ಅಬ್ಬಬ್ಬಾ ‘ಕಾಂತಾರ: ಚಾಪ್ಟರ್ 1’ ಎಷ್ಟೊಂದು ಅದ್ದೂರಿ; 250 ದಿನಗಳ ಶೂಟಿಂಗ್ ಮುಗಿಸಿದ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ‘ಕಾಂತಾರ: ಚಾಪ್ಟರ್ 1’ ಚಿತ್ರದ 250 ದಿನಗಳ ಚಿತ್ರೀಕರಣ ಪೂರ್ಣಗೊಂಡಿದೆ. ಹೊಂಬಾಳೆ ಫಿಲ್ಮ್ಸ್ ಈ ಸುದ್ದಿಯನ್ನು ಅಧಿಕೃತಗೊಳಿಸಿದೆ. ಅಕ್ಟೋಬರ್ 2ರಂದು ಚಿತ್ರ ಬಿಡುಗಡೆಯಾಗಲಿದೆ. ಚಿತ್ರದ ಮೇಕಿಂಗ್ ವಿಡಿಯೋ ಬಿಡುಗಡೆಯಾಗಿದ್ದು, ಅದರಲ್ಲಿ ಚಿತ್ರದ ಅದ್ಭುತತೆಯನ್ನು ತೋರಿಸಲಾಗಿದೆ.

ಅಬ್ಬಬ್ಬಾ ‘ಕಾಂತಾರ: ಚಾಪ್ಟರ್ 1’ ಎಷ್ಟೊಂದು ಅದ್ದೂರಿ; 250 ದಿನಗಳ ಶೂಟಿಂಗ್ ಮುಗಿಸಿದ ರಿಷಬ್ ಶೆಟ್ಟಿ
ರಿಷಬ್ ಶೆಟ್ಟಿ

Updated on: Jul 21, 2025 | 11:23 AM

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಕಾಂತಾರ: ಚಾಪ್ಟರ್ 1’ (Kantara: Chapter 1) ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ. ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ತನ್ನ ಯೂಟ್ಯೂಬ್ ಚಾನೆಲ್​ನಲ್ಲಿ ವಿಡಿಯೋ ಹರಿಬಿಟ್ಟು ಈ ವಿಚಾರವನ್ನು ಅಧಿಕೃತ ಮಾಡಿದೆ. ಈ ಸಿನಿಮಾದ ಅದ್ದೂರಿತನವನ್ನು ತೋರಿಸಲು ಮೇಕಿಂಗ್ ವಿಡಿಯೋ ಸಾಕ್ಷಿ ಒದಗಿಸಿದೆ. ಈ ಚಿತ್ರಕ್ಕೆ ಬರೋಬ್ಬರಿ 250 ದಿನಗಳ ಕಾಲ ಶೂಟಿಂಗ್ ನಡೆದಿದೆ. ಅಕ್ಟೋಬರ್ 2ರಂದು ಸಿನಿಮಾ ತೆರೆಗೆ ಬರಲಿದೆ.

‘ರಾಜಕುಮಾರ’, ‘ಕೆಜಿಎಫ್’, ‘ಸಲಾರ್’, ‘ಕಾಂತಾರ’ದಂತಹ ಹಿಟ್ ಚಿತ್ರಗಳನ್ನು ನೀಡಿದ ಹೊಂಬಾಳೆ ಫಿಲ್ಮ್ಸ್ ‘ಕಾಂತಾರ: ಚಾಪ್ಟರ್ 1’ ಕೈಗೆತ್ತಿಕೊಂಡಾಗ ಸಾಕಷ್ಟು ಕುತೂಹಲ ಮೂಡಿತ್ತು. ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡುವ ಕೆಲಸವನ್ನು ಹೊಂಬಾಳೆ ಫಿಲ್ಮ್ಸ್ ಮಾಡುತ್ತಿದೆ. ಸಿನಿಮಾದ ಮೇಕಿಂಗ್ ವಿಡಿಯೋದಲ್ಲಿ ತಂಡದ ಶ್ರಮ ಎದ್ದು ಕಾಣಿಸಿದೆ.

3 ವರ್ಷಗಳ ಕಾಲ ರಿಷಬ್ ಹಾಗೂ ತಂಡ ‘ಕಾಂತಾರ: ಚಾಪ್ಟರ್ 1’ ಕೆಲಸದಲ್ಲಿ ತೊಡಗಿಕೊಂಡಿತ್ತು. ಅಷ್ಟೇ ಅಲ್ಲ, 250 ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ. ಸಾವಿರಾರು ಸಿಬ್ಬಂದಿ ಹಗಲಿರುಳು ದುಡಿದಿದ್ದಾರೆ. ಮೇಕಿಂಗ್ ವಿಡಿಯೋ ಮೂಲಕ ಚಿತ್ರ ಹೇಗಿರಲಿದೆ ಎಂಬುದರ ಝಲಕ್ ಸಿಕ್ಕಿದ್ದು ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ
ಈ ದಿನಂದು ‘ಕಣ್ಣಪ’ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ?
ಈ ಸಸ್ಪೆನ್ಸ್ ಥ್ರಿಲ್ಲರ್​ ಚಿತ್ರವನ್ನು ಒಟಿಟಿಯಲ್ಲಿ ಮಿಸ್ ಮಾಡಲೇಬೇಡಿ
‘ಎಕ್ಕ’ ಚಿತ್ರಕ್ಕೆ ಸರಿ ಸಮಾನವಾಗಿ ಗಳಿಕೆ ಮಾಡುತ್ತಿದೆ ‘ಜೂನಿಯರ್’
ಬಾಕ್ಸ್ ಆಫೀಸ್ ಉಡೀಸ್ ಮಾಡಿದ ‘ಎಕ್ಕ’ ಸಿನಿಮಾ; ಭಾನುವಾರ ಬಂಗಾರದ ಬೆಳೆ

‘ಕಾಂತಾರ: ಚಾಪ್ಟರ್ 1’ ಮೇಕಿಂಗ್ ವಿಡಿಯೋ

YouTube video player

‘ಕಾಂತಾರ ಚಾಪ್ಟರ್ 1′ ಹೊಂಬಾಳೆ ಫಿಲ್ಮ್ಸ್‌ನ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದು ಎಂದರೂ ತಪ್ಪಾಗಲಾರದು. ಈ ಚಿತ್ರಕ್ಕೆ ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕಾಂತಾರ’ ಚಿತ್ರಕ್ಕೆ ಅವರು ನೀಡಿದ ಮ್ಯೂಸಿಕ್ ಗಮನ ಸೆಳೆದಿತ್ತು. ಈ ಚಿತ್ರದ ಮೂಲಕ ಅವರು ಮತ್ತೆ ಮೋಡಿ ಮಾಡುವ ಭರವಸೆಯಲ್ಲಿ ಇದ್ದಾರೆ. ಅರವಿಂದ್ ಕಶ್ಯಪ್ ಛಾಯಾಗ್ರಾಹಣ, ವಿನೇಶ್ ಬಂಗ್ಲನ್ ಪ್ರೊಡಕ್ಷನ್ ಡಿಸೈನ್ ಚಿತ್ರಕ್ಕೆ ಇದೆ. ಈ ಚಿತ್ರದ ಪಾತ್ರವರ್ಗದ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಇಲ್ಲ.

ಇದನ್ನೂ ಓದಿ: ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ; ಇಲ್ಲಿದೆ ಸೆಲೆಬ್ರೇಷನ್ ವಿಡಿಯೋ

ಈ ಸಿನಿಮಾ ಕನ್ನಡ, ತೆಲುಗು, ಹಿಂದಿ, ಮಲಯಾಳಂ, ತಮಿಳು, ಬೆಂಗಾಲಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ತೆರೆ ಕಾಣಲಿದೆ. ಇದರಿಂದ ಸಿನಿಮಾ ತನ್ನ ಸಾಂಸ್ಕೃತಿಕ ಬೇರುಗಳನ್ನು ಉಳಿಸಿಕೊಂಡೇ ವಿವಿಧ ಭಾಷೆ ಮತ್ತು ಪ್ರದೇಶಗಳ ಪ್ರೇಕ್ಷಕರನ್ನು ತಲುಪಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published On - 11:19 am, Mon, 21 July 25

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us