‘ಕಾಂತಾರ: ಚಾಪ್ಟರ್ 1’ ಟಿವಿ ಹಕ್ಕು ದೊಡ್ಡ ಮಟ್ಟಕ್ಕೆ ಮಾರಾಟ; ಇದರಲ್ಲಿ 5 ‘ಕಾಂತಾರ’ ನಿರ್ಮಿಸಬಹುದು

‘ಕಾಂತಾರ: ಚಾಪ್ಟರ್ 1’ ಚಿತ್ರದ ಟಿವಿ ಹಕ್ಕುಗಳನ್ನು ಜೀ ಕನ್ನಡ ದೊಡ್ಡ ಮಟ್ಟಕ್ಕೆ ಖರೀದಿಸಿದೆ. ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ಈ ಚಿತ್ರದ ಟ್ರೇಲರ್ ಸೆಪ್ಟೆಂಬರ್ 22 ರಂದು ಬಿಡುಗಡೆಯಾಗಲಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ ಈ ಚಿತ್ರದಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರದ ಬೃಹತ್ ಟಿವಿ ಹಕ್ಕು ಮಾರಾಟವು ಸಿನಿಮಾ ಕುರಿತಾದ ನಿರೀಕ್ಷೆಯನ್ನು ಹೆಚ್ಚಿಸಿದೆ.

‘ಕಾಂತಾರ: ಚಾಪ್ಟರ್ 1’ ಟಿವಿ ಹಕ್ಕು ದೊಡ್ಡ ಮಟ್ಟಕ್ಕೆ ಮಾರಾಟ; ಇದರಲ್ಲಿ 5 ‘ಕಾಂತಾರ’ ನಿರ್ಮಿಸಬಹುದು
ರಿಷಬ್

Updated on: Sep 19, 2025 | 2:57 PM

‘ಕಾಂತಾರ: ಚಾಪ್ಟರ್ 1’ ಸಿನಿಮಾ (Kantara: Chapter 1) ರಿಲೀಸ್​ಗೆ ಕೆಲವು ದಿನಗಳು ಮಾತ್ರ ಬಾಕಿ ಉಳಿದಿವೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾದ ಟ್ರೇಲರ್ ಸೆಪ್ಟೆಂಬರ್ 22ರಂದು ಮಧ್ಯಾಹ್ನ 12:45ಕ್ಕೆ ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ. ಹೀಗಿರುವಾಗಲೇ ಈ ಚಿತ್ರ ಮಾಡ್ತಿರೋ ಬಿಸ್ನೆಸ್​ಗಳ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ‘ಕಾಂತಾರ: ಚಾಪ್ಟರ್ 1’ ಚಿತ್ರದ ಟಿವಿ ಹಕ್ಕು ಮಾರಾಟದ ಮೊತ್ತ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಲು ಹಲವು ಕಾರಣಗಳು ಇವೆ. ಇದು ಸೂಪರ್ ಹಿಟ್ ‘ಕಾಂತಾರ’ ಸಿನಿಮಾದ ಪ್ರೀಕ್ವೆಲ್. ರಿಷಬ್ ಅವರೇ ಈ ಚಿತ್ರವನ್ನು ನಿರ್ದೇಶಿಸಿ, ನಟಿಸುತ್ತಿದ್ದಾರೆ. ಈ ಸಿನಿಮಾ ಯಾವ ರೀತಿಯಲ್ಲಿ ಮೂಡಿ ಬರಬಹುದು ಎಂಬ ಕುತೂಹಲ ಮೂಡಿದೆ. ಇದಕ್ಕೆ ಟ್ರೇಲರ್​ನಲ್ಲಿ ಉತ್ತರ ಸಿಗೋ ಸಾಧ್ಯತೆ ಇದೆ. ಹೀಗಿರುವಾಗಲೇ ಸಿನಿಮಾದ ಸ್ಯಾಟಲೈಟ್ ರೈಟ್ಸ್ ದೊಡ್ಡ ಮೊತ್ತಕ್ಕೆ ಮಾರಾಟ ಆದ ಸುದ್ದಿ ಹೊರ ಬಿದ್ದಿದೆ.

ಮೂಲಗಳ ಪ್ರಕಾರ ‘ಕಾಂತಾರ: ಚಾಪ್ಟರ್ 1’ ಚಿತ್ರದ ಟಿವಿ ಹಕ್ಕನ್ನು ಜೀ ಕನ್ನಡ ವಾಹಿನಿ ಪಡೆದುಕೊಂಡಿದೆ. ಇದಕ್ಕಾಗಿ ಅವರು ಪಾವತಿ ಮಾಡಿದ್ದು 80 ಕೋಟಿ ರೂಪಾಯಿ. ಈ ಚಿತ್ರ ಕೇವಲ ಕನ್ನಡ ಮಾತ್ರವಲ್ಲದೆ, ಹಿಂದಿ ಮೊದಲಾದ ಭಾಷೆಗಳಲ್ಲೂ ರಿಲೀಸ್ ಆಗುತ್ತಿದೆ. ಹೀಗಾಗಿ, ಹಿಂದಿ ಮೊದಲಾದ ಭಾಷೆಗಳ ಹಕ್ಕುಗಳು ಇದರಲ್ಲಿ ಸೇರಿವೆಯೇ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.

ಇದನ್ನೂ ಓದಿ
ಬಯಸಿ ಬಂದ ಪ್ರೀತಿಯನ್ನು ಕಾಲಿನಿಂದ ಒದ್ದ ಭೂಮಿಕಾ; ಗೌತಮ್ ಮತ್ತೆ ಏಕಾಂಗಿ
ಸೌಂದರ್ಯಾ ಜೊತೆ ವಿಮಾನದಲ್ಲಿ ಕನ್ನಡದ ಈ ನಟಿಯೂ ಇರಬೇಕಿತ್ತು
‘ಏನಾಗಿದೆ ಅದನ್ನು ಬದಲಿಸಲು ಸಾಧ್ಯವಿಲ್ಲ’; ದೀಪಿಕಾ ಬಗ್ಗೆ ನಾಗ್ ಬೇಸರ
ವಿಷ್ಣುವರ್ಧನ್-ರಜನಿಕಾಂತ್  ಒಟ್ಟಾಗಿ ನಟಿಸಿದ್ದ ಸಿನಿಮಾದ ದೃಶ್ಯ ನೆನಪಿದೆಯೇ?

‘ಕಾಂತಾರ’ ಸಿನಿಮಾದ ಬಜೆಟ್ 15 ಕೋಟಿ ರೂಪಾಯಿ ಆಗಿತ್ತು. ಈಗ ‘ಕಾಂತಾರ: ಚಾಪ್ಟರ್ 1’ ಚಿತ್ರದ ಟಿವಿ ಹಕ್ಕಿನಿಂದ ಬಂದ ಹಣದಲ್ಲಿ ಐದು ಕಾಂತಾರ ನಿರ್ಮಿಸಬಹುದು ಎನ್ನುವ ಅಭಿಪ್ರಾಯವನ್ನು ಅನೇಕರು ಹೊರಹಾಕಿದ್ದಾರೆ.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಸಿನಿಮಾ ಟ್ರೈಲರ್ ಬಿಡುಗಡೆಗೆ ದಿನಾಂಕ ನಿಗದಿ

‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ರಿಷಬ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರುಕ್ಮಿಣಿ ವಸಂತ್ ಚಿತ್ರಕ್ಕೆ ನಾಯಕಿ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದೆ. ಟ್ರೇಲರ್ ರಿಲೀಸ್ ಆದ ಬಳಿಕ ಚಿತ್ರದ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.