‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ಭರ್ಜರಿ ರೇಟಿಂಗ್; ವೀಕ್ಷಕರು ಕೊಟ್ಟ ಅಂಕ ಎಷ್ಟು?

Kantara Chapter 1 Rating: ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸಿದ್ದಾರೆ. ಈ ಚಿತ್ರವನ್ನು ನಿರ್ದೇಶನ ಕೂಡ ಮಾಡಿದ್ದಾರೆ. ಅವರು ಕೆಲವು ದೃಶ್ಯಗಳನ್ನು ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಈ ಸಿನಿಮಾ ಅಭಿಮಾನಿಗಳ ಪಾಲಿಗೆ ವಿಶೇಷ ಎನಿಸಿಕೊಂಡಿದೆ. ಈ ಸಿನಿಮಾನ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ಭರ್ಜರಿ ರೇಟಿಂಗ್; ವೀಕ್ಷಕರು ಕೊಟ್ಟ ಅಂಕ ಎಷ್ಟು?
ಕಾಂತಾರ

Updated on: Oct 02, 2025 | 12:34 PM

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾ ಸೂಪರ್ ಹಿಟ್ ಆಗಿವ ಸೂಚನೆ ಕೊಟ್ಟಿದೆ. ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುವ ಸೂಚನೆ ಕೊಟ್ಟಿದೆ. ಮೊದಲ ದಿನವೇ ಸಿನಿಮಾ ಬಹುತೇಕ ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ವಿಮರ್ಶೆ ಕೇಳಿ ಜನರು ಹೆಚ್ಚೆಚ್ಚು ಚಿತ್ರಮಂದಿರಕ್ಕೆ ತೆರಳುತ್ತಿದ್ದಾರೆ. ಸಿನಿಮಾ ನೋಡಿ ಬಂದವರು ಒಳ್ಳೆಯ ರೀತಿಯಲ್ಲಿ ರೇಟಿಂಗ್ ಕೊಡುತ್ತಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಚಿತ್ರ ಅಕ್ಟೋಬರ್ 1 ಪ್ರೀಮಿಯರ್ ಶೋಗಳನ್ನು ಆಯೋಜನೆ ಮಾಡಲಾಯಿತು. ಸಾವಿರಾರು ಕಡೆಗಳಲ್ಲಿ ಚಿತ್ರದ ಪ್ರೀಮಿಯರ್ ಶೋ ಆಯೋಜನೆ ಮಾಡಲಾಯಿತು. ಇದು ಚಿತ್ರಕ್ಕೆ ಸಹಕಾರಿ ಆಗಿದೆ. ಈವರೆಗೆ (ಅಕ್ಟೋಬರ್ 2, ಮಧ್ಯಾಹ್ನ 12 ಗಂಟೆ) 7 ಸಾವಿರ ಜನರು ರೇಟಿಂಗ್ ಕೊಟ್ಟಿದ್ದಾರೆ. ಚಿತ್ರ 9.6 ರೇಟಿಂಗ್ ಪಡೆದುಕೊಂಡಿದೆ.

ಸಿನಿಮಾ ನೋಡಿದ ಬಹುತೇಕರು ಚಿತ್ರವನ್ನು ಹೊಗಳಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ 2ಡಿ, ಐಸ್, ಐಮ್ಯಾಕ್ಸ್ 2ಡಿ, 4ಡಿಎಕ್ಸ್, ಡಾಲ್ಬಿ ಸಿನಿಮಾ 2ಡಿಯಲ್ಲಿ ಚಿತ್ರ ವೀಕ್ಷಣೆಗೆ ಲಭ್ಯವಿದೆ. ಕನ್ನಡ, ಹಿಂದಿ, ಇಂಗ್ಲಿಷ್, ತೆಲುಗು, ಮಲಯಾಳಂ, ತಮಿಳು ಹಾಗೂ ಬೆಂಗಾಳಿ ಭಾಷೆಯಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಬೆಂಗಳೂರಿನಲ್ಲಿ ಕನ್ನಡ, ತೆಲುಗು, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ನೋಡಬಹುದಾಗಿದೆ.

ಇದನ್ನೂ ಓದಿ
ಕ್ಲೈಮ್ಯಾಕ್ಸ್​ನಲ್ಲಿ ‘ಕಾಂತಾರ: ಚಾಪ್ಟರ್ 2’ ಬಗ್ಗೆ ಘೋಷಣೆ
ಪ್ರೀಮಿಯರ್ ಶೋಗಳಿಂದಲೇ ಕೋಟಿ ಕೋಟಿ ಬಾಚಿದ ‘ಕಾಂತಾರ: ಚಾಪ್ಟರ್ 1’
‘ಕಾಂತಾರ: ಚಾಪ್ಟರ್1’ ವಿಮರ್ಶೆ: ದಂತಕಥೆಯಲ್ಲಿ ಅದ್ದೂರಿತನ; ಇದು ದೈವದ ಕಥನ
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್1’ ವಿಮರ್ಶೆ: ದಂತಕಥೆಯಲ್ಲಿ ಅದ್ದೂರಿತನ; ಇದು ದೈವದ ಕಥನ

‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸಿದ್ದಾರೆ. ಈ ಚಿತ್ರವನ್ನು ನಿರ್ದೇಶನ ಕೂಡ ಮಾಡಿದ್ದಾರೆ. ಅವರು ಕೆಲವು ದೃಶ್ಯಗಳನ್ನು ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಈ ಸಿನಿಮಾ ಅಭಿಮಾನಿಗಳ ಪಾಲಿಗೆ ವಿಶೇಷ ಎನಿಸಿಕೊಂಡಿದೆ. ಈ ಸಿನಿಮಾನ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:14 pm, Thu, 2 October 25