AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಫೀವರ್; ಸಿನಿಮಾ ನೋಡಿದ ಬಳಿಕ ದೈವ ಬಂದಂತೆ ಆಡಿದ ಪ್ರೇಕ್ಷಕ

'ಕಾಂತಾರ: ಚಾಪ್ಟರ್ 1' ಸಿನಿಮಾ ಉತ್ತಮ ಪ್ರತಿಕ್ರಿಯೆ ಪಡೆದಿದೆ. ರಿಷಬ್ ಶೆಟ್ಟಿ ಅವರ ಗುಳಿಗ ದೈವದ ಅಭಿನಯಕ್ಕೆ ಪ್ರೇಕ್ಷಕರು ಮಂತ್ರಮುಗ್ಧರಾಗಿದ್ದಾರೆ. ಸಿನಿಮಾ ನೋಡಿ ಹೊರಬಂದ ಅಭಿಮಾನಿಯೊಬ್ಬ ದೈವ ಬಂದಂತೆ ವರ್ತಿಸಿರುವ ವಿಡಿಯೋ ವೈರಲ್ ಆಗಿದೆ. ರಿಷಬ್ ನಟನೆಗೆ ಫ್ಯಾನ್ಸ್ ಅಚ್ಚರಿ ವ್ಯಕ್ತಪಡಿಸಿದ್ದು, ಈ ಘಟನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಶುರುವಾಗಿದೆ.

‘ಕಾಂತಾರ: ಚಾಪ್ಟರ್ 1’ ಫೀವರ್; ಸಿನಿಮಾ ನೋಡಿದ ಬಳಿಕ ದೈವ ಬಂದಂತೆ ಆಡಿದ ಪ್ರೇಕ್ಷಕ
ರಿಷಬ್
ರಾಜೇಶ್ ದುಗ್ಗುಮನೆ
| Edited By: |

Updated on:Oct 02, 2025 | 4:20 PM

Share

‘ಕಾಂತಾರ: ಚಾಪ್ಟರ್ 1’ ಸಿನಿಮಾ ಫೀವರ್ ಜೋರಾಗಿದೆ. ಅಕ್ಟೋಬರ್ 2ರಂದು ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗಿದೆ. ಎಲ್ಲ ಕಡೆಗಳಿಂದ ಸಿನಿಮಾ ಪಾಸಿಟಿವ್ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಈ ಚಿತ್ರ ಮೊದಲ ದಿನ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಲಿದೆ ಎಂಬ ಕುತೂಹಲ ಮೂಡಿದೆ. ಹೀಗಿರುವಾಗಲೇ ಒಂದು ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಪ್ರೇಕ್ಷಕ ದೈವ ಬಂದಂತೆ ಆಡಿದ್ದಾನೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ದೈವದ ವಿಚಾರ ಹೇಳಲಾಗಿದೆ. ‘ಕಾಂತಾರ’ದಲ್ಲಿ ಪಂಜುರ್ಲಿ ಬಗ್ಗೆ ಹೇಳಿದರೆ, ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ಗುಳಿಗ ದೈವವನ್ನು ಹೈಲೈಟ್ ಮಾಡಲಾಗಿದೆ. ರಿಷಬ್ ಅವರನ್ನು ಎಲ್ಲರೂ ಕೊಂಡಾಡಿದ್ದಾರೆ. ಅವರು ನಿಜವಾಗಿಯೂ ದೈವ ಬಂದಂತೆ ನಟಿಸಿದ್ದಾರೆ ಎಂಬುದು ಅನೇಕರ ಅಭಿಪ್ರಾಯ. ಈಗ ‘ಕಾಂತಾರ: ಚಾಪ್ಟರ್ 1’ ನೋಡಿ ಬಂದ ಅಭಿಮಾನಿಯೋರ್ವ ದೈವ ಬಂದಂತೆ ಆಡಿರುವ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ
Image
ಕ್ಲೈಮ್ಯಾಕ್ಸ್​ನಲ್ಲಿ ‘ಕಾಂತಾರ: ಚಾಪ್ಟರ್ 2’ ಬಗ್ಗೆ ಘೋಷಣೆ
Image
ಪ್ರೀಮಿಯರ್ ಶೋಗಳಿಂದಲೇ ಕೋಟಿ ಕೋಟಿ ಬಾಚಿದ ‘ಕಾಂತಾರ: ಚಾಪ್ಟರ್ 1’
Image
‘ಕಾಂತಾರ: ಚಾಪ್ಟರ್1’ ವಿಮರ್ಶೆ: ದಂತಕಥೆಯಲ್ಲಿ ಅದ್ದೂರಿತನ; ಇದು ದೈವದ ಕಥನ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್1’ ವಿಮರ್ಶೆ: ದಂತಕಥೆಯಲ್ಲಿ ಅದ್ದೂರಿತನ; ಇದು ದೈವದ ಕಥನ

ರಿಷಬ್ ಶೆಟ್ಟಿ ಅವರು ‘ಓ..’ ಎಂದು ಸಿನಿಮಾದಲ್ಲಿ ಕೂಗುತ್ತಾರೆ. ಈ ವ್ಯಕ್ತಿ ಕೂಡ ‘ಓ..’ ಎಂದು ಕೂಗಾಡಿದ್ದಾನೆ. ಆ ಬಳಿಕ ‘ದೇವರ ದರ್ಶನ ಆಯ್ತು, ಸಿನಿಮಾ ಚೆನ್ನಾಗಿದೆ’ ಎಂದು ಆ ವ್ಯಕ್ತಿ ಹೇಳಿದ್ದಾನೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಇದನ್ನು ನಾಟಕ ಎಂದು ಕರೆದಿದ್ದಾರೆ.

ರಿಷಬ್ ಶೆಟ್ಟಿ ಅವರ ‘ಕಾಂತಾರ’ ಸಿನಿಮಾ ದೈವದ ಬಗ್ಗೆ ಇತ್ತು. ಈಗ ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲೂ ಅದೇ ವಿಷಯ ಹೇಳಲಾಗಿದೆ. ರಿಷಬ್ ಪರ್ಫಾರ್ಮೆನ್ಸ್​ನ ಎಲ್ಲರೂ ಕೊಂಡಾಡಿದ್ದಾರೆ. ರುಕ್ಮಿಣಿ ವಸಂತ್ ಸ್ಪೆಷಲ್ ಪ್ಯಾಕೇಜ್ ಆಗಿ ಕಾಣಿಸಿಕೊಂಡಿದ್ದಾರೆ. ಅವರನ್ನು ಎಲ್ಲರೂ ಹೊಗಳುತ್ತಿದ್ದಾರೆ. ಉಳಿದ ಅನೇಕ ಪಾತ್ರಗಳು ಮೆಚ್ಚುಗೆ ಪಡೆಯುವ ರೀತಿಯಲ್ಲಿ ಇವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:08 pm, Thu, 2 October 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್