ದೀಪಾವಳಿಗೆ ಬಂಪರ್ ಲಾಟರಿ; ಡಬಲ್ ಡಿಜಿಟ್ ಕಲೆಕ್ಷನ್ ಮಾಡಿದ ‘ಕಾಂತಾರ: ಚಾಪ್ಟರ್ 1’
ಕಾಂತಾರ: ಚಾಪ್ಟರ್ 1 ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ವಿಶ್ವ ಮಟ್ಟದಲ್ಲಿ 800 ಕೋಟಿ ರೂ. ದಾಟಿದ್ದು, ಭಾರತದಲ್ಲಿ 547 ಕೋಟಿ ಗಳಿಸಿದೆ. ದೀಪಾವಳಿ ಸಂದರ್ಭದಲ್ಲಿ ಡಬಲ್ ಡಿಜಿಟ್ ಕಲೆಕ್ಷನ್ ಮಾಡಿ ಗಮನ ಸೆಳೆದಿದೆ. ಈ ಚಿತ್ರವು ಜಾಗತಿಕವಾಗಿ 1000 ಕೋಟಿ ಕ್ಲಬ್ ಸೇರುವ ನಿರೀಕ್ಷೆಯಿದೆ.

‘ಕಾಂತಾರ: ಚಾಪ್ಟರ್ 1’ (Kantara) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ ಎಷ್ಟು ಕೋಟಿ ರೂಪಾಯಿ ಆಗಬಹುದು ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ದೀಪಾವಳಿ ಸಂದರ್ಭದಲ್ಲಿ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಬಹುದು ಎಂಬ ನಂಬಿಕೆ ಅಭಿಮಾನಿಗಳಿಗೆ ಇತ್ತು. ಅದು ನಿಜವಾಗಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಸಿನಿಮಾ ಡಬಲ್ ಡಿಜಿಟ್ ಕಲೆಕ್ಷನ್ ಮಾಡಿದೆ. ವಿಶ್ವ ಮಟ್ಟದಲ್ಲಿ ಸಿನಿಮಾ ಗಳಿಕೆ 800 ಕೋಟಿ ರೂಪಾಯಿ ದಾಟಿದೆ.
‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್ ಆಗಿದ್ದು ಅಕ್ಟೋಬರ್ 2ರಂದು. ಈ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಸಿನಿಮಾ ಬಿಡುಗಡೆ ಆಗಿ 20 ದಿನಗಳು ಕಳೆದಿವೆ. ಅಂದಿನಿಂದ ಇಲ್ಲಿವರೆಗೆ ಚಿತ್ರ ಭಾರರದ ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 547 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಇದು ಚಿತ್ರದ ಹೆಚ್ಚುಗಾರಿಕೆ.
ಅಕ್ಟೋಬರ್ 21ರಂದು ಸಿನಿಮಾ 12 ಕೋಟಿ ರೂಪಾಯಿ ಗಳಿಸಿದೆ. ಇದು ಸಿನಿಮಾದ ಪಾಲಿಗೆ ಮೂರನೇ ಮಂಗಳವಾರ. ಆದಾಗ್ಯೂ ಸಿನಿಮಾ ಡಬಲ್ ಡಿಜಿಟ್ ಕಲೆಕ್ಷ್ ಮಾಡುತ್ತಿದೆ. ಹೀಗೆಯೇ ಮುಂದುವರಿದರೆ ಭಾರತದ ಬಾಕ್ಸ್ ಆಫೀಸ್‌ನಲ್ಲಿ ಸಿನಿಮಾ 600 ಕೋಟಿ ರೂಪಾಯಿ ಕಲೆಕ್ಷನ್ ಮಾಡಲಿದೆ. ವಿಶ್ವ ಬಾಕ್ಸ್ ಆಫೀಸ್‌ನಲ್ಲಿ ಸಿನಿಮಾ 1000 ಕೋಟಿ ರೂಪಾಯಿ ಕ್ಲಬ್ ಸೇರುವ ನಿರೀಕ್ಷೆ ಇದೆ.
ಇದನ್ನೂ ಓದಿ: ದೀಪಾವಳಿಗೆ ಹೇಗಿದೆ ‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್?
‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ಸಾವಿರ ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಇದಾದ ಬಳಿಕ ಕನ್ನಡದ ಯಾವುದೇ ಸಿನಿಮಾ ಕೂಡ ಅಷ್ಟು ದೊಡ್ಡ ಮೊತ್ತದ ಗಳಿಕೆ ಮಾಡಿಲ್ಲ. 547 ಕೋಟಿ ರೂಪಾಯಿಯಲ್ಲಿ ಕನ್ನಡಕ್ಕಿಂತ ಹಿಂದಿಯ ಗಳಿಕೆಯೇ ಕಲೆಕ್ಷನ್ ಹೆಚ್ಚಿದೆ ಅನ್ನೋದು ವಿಶೇಷ.
ಬರುತ್ತಾ ‘ಕಾಂತಾರ: ಚಾಪ್ಟರ್ 2’?
‘ಕಾಂತಾರ: ಚಾಪ್ಟರ್ 1’ ಚಿತ್ರದ ಕ್ಲೈಮ್ಯಾಕ್ಸ್ನಲ್ಲಿ ‘ಕಾಂತಾರ: ಚಾಪ್ಟರ್ 2’ ಸಿನಿಮಾ ಬರುವ ಬಗ್ಗೆ ಮಾಹಿತಿ ನೀಡಲಾಗಿದೆ. ಆದರೆ, ರಿಷಬ್ ಶೆಟ್ಟಿ ಅವರು ಬೇರೆ ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ, ಸದ್ಯಕ್ಕಂತೂ ಅವರು ಈ ಚಿತ್ರ ಎತ್ತಿಕೊಳ್ಳುವುದಿಲ್ಲ. ‘ಕೆಜಿಎಫ್ 3’ ಚಿತ್ರಕ್ಕೆ ಕಾದಷ್ಟೇ ಸಮಯ ಇದಕ್ಕೂ ಕಾಯಬೇಕಾದ ಪರಿಸ್ಥಿತಿ ಬಂದೊದಗಬಹುದು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.




