Kantara: ರಿಷಬ್​ ಶೆಟ್ಟಿ ಕಂಬಳದ ಕೋಣ ಓಡಿಸುವುದು ಕಲಿತಿದ್ದು ಹೇಗೆ? ಇಲ್ಲಿದೆ ಮೇಕಿಂಗ್​ ವಿಡಿಯೋ

Kantara Making Video: ಮೇಕಿಂಗ್ ವಿಡಿಯೋ ನೋಡಿ ರಿಷಬ್​ ಶೆಟ್ಟಿ ಅಭಿಮಾನಿಗಳ ನಿರೀಕ್ಷೆ ಹೆಚ್ಚಿದೆ. ‘ಕಾಂತಾರ’ ಸಿನಿಮಾ ಮೇಲಿರುವ ಕ್ರೇಜ್​ ಇನ್ನೂ ಜಾಸ್ತಿ ಆಗಿದೆ.

Kantara: ರಿಷಬ್​ ಶೆಟ್ಟಿ ಕಂಬಳದ ಕೋಣ ಓಡಿಸುವುದು ಕಲಿತಿದ್ದು ಹೇಗೆ? ಇಲ್ಲಿದೆ ಮೇಕಿಂಗ್​ ವಿಡಿಯೋ
ರಿಷಬ್ ಶೆಟ್ಟಿ
Follow us
TV9 Web
| Updated By: ಮದನ್​ ಕುಮಾರ್​

Updated on: Sep 22, 2022 | 2:24 PM

ರಿಷಬ್​ ಶೆಟ್ಟಿ ಅವರು ಕನ್ನಡ ಚಿತ್ರರಂಗದಲ್ಲಿ ಯಶಸ್ವಿ ನಟ, ನಿರ್ದೇಶಕ ಹಾಗೂ ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದಾರೆ. ಅವರ ಸಿನಿಮಾಗಳಲ್ಲಿ ಏನಾದರೊಂದು ವಿಶೇಷತೆ ಇದ್ದೇ ಇರುತ್ತದೆ. ಈಗ ಅವರು ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ’ (Kantara) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸೆಪ್ಟೆಂಬರ್​ 30ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಈಗಾಗಲೇ ರಿಲೀಸ್​ ಆಗಿರುವ ಟ್ರೇಲರ್​ ಕಂಡು ಫ್ಯಾನ್ಸ್​ ಫಿದಾ ಆಗಿದ್ದಾರೆ. ಇನ್ನೇನಿದ್ದರೂ ಪೂರ್ತಿ ಸಿನಿಮಾವನ್ನು ಚಿತ್ರಮಂದಿರದಲ್ಲಿ ಕಣ್ತುಂಬಿಕೊಳ್ಳುವುದಷ್ಟೇ ಬಾಕಿ. ಈ ಚಿತ್ರದಲ್ಲಿ ರಿಷಬ್​ ಶೆಟ್ಟಿ (Rishab Shetty) ಅವರು ಕಂಬಳ ಸ್ಪರ್ಧೆಯ ದೃಶ್ಯಗಳಲ್ಲಿ ನಟಿಸಿದ್ದಾರೆ. ಆ ಸನ್ನಿವೇಶಕ್ಕಾಗಿ ಅವರು ನಿಜವಾಗಿಯೂ ಕಂಬಳದ (Kambala) ಕೋಣಗಳನ್ನು ಓಡಿಸುವುದು ಕಲಿತಿದ್ದಾರೆ.

ರಿಷಬ್​ ಶೆಟ್ಟಿ ಅವರು ಕಂಬಳದ ಕೋಣಗಳನ್ನು ಓಡಿಸುವುದನ್ನು ಕಲಿತಿದ್ದು ಕೆಲವೇ ದಿನಗಳಲ್ಲಿ ಎಂಬುದು ಗಮನಾರ್ಹ ವಿಚಾರ. ಕೆಸರು ಗದ್ದೆಯಲ್ಲಿ ಅವರು ಹಾಕಿದ ಪರಿಶ್ರಮದ ಬಗ್ಗೆ ಇಂಚಿಂಚೂ ವಿವರ ನೀಡುವಂತಹ ವಿಡಿಯೋವನ್ನು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಬಿಡುಗಡೆ ಮಾಡಿದೆ. ಈ ಮೇಕಿಂಗ್​ ವಿಡಿಯೋದಲ್ಲಿ ಸ್ವತಃ ರಿಷಬ್​ ಶೆಟ್ಟಿ ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಕರಾವಳಿ ಭಾಗದಲ್ಲಿ ‘ಕಾಂತಾರ’ ಚಿತ್ರದ ಕಥೆ ಸಾಗುತ್ತದೆ. ಹಾಗಾಗಿ ಕಥೆಯಲ್ಲಿ ಕಂಬಳ ಸ್ಪರ್ಧೆಯ ದೃಶ್ಯಗಳು ಕೂಡ ಬರಲಿವೆ.

ರಿಷಬ್​ ಶೆಟ್ಟಿ ಅವರು ಕಂಬಳದ ಕೋಣಗಳನ್ನು ಓಡಿಸುವುದು ಕಲಿಯುತ್ತಾರೆ ಎಂಬುದರ ಬಗ್ಗೆ ಆರಂಭದಲ್ಲಿ ಚಿತ್ರತಂಡದ ಅನೇಕರಿಗೆ ಅನುಮಾನ ಇತ್ತು. ಆದರೆ ರಿಷಬ್​ ಅವರು ಹೊಸ ಹುಮ್ಮಸ್ಸಿನಿಂದ ಕಲಿತುಕೊಂಡರು. ಕೇವಲ ಒಂದು ತಿಂಗಳಲ್ಲಿ ವೃತ್ತಿಪರ ಕಂಬಳದ ಓಟಗಾರನಂತೆ ಅವರು ತಯಾರಾಗಿಬಿಟ್ಟರು. ಆದರೆ ಆ ಜರ್ನಿ ಅಷ್ಟು ಸುಲಭದ್ದಾಗಿರಲಿಲ್ಲ. ಹಲವು ದಿನ ಅಭ್ಯಾಸ ಮಾಡಿದ ಬಳಿಕ ಅವರು ಚಿತ್ರೀಕರಣದಲ್ಲಿ ಭಾಗವಹಿಸಿದರು.

ಇದನ್ನೂ ಓದಿ
Image
Kantara: ‘ಕಾಂತಾರ’ ಚಿತ್ರಕ್ಕೆ ಪುನೀತ್​ ಹೀರೋ ಆಗ್ಬೇಕಿತ್ತು; ಆ ಸ್ಥಾನಕ್ಕೆ ರಿಷಬ್ ಶೆಟ್ಟಿ ಬಂದಿದ್ದು ಹೇಗೆ? ಇಲ್ಲಿದೆ ಉತ್ತರ
Image
Kantara: ಧೂಳೆಬ್ಬಿಸಿದ ‘ಕಾಂತಾರ’ ಟ್ರೇಲರ್​; ಹೇಗಿದೆ ರಿಷಬ್​ ಶೆಟ್ಟಿ-ಕಿಶೋರ್​ ಮುಖಾಮುಖಿ?
Image
‘ಸಿಂಗಾರ ಸಿರಿಯೆ..’ ಹಾಡಿಗೆ ತಲೆದೂಗಿದ ಪ್ರೇಕ್ಷಕರು; ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಚಿತ್ರಕ್ಕೆ ಸಿಕ್ತು ಮೈಲೇಜ್
Image
ದಸರಾ ಹಬ್ಬಕ್ಕೆ ಬರಲಿದೆ ‘ಕಾಂತಾರ’; ರಿಷಬ್​ ಶೆಟ್ಟಿ ಚಿತ್ರದ ರಿಲೀಸ್​ ಡೇಟ್​ ಘೋಷಿಸಿದ ‘ಹೊಂಬಾಳೆ ಫಿಲ್ಮ್ಸ್​’

ಕೆಸರು ಗದ್ದೆಯಲ್ಲಿ ಈ ಸನ್ನಿವೇಶಗಳ ಸಂಪೂರ್ಣ ಚಿತ್ರೀಕರಣ ನಡೆಯಿತು. ದುಬಾರಿ ಕ್ಯಾಮೆರಾಗಳನ್ನು ಇಟ್ಟುಕೊಂಡು ಶೂಟಿಂಗ್​ ಮಾಡುವುದು ಎಷ್ಟು ಕಷ್ಟ ಆಗಿತ್ತು ಎಂಬುದನ್ನು ಛಾಯಾಗ್ರಾಹಕ ಅರವಿಂದ್​ ಕಶ್ಯಪ್​ ಅವರು ವಿವರಿಸಿದ್ದಾರೆ. ಈ ಮೇಕಿಂಗ್ ವಿಡಿಯೋ ನೋಡಿ ಅಭಿಮಾನಿಗಳ ನಿರೀಕ್ಷೆ ಹೆಚ್ಚಿದೆ. ‘ಕಾಂತಾರ’ ಸಿನಿಮಾ ಮೇಲಿರುವ ಕ್ರೇಜ್​ ಇನ್ನೂ ಜಾಸ್ತಿ ಆಗಿದೆ.

ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ ಮೂಲಕ ವಿಜಯ್​ ಕಿರಗಂದೂರು ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ರಿಷಬ್​ ಶೆಟ್ಟಿ ಜೊತೆ ಸಪ್ತಮಿ ಗೌಡ, ಕಿಶೋರ್​, ಅಚ್ಯುತ್​ ಕುಮಾರ್​, ಪ್ರಮೋದ್​ ಶೆಟ್ಟಿ ಮುಂತಾದವರು ‘ಕಾಂತಾರ’ ಚಿತ್ರದಲ್ಲಿ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ