಾಪ್ಟರ್ 1’ ಸಿನಿಮಾ ನಿರ್ಮಾಣ ಆಗಿದೆ. ನಿರ್ಮಾಣ ಸಂಸ್ಥೆಯ ಯೂಟ್ಯೂಬ್ ಚಾನೆಲ್ ಮೂಲಕ ಟ್ರೇಲರ್ ಬಿಡುಗಡೆ ಆಗಿದೆ. ಕನ್ನಡದ ಜೊತೆಗೆ ಹಿಂದಿ, ಮಲಯಾಳಂ, ತಮಿಳು, ತೆಲುಗು ಮುಂತಾದ ಭಾಷೆಗಳಲ್ಲಿ ಟ್ರೇಲರ್ ಬಂದಿದೆ. ಟ್ರೇಲರ್ ನೋಡಿದ ಅಭಿಮಾನಿಗಳು ವಾವ್ ಎನ್ನುತ್ತಿದ್ದಾರೆ. ಎಲ್ಲರೂ ಈ ಸಿನಿಮಾಗಾಗಿ ಕಾದಿದ್ದಾರೆ.

24 ಗಂಟೆಗಳಲ್ಲಿ ಕನ್ನಡ ವರ್ಷನ್ ಟ್ರೇಲರ್ 15 ಮಿಲಿಯನ್ ವೀವ್ಸ್ ಪಡೆದಿದೆ. ಹಿಂದಿ ಟ್ರೇಲರ್​ಗೆ 26 ಮಿಲಿಯನ್ ವೀವ್ಸ್ ಬಂದಿದೆ. ತೆಲುಗು 14 ಮಿಲಿಯನ್, ತಮಿಳು 10 ಮಿಲಿಯನ್, ಮಲಯಾಳಂ 6.1 ಮಿಲಿಯನ್ ಬಾರಿ ವೀಕ್ಷಣೆ ಕಂಡಿದೆ. ಇದು ಯೂಟ್ಯೂಬ್ ಲೆಕ್ಕಾಚಾರ. ಸೋಶಿಯಲ್ ಮೀಡಿಯಾದಲ್ಲಿನ ವೀವ್ಸ್ ಕೂಡ ಸೇರಿಸಿದರೆ 24 ಗಂಟೆಯೊಳಗೆ 107 ಮಿಲಿಯನ್​​ಗಿಂತಲೂ ಅಧಿಕ ಆಗಿದೆ.

ನಿರ್ಮಾಪಕ ವಿಜಯ್ ಕಿರಗಂದೂರು ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾವನ್ನು ಗ್ರ್ಯಾಂಡ್ ಆಗಿ ಬಿಡುಗಡೆ ಮಾಡಲು ಮುಂದಾಗಿದ್ದಾರೆ. ‘ಅಕ್ಟೋಬರ್ 2ರಂದು ಭಾರತದಾದ್ಯಂತ 7 ಸಾವಿರಕ್ಕೂ ಹೆಚ್ಚು ಸ್ಕ್ರೀನ್​ಗಳಲ್ಲಿ ರಿಲೀಸ್ ಆಗುತ್ತದೆ. ಜೊತೆಗೆ 30 ದೇಶಗಳಲ್ಲಿ ಏಕಕಾಲಕ್ಕೆ ರಿಲೀಸ್ ಮಾಡುತ್ತೇವೆ. ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾವೊಂದು ಸ್ಪ್ಯಾನಿಷ್ ಭಾಷೆಯಲ್ಲಿ ಡಬ್ಬಿಂಗ್ ಕೂಡ ಆಗುತ್ತಿದೆ’ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಕಾಂತಾರ ನೋಡುವವರು ಮಾಂಸಾಹಾರ ತಿನ್ನಬಾರದಾ? ವೈರಲ್ ಪೋಸ್ಟರ್​​ಗೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ

‘ಕಾಂತಾರ: ಚಾಪ್ಟರ್ 1’ ಟ್ರೇಲರ್​​ಗೆ ಸಿಕ್ಕ ಪ್ರತಿಕ್ರಿಯೆ ನೋಡಿದರೆ ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ಎಷ್ಟು ನಿರೀಕ್ಷೆ ಇದೆ ಎಂಬುದು ತಿಳಿಯುತ್ತದೆ. 2022ರಲ್ಲಿ ಬಂದಿದ್ದ ‘ಕಾಂತಾರ’ ಚಿತ್ರದ ಪ್ರೀಕ್ವೆಲ್ ಆಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ನಿರ್ಮಾಣ ಆಗಿದೆ. ಹಾಗಾಗಿ ಹೈಪ್ ಜಾಸ್ತಿ ಇದೆ. ಅಜನೀಶ್ ಲೋಕನಾಥ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ಅರವಿಂದ್ ಕಶ್ಯಪ್ ಛಾಯಾಗ್ರಹಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.