ಹಿಂದಿ ಬಳಿಕ ತೆಲುಗಿಗೆ ಹಾರಿದ ಸಪ್ತಮಿ ಗೌಡ; ಸ್ಟಾರ್ ಹೀರೋ ಜೊತೆ ನಟಿಸೋ ಅವಕಾಶ
‘ಕಾಂತಾರ’ ಸೂಪರ್ ಹಿಟ್ ಆದ ಬಳಿಕ ಸಪ್ತಮಿ ಗೌಡ ಅವರಿಗೆ ಹಲವು ಆಫರ್ಗಳು ಬಂದವು. ಆದರೆ, ಎಲ್ಲವನ್ನೂ ಅಳೆದು ತೂಗಿ ಅವರು ಒಪ್ಪಿಕೊಳ್ಳುತ್ತಿದ್ದಾರೆ. ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಮೂಲಕ ಹಿಂದಿ ಚಿತ್ರರಂಗಕ್ಕೆ ಪರಿಚಯಗೊಂಡಿದ್ದ ಅವರು ಈಗ ತೆಲುಗಿಗೆ ಹೋಗುತ್ತಿದ್ದಾರೆ.
ಸಪ್ತಮಿ ಗೌಡ (Saptami Gowda) ಅವರು ‘ಪಾಪ್ಕಾರ್ನ್ ಮಂಕಿ ಟೈಗರ್’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡರು. ಈ ಚಿತ್ರದಿಂದ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಆ ಬಳಿಕ ಅವರಿಗೆ ಸಿಕ್ಕಿದ್ದು ‘ಕಾಂತಾರ’ ಸಿನಿಮಾ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಈ ಸಿನಿಮಾ ಸೂಪರ್ ಹಿಟ್ ಆಯಿತು. ನಂತರ ಅವರು ಹಿಂದಿ ಚಿತ್ರರಂಗಕ್ಕೂ ಕಾಲಿಟ್ಟರು. ಈಗ ತೆಲುಗಿನ ಸಿನಿಮಾದಲ್ಲಿ ಸಪ್ತಮಿ ಗೌಡ ಅವರು ನಟಿಸುತ್ತಿದ್ದಾರೆ. ಈ ವಿಚಾರವನ್ನು ಸ್ವತಃ ಅವರೇ ರಿವೀಲ್ ಮಾಡಿದ್ದಾರೆ.
ಸಪ್ತಮಿ ಗೌಡಗೆ ‘ಕಾಂತಾರ’ ಸಿನಿಮಾ ಮೂಲಕ ಸಿಕ್ಕ ಖ್ಯಾತಿ ತುಂಬಾನೇ ದೊಡ್ಡದು. ಈ ಚಿತ್ರ ಸೂಪರ್ ಹಿಟ್ ಆದ ಬಳಿಕ ಅವರಿಗೆ ಹಲವು ಆಫರ್ಗಳು ಬಂದವು. ಆದರೆ, ಎಲ್ಲವನ್ನೂ ಅಳೆದು ತೂಗಿ ಅವರು ಒಪ್ಪಿಕೊಳ್ಳುತ್ತಿದ್ದಾರೆ. ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಮೂಲಕ ಹಿಂದಿ ಚಿತ್ರರಂಗಕ್ಕೆ ಪರಿಚಯಗೊಂಡಿದ್ದ ಅವರು ಈಗ ತೆಲುಗಿಗೆ ಹೋಗುತ್ತಿದ್ದಾರೆ.
ತೆಲುಗು ಸಿನಿಮಾದಲ್ಲಿ ನಟಿಸುತ್ತಿರುವ ಬಗ್ಗೆ ಸಪ್ತಮಿ ಗೌಡ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ನಿತಿನ್ ಸಿನಿಮಾದಲ್ಲಿ ನಾನು ನಟಿಸುತ್ತಿದ್ದೇನೆ. ಸಿನಿಮಾ ಶೂಟಿಂಗ್ ಕೂಡ ಶುರುವಾಗಿದೆ. ನಾನು ಹೋಗಿ ಸೆಟ್ ಸೇರಿಕೊಳ್ಳಬೇಕಿದೆ’ ಎಂದಿದ್ದಾರೆ ಸಪ್ತಮಿ ಗೌಡ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.
ವಿಶೇಷ ಎಂದರೆ ಸಪ್ತಮಿ ಗೌಡ ಅವರು ಈ ಸಿನಿಮಾಗಾಗಿ ಕುದುರೆ ಸವಾರಿ ಕಲಿಯುತಿದ್ದಾರೆ. ಈ ಬಗ್ಗೆಯೂ ಅವರು ಹೇಳಿಕೊಂಡಿದ್ದಾರೆ. ‘ನಾನು ಕುದುರೆ ಸವಾರಿ ಕಲಿಯುತ್ತಿದ್ದೇನೆ. ಸಂಪೂರ್ಣವಾಗಿ ಕಲಿತಿಲ್ಲ. ಇನ್ನೂ ಕಲಿಯುತ್ತಿದ್ದೇನೆ’ ಎಂದಿದ್ದಾರೆ ಅವರು. ಸದ್ಯ ಪಾತ್ರದ ಬಗ್ಗೆ ಅವರು ಹೆಚ್ಚು ಮಾಹಿತಿ ಬಿಟ್ಟುಕೊಡುವುದಿಲ್ಲ ಎಂದಿದ್ದಾರೆ ಅವರು.
ಇದನ್ನೂ ಓದಿ: ‘ಕಾಂತಾರಾ ಪ್ರೀಕ್ವೆಲ್ನಲ್ಲಿ ನಾನಿರಲ್ಲ, ನನ್ನ ಜಾಗಕ್ಕೆ ಬೇರೆಯವರು ಬಂದಿದ್ದಾರೆ’; ಸಪ್ತಮಿ ಗೌಡ
ಸಪ್ತಮಿ ಗೌಡ ಅವರು ಮೊದಲು ‘ಪಾಪ್ಕಾರ್ನ್ ಮಂಕಿ ಟೈಗರ್’ ಸಿನಿಮಾದಲ್ಲಿ ನಟಿಸಿದರು. ಈ ಚಿತ್ರದಲ್ಲಿ ರಗಡ್ ಅವತಾರ ತಾಳಿದ್ದರು. ಆ ಬಳಿಕ ‘ಕಾಂತಾರ’ಸಿನಿಮಾದಲ್ಲಿ ಲೀಲಾ ಹೆಸರಿನ ಪಾತ್ರ ಮಾಡಿದರು. ಈ ಪಾತ್ರವೂ ಗಮನ ಸೆಳೆಯಿತು. ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲಿ ಅವರು ವಿಜ್ಞಾನಿಯ ಪಾತ್ರ ಮಾಡಿದರು. ‘ಯುವ’ ಸಿನಿಮಾದಲ್ಲಿ ಕಾಲೇಜು ಹುಡುಗಿಯಾಗಿ ನಟಿಸಿದ್ದರು. ಈಗ ಅವರ ತೆಲುಗಿನ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿದೆ. ಎಲ್ಲಾ ರೀತಿಯ ಪಾತ್ರಗಳನ್ನು ಮಾಡಬೇಕು ಎಂಬುದು ಅವರ ಕನಸು. ಇದರ ಜೊತೆಗೆ ಹೊಸ ಹೊಸ ಆಫರ್ಗಳು ಅವರನ್ನು ಹುಡುಕಿ ಬರುತ್ತಿವೆ. ಎಲ್ಲವನ್ನೂ ಅಳೆದು ತೂಗಿ ಅವರು ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ