AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಟ್ರೇಲರ್ ರಿಲೀಸ್​ಗೆ ದಿನಾಂಕ ಫಿಕ್ಸ್; ಇನ್ನು ಕೆಲವೇ ದಿನಗಳು ಬಾಕಿ

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಟ್ರೈಲರ್ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ. ಇದು ‘ಕಾಂತಾರ’ ಸಿನಿಮಾದ ಪ್ರೀಕ್ವೆಲ್ ಆಗಿದ್ದು, ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ. ಹೊಂಬಾಳೆ ಫಿಲ್ಮ್ಸ್ ಈ ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಿಸಿದೆ. ಟ್ರೈಲರ್ ಬಿಡುಗಡೆಯೊಂದಿಗೆ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.

‘ಕಾಂತಾರ: ಚಾಪ್ಟರ್ 1’ ಟ್ರೇಲರ್ ರಿಲೀಸ್​ಗೆ ದಿನಾಂಕ ಫಿಕ್ಸ್; ಇನ್ನು ಕೆಲವೇ ದಿನಗಳು ಬಾಕಿ
ರಿಷಬ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Sep 11, 2025 | 9:59 AM

Share

ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್​ಗೆ ಇನ್ನು ಬಾಕಿ ಉಳಿದಿರೋದು ಕೆಲವೇ ದಿನಗಳು ಮಾತ್ರ. ತಂಡದವರು ಪೋಸ್ಟರ್​ಗಳನ್ನು ಬಿಡುಗಡೆ ಮಾಡುವ ಮೂಲಕ ಸಿನಿಮಾಗೆ ಮೈಲೇಜ್ ನೀಡುವ ಕೆಲಸ ಮಾಡುತ್ತಿದ್ದಾರೆ. ಸಿನಿಮಾದ ಟ್ರೇಲರ್ ಯಾವಾಗ ಬಿಡುಗಡೆ ಆಗಲಿದೆ ಎಂಬ ಪ್ರಶ್ನೆ ಅಭಿಮಾನಿಗಳಿಗೆ ಮೂಡಿತ್ತು. ಕೊನೆಗೂ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ರಿಷಬ್ ಶೆಟ್ಟಿ ಅವರು ವೃತ್ತಿ ಜೀವನದಲ್ಲಿ ಭಿನ್ನ ಸಿನಿಮಾಗಳನ್ನೇ ಮಾಡುತ್ತಾ ಬರುತ್ತಿದ್ದಾರೆ. ಇದೇ ಮೊದಲ ಬಾರಿಗೆ ಅವರು ಪ್ರೀಕ್ವೆಲ್ ಮಾಡೋ ಸಾಹಸಕ್ಕೆ ಮುಂದಾಗಿದ್ದಾರೆ. ‘ಕಾಂತಾರ’ ಸಿನಿಮಾದ ಹಿಂದಿನ ಕಥೆ ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ಇರಲಿದೆ. ಚಿತ್ರದ ಪೋಸ್ಟರ್ ಹೊರತುಪಡಿಸಿ ತಂಡದ ಕಡೆಯಿಂದ ಇನ್ಯಾವ ಅಪ್​ಡೇಟ್ ಕೂಡ ಸಿಕ್ಕಿಲ್ಲ. ಸಿನಿಮಾದ ಹಾಡುಗಳು ಹೇಗಿವೆ ಎಂಬ ಬಗ್ಗೆಯೂ ತಂಡದವರು ಹಿಂಟ್ ನೀಡಿಲ್ಲ.

ಹೀಗಾಗಿ, ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಟ್ರೇಲರ್ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ. ಆ ಕುತೂಹಲಕ್ಕೆ ತೆರೆ ಎಳೆಯೋ ದಿನ ಹತ್ತಿರ ಆಗಿದೆ. ಸೆಪ್ಟೆಂಬರ್ 20ರಂದು ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ ಎಂದು ವರದಿ ಆಗಿದೆ. ಈ ವಿಚಾರ ಫ್ಯಾನ್ಸ್ ಖುಷಿಗೆ ಕಾರಣ ಆಗಿದೆ. ಟ್ರೇಲರ್ ನೋಡಿದ ಬಳಿಕ ಸಿನಿಮಾದ ಬಗ್ಗೆ ಒಂದಷ್ಟು ಐಡಿಯಾ ಸಿಗಬಹುದು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ
Image
ಹಠ ಮಾಡಿ ವಿಷ್ಣುವರ್ಧನ್ ಸಿನಿಮಾದಲ್ಲಿ ನಟಿಸಿದ್ದ ನಟ ಅಕ್ಷಯ್ ಕುಮಾರ್
Image
ಲೂಸಿಯಾದಲ್ಲಿ ರಿಷಬ್ ಶೆಟ್ಟಿ ಮಾಡಿದ ಪಾತ್ರ ನೆನಪಿದೆಯೇ? ಅದೆಷ್ಟು ಬದಲಾವಣೆ
Image
‘ಹಳ್ಳಿ ಪವರ್​’ನಲ್ಲಿ 1 ವಾರಕ್ಕೆ 4 ಮಂದಿ ವೈಲ್ಡ್​ ಕಾರ್ಡ್ ಮೂಲಕ ಎಂಟ್ರಿ
Image
ಸು ಫ್ರಮ್ ಸೋಗೆ OTTಯಲ್ಲಿ ಬೇರೆಯದೇ ರೀತಿಯ ವಿಮರ್ಶೆ; ಸಮಸ್ಯೆ ಆಗಿದ್ದೆಲ್ಲಿ?

ಇದನ್ನೂ ಓದಿ: ಲೂಸಿಯಾದಲ್ಲಿ ರಿಷಬ್ ಶೆಟ್ಟಿ ಮಾಡಿದ ಪಾತ್ರ ನೆನಪಿದೆಯೇ? 12 ವರ್ಷಗಳಲ್ಲಿ ಅದೆಷ್ಟು ಬದಲಾವಣೆ

ರಿಷಬ್ ಶೆಟ್ಟಿ ಅವರು ಒಂದಕ್ಕಿಂತ ಒಂದು ಭಿನ್ನ ಸಿನಿಮಾಗಳನ್ನು ನಿರ್ದೇಶನ ಮಾಡಿದವರು. ಯಾವುದೇ ನಿರೀಕ್ಷೆ ಇಲ್ಲದೆ ‘ಕಾಂತಾರ’ ಚಿತ್ರವನ್ನು ಜನರು ನೋಡಿದ್ದರಿಂದ ಹೆಚ್ಚು ರೋಮಾಂಚನ ಆಯಿತು. ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತು. ಈಗ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೇಲೆ ಭರ್ಜರಿ ನಿರೀಕ್ಷೆ ಇದೆ. ಈ ನಿರೀಕ್ಷೆಯನ್ನು ಮೀರಿಸುವ ರೀತಿಯಲ್ಲಿ ಸಿನಿಮಾ ಇದ್ದರೆ ಮಾತ್ರ ದೊಡ್ಡ ಮಟ್ಟದ ಗೆಲುವು ಸಾಧ್ಯ. ಹೊಂಬಾಳೆ ಫಿಲ್ಮ್ಸ್ ಸಿನಿಮಾನ ಅದ್ದೂರಿಯಾಗಿ ಕಟ್ಟುಕೊಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್