AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್ ಶೆಟ್ಟಿಯ ನಂಬಿ ನೂರಾರು ಕೋಟಿ ಹೂಡಿಕೆ ಮಾಡಿದ್ದೇಕೆ ಹೊಂಬಾಳೆ?

Kantara Chapter 1: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಯಶಸ್ಸು ಗಳಿಸಿದೆ. ಸಿನಿಮಾ ಬಿಡುಗಡೆ ಆದ ಕೇವಲ ಐದು ದಿನಕ್ಕೆ 300 ಕೋಟಿಗೂ ಹೆಚ್ಚಿನ ಮೊತ್ತ ಗಳಿಕೆ ಮಾಡಿದೆ. ಈ ಸಿನಿಮಾಕ್ಕೆ ಹೊಂಬಾಳೆ ನೂರಾರು ಕೋಟಿ ಬಜೆಟ್ ಹೂಡಿದೆ ಹೊಂಬಾಳೆ. ಅಷ್ಟಕ್ಕೂ ರಿಷಬ್ ಶೆಟ್ಟಿಯ ಮೇಲೆ ಹೊಂಬಾಳೆ ನಂಬಿಕೆ ಇಡಲು ಕಾರಣವೇನು?

ರಿಷಬ್ ಶೆಟ್ಟಿಯ ನಂಬಿ ನೂರಾರು ಕೋಟಿ ಹೂಡಿಕೆ ಮಾಡಿದ್ದೇಕೆ ಹೊಂಬಾಳೆ?
Kantara Chapter 1
ಮಂಜುನಾಥ ಸಿ.
|

Updated on:Oct 07, 2025 | 10:31 AM

Share

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿ ಐದು ದಿನಗಳಾಗಿವೆ. ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನು ಬರೆಯುತ್ತಿದೆ. ಕೇವಲ ಐದು ದಿನಕ್ಕೆ ಸಿನಿಮಾ 300 ಕೋಟಿ ಕಲೆಕ್ಷನ್ ದಾಟಿದೆ. ಸಿನಿಮಾಕ್ಕೆ ಹೊಂಬಾಳೆ ಫಿಲಮ್ಸ್ ಬಂಡವಾಳ ತೊಡಗಿಸಿದೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕೆ ಹೊಂಬಾಳೆ ಫಿಲಮ್ಸ್ ನೂರಾರು ಕೋಟಿ ರೂಪಾಯಿ ಬಂಡವಾಳ ತೊಡಗಿಸಿದೆ. ಅಷ್ಟಕ್ಕೂ ರಿಷಬ್ ಶೆಟ್ಟಿಯ ಮೇಲೆ ಹೊಂಬಾಳೆ ಇಷ್ಟೋಂದು ನಂಬಿಕೆ ಇರಿಸಲು ಕಾರಣ ಏನು?

2022 ರಲ್ಲಿ ಬಿಡುಗಡೆ ಆದ ‘ಕಾಂತಾರ’ ಸಿನಿಮಾಕ್ಕೆ ಕೇವಲ 25 ಕೋಟಿ ಬಂಡವಾಳವನ್ನು ಹೊಂಬಾಳೆ ಹೂಡಿತ್ತು. ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿ ಬಂಡವಾಳದ ನೂರಾರು ಪಟ್ಟು ಲಾಭವನ್ನು ಮಾಡಿಕೊಟ್ಟಿತು. ಆಗಲೇ ‘ಕಾಂತಾರ’ ಸಿನಿಮಾದ ಮತ್ತೊಂದು ಭಾಗ ಘೋಷಣೆ ಮಾಡಲಾಗಿತ್ತು. ಆದರೆ ಹೊಂಬಾಳೆ, ಎರಡನೇ ಸಿನಿಮಾಕ್ಕೂ 25-30 ಕೋಟಿ ಬಂಡವಾಳ ಹೂಡಿ ಲಾಭ ಮಾಡಿಕೊಂಡು ಕೈತೊಳೆದುಕೊಳ್ಳಲಿಲ್ಲ. ಆದರೆ ‘ಕಾಂತಾರ: ಚಾಪ್ಟರ್ 1’ ಸಿನಿಮಾವನ್ನು ವಿಶ್ವಗುಣಮಟ್ಟದ ಸಿನಿಮಾ ಆಗಿ ರೂಪಿಸಲು ಟೊಂಕಕಟ್ಟಿತು.

ಇದಕ್ಕೆ ಮುನ್ನ ದೊಡ್ಡ ಬಜೆಟ್ ಅನ್ನು ಹ್ಯಾಂಡಲ್ ಮಾಡಿ ಗೊತ್ತಿಲ್ಲದ ರಿಷಬ್ ಶೆಟ್ಟಿ ಮೇಲೆ ಹೊಂಬಾಳೆ ಭಾರಿ ನಂಬಿಕೆಯನ್ನೇ ಇರಿಸಿತು. ಇದಕ್ಕೆ ಮುಖ್ಯ ಕಾರಣ, ರಿಷಬ್ ಶೆಟ್ಟಿ ಹೇಳಿದ ಕತೆಯಂತೆ. ರಿಷಬ್ ಅವರೇ ಹೇಳಿಕೊಂಡಿರುವಂತೆ ಎಷ್ಟೋ ಮಂದಿ ನಿರ್ಮಾಪಕರು ಕತೆಯನ್ನೇ ಕೇಳುವುದಿಲ್ಲ ಆದರೆ ನಾನು ವಿಜಯ್ ಕಿರಗಂದೂರು ಅವರಿಗೆ 15 ಬಾರಿ ಕತೆ ಹೇಳಿದ್ದೇನೆ ಎಂದಿದ್ದರು. ಕತೆಯ ಮೇಲೆ ಪೂರ್ಣ ನಂಬಿಕೆ ಬಂದ ಬಳಿಕ, ಹೊಂಬಾಳೆ, ಕತೆಯನ್ನು ನಂಬಿ ನೂರಾರು ಕೋಟಿ ಬಂಡವಾಳ ತೊಡಗಿಸಿತು.

ಇದನ್ನೂ ಓದಿ:ಕಿಚ್ಚನಿಂದ ಸ್ಫೂರ್ತಿ ಪಡೆದು ಈ ನಿರ್ಧಾರ ತೆಗೆದುಕೊಂಡರು ರಿಷಬ್ ಶೆಟ್ಟಿ

ಸಿನಿಮಾದ ಪ್ರತಿ ವಿಭಾಗದಲ್ಲೂ ಹೊಂಬಾಳೆಯ ತಂಡ ತೊಡಗಿಕೊಳ್ಳುತ್ತಿತ್ತಂತೆ. ಎಲ್ಲ ಕೆಲಸಗಳನ್ನು ಹತ್ತಿರದಿಂದ ಗಮನಿಸುವ ಜೊತೆಗೆ ಸಂಪೂರ್ಣ ಕ್ರಿಯೇಟಿವ್ ಸ್ವಾತಂತ್ರ್ಯವನ್ನು ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ತಂಡಕ್ಕೆ ನೀಡಿತ್ತಂತೆ. ಕೇವಲ ಸಿನಿಮಾ ಮಾತ್ರ ಅಲ್ಲದೆ ಅತ್ಯುತ್ತಮ ಗುಣಮಟ್ಟದ ಸಿನಿಮಾ ನಿರ್ಮಾಣ ಆಗಬೇಕು ಎಂಬುದೇ ಹೊಂಬಾಳೆಯ ಉದ್ದೇಶವಾಗಿತ್ತಂತೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕೆ ಹೊಂಬಾಳೆ ಫಿಲಮ್ಸ್ ಸುಮಾರು 200 ಕೋಟಿ ರೂಪಾಯಿ ಬಂಡವಾಳ ತೊಡಗಿಸಿದೆ. ಇದರಲ್ಲಿ ಸಿನಿಮಾದ ಪ್ರಚಾರದ ಖರ್ಚು ಸಹ ಸೇರಿದೆ ಎನ್ನಲಾಗಿದೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಈಗಾಗಲೇ 300 ಕೋಟಿಗೂ ಹೆಚ್ಚಿನ ಮೊತ್ತವನ್ನು ಗಳಿಕೆ ಮಾಡಿದೆ. ಸಿನಿಮಾದ ಕಲೆಕ್ಷನ್ 1000 ಕೋಟಿಯ ಹತ್ತಿರಕ್ಕೆ ಹೋಗುವ ಸಾಧ್ಯತೆ ದಟ್ಟವಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:40 am, Tue, 7 October 25

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ