AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

200 ರೂ. ಸಿನಿಮಾ ಟಿಕೆಟ್ ದರ ನಿಗದಿ ಪ್ರಶ್ನಿಸಿ ಕೋರ್ಟ್​​ ಮೊರೆಹೋದ ಮಲ್ಟಿಪ್ಲೆಕ್ಸ್ ಒಕ್ಕೂಟ

ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇವೆ. ಈ ಸಂದರ್ಭದಲ್ಲಿ ಸಿನಿಮಾ ಟಿಕೆಟ್ ದರದ ಬಗ್ಗೆ ಮಲ್ಟಿಪ್ಲೆಕ್ಸ್ ಒಕ್ಕೂಟ ತಕರಾರು ತೆಗೆದಿದೆ. ಸರ್ಕಾರ ನಿಗದಿ ಮಾಡಿರುವ 200 ರೂಪಾಯಿ ಟಿಕೆಟ್ ದರವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

200 ರೂ. ಸಿನಿಮಾ ಟಿಕೆಟ್ ದರ ನಿಗದಿ ಪ್ರಶ್ನಿಸಿ ಕೋರ್ಟ್​​ ಮೊರೆಹೋದ ಮಲ್ಟಿಪ್ಲೆಕ್ಸ್ ಒಕ್ಕೂಟ
High Court
ಮದನ್​ ಕುಮಾರ್​
|

Updated on:Sep 15, 2025 | 6:03 PM

Share

ಕರ್ನಾಟಕದಲ್ಲಿ 200 ರೂಪಾಯಿ ಸಿನಿಮಾ ಟಿಕೆಟ್ ದರ (Movie Ticket Price) ನಿಗದಿ ಮಾಡಲಾಗಿದೆ. ಈ ಮೊದಲು ಇದ್ದ ದುಬಾರಿ ಟಿಕೆಟ್ ಬೆಲೆಗೆ ಕಡಿವಾಣ ಹಾಕಲು ಈ ಆದೇಶ ನೀಡಲಾಗಿದೆ. ಇತ್ತೀಚೆಗೆ ಈ ನಿಯಮ ಜಾರಿಗೆ ಬಂದಿದೆ. ಇದರಿಂದಾಗಿ ಪ್ರೇಕ್ಷಕರಿಗೆ ಅನುಕೂಲ ಆಗಲಿದೆ. ಆದರೆ ಕೆಲವರು ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ಮಲ್ಟಿಪ್ಲೆಕ್ಸ್ ಒಕ್ಕೂಟವು (Multiplex Association) ಹೈಕೋರ್ಟ್​​​ನಲ್ಲಿ ಅರ್ಜಿ ಸಲ್ಲಿಸಿದೆ. ‘ಹೊಂಬಾಳೆ ಫಿಲ್ಮ್ಸ್’ ನಿರ್ಮಾಣ ಮಾಡಿರುವ ‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾದ ಬಿಡುಗಡೆಗೂ ಮುನ್ನ ಈ ಬೆಳವಣಿಗೆ ನಡೆದಿದೆ.

ಸೆಪ್ಟೆಂಬರ್ 16ರಂದು ಈ ಅರ್ಜಿಯ ವಿಚಾರಣೆ ನಡೆಯಲಿದೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಅಕ್ಟೋಬರ್ 2ರಂದು ಈ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಸಿನಿಮಾ ಟಿಕೆಟ್ ದರ ಕಡಿಮೆ ಮಾಡಿರುವುದರಿಂದ ಕಲೆಕ್ಷನ್ ಕಡಿಮೆ ಆಗುವ ಸಾಧ್ಯತೆ ಇದೆ. ಮುಂಬರುವ ಹಲವು ಬಿಗ್ ಬಜೆಟ್ ಸಿನಿಮಾಗಳಿಗೂ ಇದರ ಬಿಸಿ ತಟ್ಟಬಹುದು. ಈ ಹಿನ್ನೆಲೆಯಲ್ಲಿ ಕೋರ್ಟ್ ಮೊರೆ ಹೋಗಲಾಗಿದೆ.

ಆಂಧ್ರದಲ್ಲಿ ಕೂಡ ಟಿಕೆಟ್ ಬೆಲೆ ಏರಿಕೆಗೆ ಕಡಿವಾಣ ಇದೆ. ಆದರೆ ದೊಡ್ಡ ಬಜೆಟ್ ಸಿನಿಮಾಗಳು ಬಿಡುಗಡೆ ಆದಾಗ ನಿರ್ಮಾಪಕರು ಸರ್ಕಾರದ ಬಳಿ ಅರ್ಜಿ ಹಾಕಿಕೊಂಡು ಬಿಡುಗಡೆ ಆದ ಮೊದಲ ವಾರ ಅಥವಾ 3 ದಿನ ಅಥವಾ 10 ದಿನಗಳ ಅವಧಿಯವರೆಗೆ ಟಿಕೆಟ್ ಬೆಲೆಯನ್ನು ಹೆಚ್ಚು ಮಾಡಲು ಅನುಮತಿ ಪಡೆಯುವ ಅವಕಾಶ ನೀಡಲಾಗಿದೆ. ಕರ್ನಾಟಕದಲ್ಲಿ ಕೂಡ ಈ ರೀತಿ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’: ರಿಷಬ್ ಶೆಟ್ಟಿಯ ಕೊಂಡಾಡಿದ ಪರಭಾಷೆ ಖ್ಯಾತ ಕಲಾ ನಿರ್ದೇಶಕ

ಕರ್ನಾಟಕದಲ್ಲಿ ಹಲವು ಬಿಗ್ ಬಜೆಟ್ ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿದೆ. ಅಕ್ಟೋಬರ್ 1ರಂದು ‘ಕಾಂತಾರ: ಚಾಪ್ಟರ್ 1’ ಬಿಡುಗಡೆ ಆಗಲಿದೆ. ಡಿಸೆಂಬರ್​​ ತಿಂಗಳಲ್ಲಿ ದರ್ಶನ್ ನಟನೆಯ ‘ಡೆವಿಲ್’, ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:45 pm, Mon, 15 September 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್