ರಿಷಬ್ ಶೆಟ್ಟಿ ಜನ್ಮದಿನಕ್ಕೆ ‘ಕಾಂತಾರ: ಚಾಪ್ಟರ್ 1’ ಚಿತ್ರದ ಕಡೆಯಿಂದ ಬಿಗ್ ಅಪ್ಡೇಟ್
Rishab Shetty Birthday: ರಿಷಬ್ ಶೆಟ್ಟಿ ಅವರಿಗೆ ಇಂದು ಜನ್ಮದಿನ. ಇದರ ಪ್ರಯುಕ್ತ ‘ಕಾಂತಾರ: ಚಾಪ್ಟರ್ 1’ಹೊಸ ಪೋಸ್ಟರ್ ಬಿಡುಗಡೆ ಆಗಿದೆ. ಈ ಸಿನಿಮಾ ಅಕ್ಟೋಬರ್ 2 ರಂದು ಬಿಡುಗಡೆಯಾಗಲಿದೆ ಎಂದು ತಿಳಿಸಲಾಗಿದೆ. ಇದು ಅಭಿಮಾನಿಗಳಲ್ಲಿ ಭಾರಿ ಉತ್ಸಾಹ ಮೂಡಿಸಿದೆ. ಪೋಸ್ಟರ್‌ನಲ್ಲಿ ರಿಷಬ್ ಶೆಟ್ಟಿ ಆಕ್ರೋಶದಿಂದ ಕೂಡಿದ್ದಾರೆ.

ರಿಷಬ್ ಶೆಟ್ಟಿ (Rishab Shetty) ಅವರಿಗೆ ಇಂದು (ಜುಲೈ 7) ಜನ್ಮದಿನ. ಅವರಿಗೆ ಅಭಿಮಾನಿಗಳ ಕಡೆಯಿಂದ ವಿಶ್ಗಳು ಬರುತ್ತಿವೆ. ವಿಶೇಷ ಎಂದರೆ ‘ಕಾಂತಾರ: ಚಾಪ್ಟರ್ 1’ ಕಡೆಯಿಂದ ದೊಡ್ಡ ಅಪ್ಡೇಟ್ ಒಂದು ಬಂದಿದೆ. ಈ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಮಾಡಿರೋ ತಂಡ ವಿಶೇಷ ಮಾಹಿತಿ ಒಂದನ್ನು ನೀಡಿದೆ. ಇದನ್ನು ಕೇಳಿ ಫ್ಯಾನ್ಸ್ ಭರ್ಜರಿ ಖುಷಿಪಟ್ಟಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
‘ಕಾಂತಾರ: ಚಾಪ್ಟರ್ 1’ ಚಿತ್ರದ ಸೆಟ್ನಲ್ಲಿ ಸಾಕಷ್ಟ ಅವಘಡಗಳು ಸಂಭವಿಸಿದವು. ಈ ಕಾರಣದಿಂದ ಸಿನಿಮಾ ರಿಲೀಸ್ ವಿಳಂಬ ಆಗಲಿದೆ ಎಂದು ಹೇಳಲಾಗುತ್ತಿತ್ತು. ಈ ವದಂತಿಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಹಬ್ಬಿದ್ದವು. ಆದರೆ, ಇದನ್ನು ತಂಡ ಅಲ್ಲಗಳೆದಿದೆ. ಅಂದುಕೊಂಡ ದಿನಾಂಕದಂದೇ ಸಿನಿಮಾ ಬಿಡುಗಡೆ ಆಗಲಿದೆ ಎಂದು ತಂಡ ಮಾಹಿತಿ ನೀಡಿದೆ.
ಅಕ್ಟೋಬರ್ 2 ಗಾಂಧೀ ಜಯಂತಿ. ಈ ಬಾರಿ ಗಾಂಧಿ ಜಯಂತಿ ಗುರುವಾರ ಬಂದಿದೆ. ಸರ್ಕಾರಿ ರಜೆ ಚಿತ್ರಕ್ಕೆ ಸಹಕಾರಿ ಆಗುವ ಸಾಧ್ಯತೆ ಇದೆ. ಇನ್ನು ಶುಕ್ರವಾರ, ಶನಿವಾರ ಹಾಗೂ ಭಾನುವಾರ ಸಿನಿಮಾ ಸಹಜವಾಗಿಯೇ ಒಳ್ಳೆಯ ಕಲೆಕ್ಷನ್ ಮಾಡಲಿದೆ. ಆ ಬಳಿಕ ಅಕ್ಟೋಬರ್ ಮಧ್ಯದಲ್ಲಿ ದೀಪಾವಳಿ ಬರಲಿದೆ. ಇದು ಕೂಡ ಸಿನಿಮಾಗೆ ಸಹಕಾರಿ ಆಗಲಿದೆ. ಇಂಥ ಚಾನ್ಸ್ನ ತಂಡ ಬಿಡಲು ರೆಡಿ ಇಲ್ಲ. ಹೀಗಾಗಿ, ಅದಕ್ಕೆ ತಕ್ಕಂತೆ ಕೆಲಸ ನಡೆಯುತ್ತಿದೆ.
View this post on Instagram
ರಿಲೀಸ್ ಆಗಿರುವ ಪೋಸ್ಟರ್ ಅದ್ದೂರಿಯಾಗಿದೆ. ರಿಷಬ್ ಶೆಟ್ಟಿ ಅವರು ಕೈಯಲ್ಲಿ ಕೊಡಲಿ ಹಾಗೂ ಗುರಾಣಿ ಹಿಡಿದಿದ್ದಾರೆ. ಗುರಾಣಿಗೆ ಬಾಣಗಳು ಚುಚ್ಚಿವೆ. ಹಿಂಭಾಗದಲ್ಲಿ ಬೆಂಕಿ ಇದೆ. ರಿಷಬ್ ಶೆಟ್ಟಿ ಮುಖದಲ್ಲಿ ಆಕ್ರೋಶದ ಜ್ವಾಲೆ ಕಾಣಿಸುತ್ತಿದೆ. ಈ ರೀತಿಯಲ್ಲಿ ಪೋಸ್ಟರ್ ಮೂಡಿ ಬಂದಿದೆ. ‘ದಂತಕಥೆಯ ಮುನ್ನುಡಿ. ಆ ನುಡಿಗೊಂದು ಪರಿಚಯ. ಮನದಾಳದ ಕಥೆಗೆ ಮತ್ತೊಮ್ಮೆ ಸ್ವಾಗತ’ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.
ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ಹಲವು ಅಡ್ಡಿ-ಆತಂಕ; ಆದರೂ ಅಂದುಕೊಂಡ ದಿನಾಂಕದಲ್ಲೇ ಚಿತ್ರ ರಿಲೀಸ್
‘ಮತ್ತೆ ಇಡೀ ದೇಶ ನಮ್ಮ ಕನ್ನಡ ಚಿತ್ರವನ್ನು ತಿರಗಿ ನೋಡುವಂತೆ ಆಗಲಿ. ನಿಮಗೆ ಮತ್ತು ನಿಮ್ಮ ಚಿತ್ರ ತಂಡಕ್ಕ ಶುಭವಾಗಲಿ’ ಎಂದು ಫ್ಯಾನ್ಸ್ ಕೋರಿದ್ದಾರೆ. ‘ಕಾಂತಾರ’ ಸಿನಿಮಾದ ಪ್ರೀಕ್ವೆಲ್ ಆಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಸಿನಿಮಾ ಪಾತ್ರವರ್ಗದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಈ ಸಿನಿಮಾನ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.