Kantara Twitter Review: ‘ಕಾಂತಾರ: ಚಾಪ್ಟರ್ 1’ ಬ್ಲಾಕ್ ಬಸ್ಟರ್; ಪ್ರೀಮಿಯರ್ ಶೋ ನೋಡಿ ಭವಿಷ್ಯ ತಿಳಿಸಿದ ಪ್ರೇಕ್ಷಕರು

Kantara Chapter 1 Twitter Review: ‘ಕಾಂತಾರ: ಚಾಪ್ಟರ್ 1’ ಸಿನಿಮಾ ನೋಡಿದ ಪ್ರೇಕ್ಷಕರಿಂದ ಅತ್ಯುತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಟ್ವಿಟರ್ ಮೂಲಕ ಜನರು ವಿಮರ್ಶೆ ತಿಳಿಸುತ್ತಿದ್ದು, ಬ್ಲಾಕ್ ಬಸ್ಟರ್ ಎಂದು ಘೋಷಿಸಿದ್ದಾರೆ. ರಿಷಬ್ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನಕ್ಕೆ ಜನರಿಂದ ಫುಲ್ ಮಾರ್ಕ್ಸ್ ಸಿಗುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ..

Kantara Twitter Review: ‘ಕಾಂತಾರ: ಚಾಪ್ಟರ್ 1’ ಬ್ಲಾಕ್ ಬಸ್ಟರ್; ಪ್ರೀಮಿಯರ್ ಶೋ ನೋಡಿ ಭವಿಷ್ಯ ತಿಳಿಸಿದ ಪ್ರೇಕ್ಷಕರು
Kantara Chapter 1

Updated on: Oct 01, 2025 | 10:56 PM

ಅಂದುಕೊಂಡ ರೀತಿಯೇ ‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾ ಅದ್ದೂರಿ ಓಪನಿಂಗ್ ಪಡೆದುಕೊಂಡಿದೆ. ಹಲವು ಕಡೆಗಳಲ್ಲಿ ಪ್ರೀಮಿಯರ್ ಶೋ ಮಾಡಲಾಗಿದೆ. ಪೇಯ್ಡ್ ಪ್ರೀಮಿಯರ್​​ಗಳಿಗೆ ಜನರು ಮುಗಿಬಿದ್ದು ಬಂದಿದ್ದಾರೆ. ರಿಷಬ್ ಶೆಟ್ಟಿ (Rishab Shetty) ನಟನೆ, ನಿರ್ದೇಶನ ಮಾಡಿರುವ ಈ ಸಿನಿಮಾವನ್ನು ನೋಡಿ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಟ್ವಿಟರ್ ಮೂಲಕ ಪ್ರೇಕ್ಷಕರು ವಿಮರ್ಶೆ (Kantara Chapter 1 Twitter Review) ತಿಳಿಸಿದ್ದಾರೆ. ಬಹುತೇಕ ಎಲ್ಲರಿಂದಲೂ ಸಿನಿಮಾಗೆ ಪಾಸಿಟಿವ್ ವಿಮರ್ಶೆ ಸಿಕ್ಕಿದೆ. ಈ ಚಿತ್ರ ಬ್ಲಾಕ್ ಬಸ್ಟರ್ ಎಂದು ಪ್ರೇಕ್ಷಕರು ಭವಿಷ್ಯ ನುಡಿದಿದ್ದಾರೆ.

ಅಕ್ಟೋಬರ್ 2ರಂದು 7 ಭಾಷೆಗಳಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗುತ್ತಿದೆ. ಅಕ್ಟೋಬರ್ 1ರ ಸಂಜೆಯೇ ಪ್ರೀಮಿಯರ್ ಶೋ ನಡೆದಿದೆ. ಪ್ರೀಮಿಯರ್ ಶೋಗಳು ಹೌಸ್​ಫುಲ್ ಆಗಿವೆ. ಅದ್ದೂರಿ ದೃಶ್ಯ ವೈಭವವನ್ನು ನೋಡಿದ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ಸಿಕ್ಕಿದೆ. ಈ ಸಿನಿಮಾವನ್ನು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಬಹುಕೋಟಿ ರೂಪಾಯಿ ಬಜೆಟ್​​ನಲ್ಲಿ ನಿರ್ಮಾಣ ಮಾಡಿದೆ.

ರಿಷಬ್ ಶೆಟ್ಟಿ ಅವರು ಬೇರೊಂದು ಲೋಕವನ್ನೇ ತೆರೆಗೆ ತಂದಿದ್ದಾರೆ. ಅವರ ನಟನೆ ಮತ್ತು ನಿರ್ದೇಶನಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಎಲ್ಲರ ಅಭಿನಯಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಗುತ್ತಿದೆ. ತಾಂತ್ರಿಕವಾಗಿ ಸಿನಿಮಾ ತುಂಬಾ ಶ್ರೀಮಂತವಾಗಿ ಮೂಡಿಬಂದಿದೆ. ಅದಕ್ಕೆ ಸಿನಿಪ್ರಿಯರು ಫಿದಾ ಆಗಿದ್ದಾರೆ.

ಈ ಮೊದಲ ಬಂದಿದ್ದ ‘ಕಾಂತಾರ’ ಚಿತ್ರದಲ್ಲಿ ಕ್ಲೈಮ್ಯಾಕ್ಸ್ ಗಮನ ಸೆಳೆದಿತ್ತು. ಈಗ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕ್ಲೈಮ್ಯಾಕ್ಸ್ ಕೂಡ ಪ್ರೇಕ್ಷಕರ ಮನ ಗೆಲ್ಲುತ್ತಿದೆ. ಸಿನಿಮಾ ನೋಡಿದ ಅನೇಕರು 5ಕ್ಕೆ 4.5 ರೇಟಿಂಗ್ ನೀಡುತ್ತಿದ್ದಾರೆ. ಈ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡುವುದು ಖಚಿತ ಎಂದು ಕೆಲವರು ಭವಿಷ್ಯ ನುಡಿಯುತ್ತಿದ್ದಾರೆ.

ಕೆಲವು ಚಿತ್ರಮಂದಿರಗಳಲ್ಲಿ ಸಿನಿಮಾ ಮುಗಿದ ಬಳಿಕ ಪ್ರೇಕ್ಷಕರು ಎದ್ದು ನಿಂತು ಗೌರವ ಸಲ್ಲಿಸಿದ್ದಾರೆ. ‘ಇದು ನೋಡಲೇಬೇಕಾದ ಸಿನಿಮಾ. ಬರೀ ಮನರಂಜನೆಗೆ ಮಾತ್ರ ಇರುವ ಚಿತ್ರ ಇದಲ್ಲ. ಜನಪದ, ನಂಬಿಕೆ ಎಲ್ಲವೂ ಈ ಸಿನಿಮಾದಲ್ಲಿ ಇದೆ’ ಎಂದು ಪ್ರೇಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾ ಇತಿಹಾಸ ಸೃಷ್ಟಿಸುತ್ತದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ಇದನ್ನೂ ಓದಿ: ಅಬ್ಬಬ್ಬಾ ಕಾಂತಾರ ಕ್ರೇಜ್: ಪ್ರೀಮಿಯರ್ ಶೋ ನೋಡಲು ಬಂದ ಜನಸಾಗರ

ಕನ್ನಡ, ತಮಿಳು, ಮಲಯಾಳಂ, ತೆಲುಗು, ಹಿಂದಿ, ಬೆಂಗಾಲಿ, ಇಂಗ್ಲಿಷ್ ವರ್ಷನ್​​ನಲ್ಲಿ ಸಿನಿಮಾ ಬಿಡುಗಡೆ ಆಗಿದೆ. ಮೊದಲ ದಿನದ ಎಲ್ಲ ಶೋಗಳ ಟಿಕೆಟ್ ಸೋಲ್ಡ್ ಔಟ್ ಆಗಿದೆ. ಸಿನಿಮಾಗೆ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಕೂಡ ಭರ್ಜರಿ ಕಲೆಕ್ಷನ್ ಮಾಡಲಿದೆ.

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ಕನ್ನಡ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಈ ಸಿನಿಮಾದ ಸೆಕೆಂಡ್ ಹಾಫ್ ತುಂಬಾ ಚೆನ್ನಾಗಿದೆ. ಖಂಡಿತವಾಗಿಯೂ ಈ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಬರಲಿದೆ ಎಂದು ಪ್ರೀಮಿಯರ್ ಶೋ ನೋಡಿದ ಪ್ರೇಕ್ಷಕರು ಟ್ವಿಟರ್ ಮೂಲಕ ಅನಿಸಿಕೆ ತಿಳಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.