AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ನೋಡಿ ರಿಷಬ್​ನ ಹಗ್ ಮಾಡಿ ಅತ್ತ ಪ್ರಗತಿ ಶೆಟ್ಟಿ

‘ಕಾಂತಾರ: ಚಾಪ್ಟರ್ 1’ ಸಿನಿಮಾ ದೊಡ್ಡ ಯಶಸ್ಸು ಕಂಡಿದೆ. ಪ್ರೀಮಿಯರ್ ಶೋಗಳಿಂದಲೇ ಮೆಚ್ಚುಗೆ ಗಳಿಸಿದ ಈ ಚಿತ್ರದ ವಿಶೇಷ ವಿಡಿಯೋ ವೈರಲ್ ಆಗಿದೆ. ಪ್ರಗತಿ ಶೆಟ್ಟಿ ಅವರು ರಿಷಬ್ ಶೆಟ್ಟಿಯನ್ನು ತಬ್ಬಿ ಭಾವುಕರಾಗಿ ಅತ್ತಿದ್ದು, ಅವರ ಖುಷಿಯ ಕ್ಷಣ ಇದಾಗಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ ಈ ಚಿತ್ರ ಅದ್ದೂರಿ ಕಲೆಕ್ಷನ್ ನಿರೀಕ್ಷೆಯಲ್ಲಿದೆ.

‘ಕಾಂತಾರ: ಚಾಪ್ಟರ್ 1’ ನೋಡಿ ರಿಷಬ್​ನ ಹಗ್ ಮಾಡಿ ಅತ್ತ ಪ್ರಗತಿ ಶೆಟ್ಟಿ
ರಿಷಬ್-ಪ್ರಗತಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 02, 2025 | 8:38 AM

Share

‘ಕಾಂತಾರ: ಚಾಪ್ಟರ್ 1’ ಸಿನಿಮಾ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗಿ ಯಶಸ್ಸು ಕಂಡಿದ್ದನ್ನು ಕಾಣಬಹುದು. ಸಿನಿಮಾಗೆ ಪ್ರೀಮಿಯರ್ ಶೋಗಳಿಂದ ಮೆಚ್ಚುಗೆ ಬಂದಿದೆ ಮತ್ತು ಜನರು ಸಿನಿಮಾಗಳನ್ನು ಇಷ್ಟಪಟ್ಟಿದ್ದನ್ನು ಕಾಣಬಹುದು. ಹೀಗಿರುವಾಗಲೇ ‘ಕಾಂತಾರ: ಚಾಪ್ಟರ್ 1’ ಚಿತ್ರದ ವಿಶೇಷ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ರಿಷಬ್​ ಅವರನ್ನು ತಬ್ಬಿ ಪ್ರಗತಿ ಶೆಟ್ಟಿ ಅತ್ತಿದ್ದನ್ನು ಕಾಣಬಹುದು. ಅವರು ಖುಷಿಯಿಂದ ಈ ರೀತಿ ಮಾಡಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಚಿತ್ರದ ವಿಶೇಷ ಶೋಗಳನ್ನು ಆಯೋಜನೆ ಮಾಡಲಾಗಿತ್ತು. ಇದರ ಜೊತೆಗೆ ಸಿನಿಮಾದಲ್ಲಿ ಕೆಲಸ ಮಾಡಿದ ತಾಂತ್ರಿಕ ವರ್ಗದ ಕುಟುಂಬದವರಿಗೂ ಸಿನಿಮಾನ ಆಯೋಜನೆ ಮಾಡಲಾಯಿತು. ಈ ವೇಳೆ ರಿಷಬ್, ಪ್ರಗತಿ ಶೆಟ್ಟಿ ಮೊದಲಾದವರು ಇದ್ದರು. ಅವರು ಸಿನಿಮಾನ ಖುಷಿಯಿಂದ ವೀಕ್ಷಣೆ ಮಾಡಿದ್ದಾರೆ.

ಇದನ್ನೂ ಓದಿ
Image
ಕ್ಲೈಮ್ಯಾಕ್ಸ್​ನಲ್ಲಿ ‘ಕಾಂತಾರ: ಚಾಪ್ಟರ್ 2’ ಬಗ್ಗೆ ಘೋಷಣೆ
Image
ಪ್ರೀಮಿಯರ್ ಶೋಗಳಿಂದಲೇ ಕೋಟಿ ಕೋಟಿ ಬಾಚಿದ ‘ಕಾಂತಾರ: ಚಾಪ್ಟರ್ 1’
Image
‘ಕಾಂತಾರ: ಚಾಪ್ಟರ್1’ ವಿಮರ್ಶೆ: ದಂತಕಥೆಯಲ್ಲಿ ಅದ್ದೂರಿತನ; ಇದು ದೈವದ ಕಥನ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ರಿಷಬ್ ಶೆಟ್ಟಿ ಅವರ ಜೊತೆ ಪತ್ನಿ ಪ್ರಗತಿ ಶೆಟ್ಟಿಯೂ ‘ಕಾಂತಾರ: ಚಾಪ್ಟರ್ 1’ ಸಿನಿಮಾನ ವೀಕ್ಷಣೆ ಮಾಡಿದ್ದಾರೆ. ಈ ಚಿತ್ರವನ್ನು ನೋಡಿ ಪ್ರಗತಿ ಅವರು ಭಾವುಕರಾದರು. ಅವರು ಹೋಗಿ, ರಿಷಬ್​ನ ತಬ್ಬಿಕೊಂಡು ಅತ್ತಿದ್ದಾರೆ. ರಿಷಬ್ ಅವರು ಈ ವೇಳೆ ಪತ್ನಿಯನ್ನು ಸಮಾಧಾನ ಮಾಡಲು ಪ್ರಯತ್ನಿಸಿದ್ದನ್ನು ವಿಡಿಯೋದಲ್ಲಿ ಕಾಣಬಹುದು.

ಈ ಮೊದಲು ‘ಕಾಂತಾರ’ ಸಿನಿಮಾದ ಪ್ರೀಮಿಯರ್ ಶೋನಲ್ಲಿ ರಕ್ಷಿತ್ ಶೆಟ್ಟಿ ಅವರು ಇದ್ದರು. ಅವರು ಓಡಿ ಬಂದು ರಿಷಬ್​​ನ ತಬ್ಬಿಕೊಂಡು ಕೊಂಡಾಡಿದ್ದರು. ಈಗ ‘ಕಾಂತಾರ: ಚಾಪ್ಟರ್ 1’ ಚಿತ್ರದ ವೇಳೆ ಪ್ರಗತಿ ಶೆಟ್ಟಿ ಅವರು ಈ ಕೆಲಸ ಮಾಡಿದ್ದಾರೆ. ರಿಷಬ್ ಅವರು ಕೂಡ ಸಿನಿಮಾಗೆ ಸಿಕ್ಕ ಪ್ರತಿಕ್ರಿಯೆ ನೋಡಿ ಖುಷಿ ಆಗಿದ್ದಾರೆ.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್1’ ವಿಮರ್ಶೆ: ದಂತಕಥೆಯಲ್ಲಿ ಅದ್ದೂರಿತನ; ಇದು ದೈವದ ಕಥನ

‘ಕಾಂತಾರ: ಚಾಪ್ಟರ್ 1’ ಸಿನಿಮಾ ಅದ್ದೂರಿ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಕನ್ನಡಿಗರಿಂದ ಸಿನಿಮಾಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಪರಭಾಷಿಗರಿಂದ ಸಿನಿಮಾಗೆ ಯಾವ ರೀತಿಯಲ್ಲಿ ಪ್ರತಿಕ್ರಿಯೆ ಸಿಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಈ ಚಿತ್ರಕ್ಕೆ ಪ್ರಗತಿ ಶೆಟ್ಟಿ ಅವರು ಕಾಸ್ಟ್ಯೂಮ್ ಡಿಸೈನ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್