AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೈವ vs ದೆವ್ವ: ‘ಕಾಂತಾರ 1’ ನಾಗಾಲೋಟಕ್ಕೆ ಬ್ರೇಕ್ ಹಾಕಲಿದೆಯೇ ರಶ್ಮಿಕಾ ಮಂದಣ್ಣ ಸಿನಿಮಾ

Kantara Chapter 1 v/s Thamma: ರಿಷಬ್ ನಟನೆಯ ‘ಕಾಂತಾರ: ಚಾಪ್ಟರ್ 1’ ಹಿಂದಿ ಭಾಗದಲ್ಲಿ ಭರ್ಜರಿ ಗಳಿಕೆ ಮಾಡುತ್ತಿದೆ. ಸಿನಿಮಾದ ಕಲೆಕ್ಷನ್ 150 ಕೋಟಿ ದಾಟಿದೆ. ಬಾಕ್ಸ್ ಆಫೀಸ್​​ನಲ್ಲಿ ನಾಗಾಲೋಟ ಮುಂದುವರೆಸಿದೆ. ಕೆಲವೇ ದಿನಗಳಲ್ಲಿ ರಶ್ಮಿಕಾ ಮಂದಣ್ಣರ ಹೊಸ ಹಿಂದಿ ಸಿನಿಮಾ ಬಿಡುಗಡೆ ಆಗಲಿದ್ದು, ರಿಷಬ್ ಅವರ ನಾಗಾಲೋಟಕ್ಕೆ ರಶ್ಮಿಕಾ ತಡೆ ಒಡ್ಡಲಿದ್ದಾರೆಯೇ?

ದೈವ vs ದೆವ್ವ: ‘ಕಾಂತಾರ 1’ ನಾಗಾಲೋಟಕ್ಕೆ ಬ್ರೇಕ್ ಹಾಕಲಿದೆಯೇ ರಶ್ಮಿಕಾ ಮಂದಣ್ಣ ಸಿನಿಮಾ
Kantara Vs Thamma
ಮಂಜುನಾಥ ಸಿ.
|

Updated on: Oct 16, 2025 | 1:17 PM

Share

ರಿಷಬ್ ಶೆಟ್ಟಿ (Rishab Shetty) ನಟಿಸಿ ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿ ಎರಡು ವಾರಗಳ ನಂತರವೂ ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ‘ಕಾಂತಾರ: ಚಾಪ್ಟರ್ 1’ ಅಬ್ಬರಕ್ಕೆ ಹೆದರಿ ಬೇರೆ ಭಾಷೆಗಳಲ್ಲಿ ಯಾವ ದೊಡ್ಡ ಸಿನಿಮಾಗಳು ಬಿಡುಗಡೆ ಆಗಿಲ್ಲ. ಕೆಲ ಸಿನಿಮಾಗಳ ಬಿಡುಗಡೆಯೂ ಮುಂದೂಡಲ್ಪಟ್ಟಿದೆ. ಹಿಂದಿಯಲ್ಲಂತೂ ‘ಕಾಂತಾರ: ಚಾಪ್ಟರ್ 1’ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು, ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿದೆ. ಆದರೆ ಇದೀಗ ರಶ್ಮಿಕಾ ಮಂದಣ್ಣ ಅವರ ಹೊಸ ಸಿನಿಮಾ ಹಿಂದಿಯಲ್ಲಿ ಬಿಡುಗಡೆ ಆಗುತ್ತಿದ್ದು, ‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್​​ಗೆ ಈ ಸಿನಿಮಾ ಬ್ರೇಕ್ ಹಾಕಲಿದೆಯಾ?

ರಶ್ಮಿಕಾ ಮಂದಣ್ಣ ನಟನೆಯ ಹಿಂದಿ ಸಿನಿಮಾ ‘ಥಮ’ ಅಕ್ಟೋಬರ್ 21 ರಂದು ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಆಯುಷ್ಮಾನ್ ಖುರಾನಾ ಈ ಸಿನಿಮಾದ ನಾಯಕ. ನವಾಜುದ್ಧೀನ್ ಸಿದ್ಧಿಖಿ ಸಿನಿಮಾದ ವಿಲನ್. ಮ್ಯಾಡ್​​ಲಾಕ್ ಅವರು ನಿರ್ಮಿಸಿರುವ ಈ ಸಿನಿಮಾ ಹಾರರ್ ಕಥಾವಸ್ತು ಒಳಗೊಂಡಿದೆ. ‘ಥಮ’ ಸಿನಿಮಾನಲ್ಲಿ ರಶ್ಮಿಕಾ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದು, ಸಿನಿಮಾನಲ್ಲಿ ಮೂರು ಐಟಂ ಹಾಡುಗಳು ಬೇರೆ ಇವೆಯಂತೆ.

ರಿಷಬ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ನಡುವೆ ಮನಸ್ಥಾಪ ಇರುವುದು ಜಗಜ್ಜಾಹೀರು. ಇದೀಗ ಬಾಕ್ಸ್ ಆಫೀಸ್​​ನಲ್ಲಿ ಈ ಇಬ್ಬರ ಸಿನಿಮಾಗಳು ಪರಸ್ಪರ ಎದುರಾಗುತ್ತಿವೆ. ಆದರೆ ‘ಕಾಂತಾರ: ಚಾಪ್ಟರ್ 1’ ಈಗಾಗಲೇ ಬಾಲಿವುಡ್​​ ಪ್ರಾಂತ್ಯದಲ್ಲಿ 150 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿ ನಾಗಾಲೋಟದಲ್ಲಿದೆ. ರಶ್ಮಿಕಾರ ಹೊಸ ಸಿನಿಮಾ ‘ಕಾಂತಾರ 1’ ಸಿನಿಮಾದ ಕಲೆಕ್ಷನ್ ಅನ್ನು ಕುಗ್ಗಿಸಲಿದೆಯೇ? ಸಿನಿಮಾಕ್ಕೆ ಸ್ಪರ್ಧೆ ಒಡ್ಡಲಿದೆಯೇ ಎಂಬುದು ಸಿನಿಮಾ ಪ್ರೇಮಿಗಳ ಕುತೂಹಲ.

ಇದನ್ನೂ ಓದಿ:‘ಕಾಂತಾರ’ ಬಗ್ಗೆ ರಶ್ಮಿಕಾ ಮಂದಣ್ಣ ಮಾತು, ಹಳೆ ಹೇಳಿಕೆ ವೈರಲ್

ರಶ್ಮಿಕಾ ಮಂದಣ್ಣ ಅವರ ಸಿನಿಮಾ ದೆವ್ವದ ಕತೆ ಹೊಂದಿರುವ ಸಿನಿಮಾ ಆಗಿದ್ದರೆ ರಿಷಬ್ ಶೆಟ್ಟಿಯವರ ಸಿನಿಮಾ ದೈವದ ಕತೆ ಹೊಂದಿರುವ ಸಿನಿಮಾ ಆಗಿದೆ. ಬಾಕ್ಸ್ ಆಫೀಸ್​​ನಲ್ಲಿ ದೈವದ ಕತೆ ಈಗಾಗಲೇ ಗೆದ್ದಾಗಿದೆ. ಆದರೆ ದೆವ್ವದ ಕತೆಯುಳ್ಳ ಸಿನಿಮಾದ ದೈವದ ಸಿನಿಮಾದ ಕಲೆಕ್ಷನ್ ಅನ್ನು ತಗ್ಗಿಸಲಿದೆಯೇ ಎಂಬುದಷ್ಟೆ ಉಳಿದಿರುವ ಕುತೂಹಲ.

ರಶ್ಮಿಕಾ ಮಂದಣ್ಣ ಹಿಂದೆ ಯಾವ ಸಿನಿಮಾದಲ್ಲಿಯೂ ಕಾಣಿಸಿಕೊಳ್ಳಲಾರದಷ್ಟು ಹಾಟ್ ಆಗಿ ‘ಥಮ’ ಸಿನಿಮಾನಲ್ಲಿ ಕಾಣಿಸಿಕೊಂಡಿದ್ದಾರೆ. ಗ್ಲಾಮರಸ್ ಉಡುಗೆಗಳನ್ನು ಧರಿಸಿ ಬಲು ಮಾದಕವಾಗಿ ಐಟಂ ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ ಜೊತೆಗೆ ನಾಯಕ ಆಯುಷ್ಮಾನ್ ಖುರಾನಾ ಜೊತೆಗೆ ತುಸು ಹಾಟ್ ಆಗಿರುವ ದೃಶ್ಯಗಳಲ್ಲಿ ಸಹ ನಟಿಸಿದ್ದಾರೆ. ಆದಿತ್ಯ ಸರ್ಪೋತ್​​ಧಾರ್ ‘ಥಮ’ ಸಿನಿಮಾ ನಿರ್ದೇಶನ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ