Karnataka Election: ಚುನಾವಣೆ ಜಾಗೃತಿಗೆ, ಪ್ರಜಾಕೀಯ ಪ್ರಚಾರಕ್ಕೆ ‘ಕಾಂತಾರ’ ದೈವದ ದೃಶ್ಯ ಬಳಕೆ; ವಿಡಿಯೋ ವೈರಲ್​

|

Updated on: Feb 19, 2023 | 8:26 PM

Kantara Movie | Bhoota Kola: ‘ಕಾಂತಾರ’ ಸಿನಿಮಾದಲ್ಲಿನ ಮುಖ್ಯ ಆಕರ್ಷಣೆಯೇ ಭೂತಕೋಲದ ಸನ್ನಿವೇಶ. ಇದೇ ದೃಶ್ಯವನ್ನು ಈಗ ಎಡಿಟ್​ ಮಾಡಲಾಗಿದೆ. ಅದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

Karnataka Election: ಚುನಾವಣೆ ಜಾಗೃತಿಗೆ, ಪ್ರಜಾಕೀಯ ಪ್ರಚಾರಕ್ಕೆ ‘ಕಾಂತಾರ’ ದೈವದ ದೃಶ್ಯ ಬಳಕೆ; ವಿಡಿಯೋ ವೈರಲ್​
ಕಾಂತಾರ ಚಿತ್ರದ ದೃಶ್ಯ
Follow us on

ಕರ್ನಾಟಕದಲ್ಲಿ ಚುನಾವಣೆಯ (Karnataka Election) ಕಾವು ಹೆಚ್ಚಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಪ್ರಚಾರಕಾರ್ಯ ನಡೆಯುತ್ತಿದೆ. ಎಲ್ಲ ರಾಜಕೀಯ ಪಕ್ಷಗಳು ವಿವಿಧ ರೀತಿಯಲ್ಲಿ ಜನರನ್ನು ಸೆಳೆಯಲು ಪ್ರಯತ್ನಿಸುತ್ತಿವೆ. ಈ ಬಾರಿ ಬಹುಮತ ಯಾರಿಗೆ ಬರಬಹುದು ಎಂಬ ಬಗ್ಗೆ ವಿಶ್ಲೇಷಣೆ ನಡೆಯುತ್ತಿದೆ. ಈ ನಡುವೆ ಉಪೇಂದ್ರ ಅವರ ಪ್ರಜಾಕೀಯ ಪಕ್ಷ ಕೂಡ ಹಣಾಹಣಿಗೆ ಸಜ್ಜಾಗಿದೆ. ಸೋಶಿಯಲ್​ ಮೀಡಿಯಾದಲ್ಲಿ ‘ಕಾಂತಾರ’ (Kantara Movie) ಸಿನಿಮಾದ ದೃಶ್ಯವನ್ನು ಇಟ್ಟುಕೊಂಡು ಚುನಾವಣೆ ಕುರಿತು ಜಾಗೃತಿ ಮೂಡಿಸುವಂತಹ ಒಂದು ಪ್ರಯತ್ನ ನಡೆದಿದೆ. ಅದರಲ್ಲಿ ಪ್ರಜಾಕೀಯದ (Prajakeeya) ಪ್ರಚಾರ ಕೂಡ ಆಗಿದೆ. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದ್ದು, ಜನರು ಹಲವು ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

‘ಕಾಂತಾರ’ ಸಿನಿಮಾದಲ್ಲಿನ ಮುಖ್ಯ ಆಕರ್ಷಣೆಯೇ ಭೂತಕೋಲದ ದೃಶ್ಯ. ಇದರಲ್ಲಿ ರಿಷಬ್​ ಶೆಟ್ಟಿ ಅವರು ದೈವ ನರ್ತಕನ ಪಾತ್ರ ಮಾಡಿದ್ದಾರೆ. ತನ್ನ ಭೂಮಿಯನ್ನು ಊರಿನ ಜನರಿಂದ ಹಿಂದಿರುಗಿಸಿಕೊಡಿ ಎಂದು ದೈವದ ಬಳಿ ಸಾಹುಕಾರನ ಮಗ ಬೇಡಿಕೆ ಇಡುವ ದೃಶ್ಯ ಈ ಸಿನಿಮಾದಲ್ಲಿದೆ. ಆ ಬೇಡಿಕೆಗೆ ದೈವ ಒಪ್ಪದೇ ಇದ್ದಾಗ ತಾನು ಕೋರ್ಟಿಗೆ ಹೋಗುವುದಾಗಿ ಆತ ತಿಳಿಸುತ್ತಾನೆ. ಅದಕ್ಕೆ ಪ್ರತಿಕ್ರಿಯಿಸುವ ದೈವವು, ‘ಕೋರ್ಟಿಗೆ ಹೋಗ್ತಿ.. ಆದರೆ ನಿನ್ನ ತೀರ್ಮಾನ ಮೆಟ್ಟಿಲ ಮೇಲೆ ನಾನು ಮಾಡ್ತೀನಿ’ ಎಂದು ಹೇಳುತ್ತದೆ. ಇದೇ ದೃಶ್ಯವನ್ನು ಈಗ ಎಡಿಟ್​ ಮಾಡಲಾಗಿದೆ.

ಇದನ್ನೂ ಓದಿ: ಕಾಂತಾರ ಸಿನಿಮಾ ನೆನಪಿಸುತ್ತೆ ಬೆಂಗಳೂರಿನ ಈ ಜಾಗ ಪ್ರಕರಣ; ಕೊರಗಜ್ಜನ ಮೊರೆ ಹೋದ ಗ್ರಾಮಸ್ಥರು ಹೇಳಿದ್ದೇನು ಗೊತ್ತಾ?

ಇದನ್ನೂ ಓದಿ
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಹಣ, ಸೀರೆ, ಸಾರಾಯಿ ಹಂಚಿ ಮತ ಕೇಳುವುದು ಸರಿಯಲ್ಲ ಎಂಬ ಸಂದೇಶವನ್ನು ಈ ವಿಡಿಯೋ ಮೂಲಕ ಹೇಳಲಾಗಿದೆ. ‘ಸೀರೆ, ಸಾರಾಯಿ, ಹಣವನ್ನು ಈ ಜನರಿಗೆ ಹಂಚುತ್ತೇನೆ. ಅವರ ಮತವನ್ನು ನನಗೆ ಹಾಕಿಸಿಕೊಡಬೇಕು’ ಎಂದು ದೈವದ ಬಳಿ ರಾಜಕೀಯ ನಾಯಕನು ಬೇಡಿಕೆ ಇಡುತ್ತಾನೆ. ಅದಕ್ಕೆ ಪ್ರತಿಕ್ರಿಯೆಯಾಗಿ, ‘ಬಹಳ ಒಳ್ಳೆಯ ಪ್ರಾರ್ಥನೆ.. ಈ ಊರಿನವರ ಮತವನ್ನು ನಿಮಗೆ ಹಾಕಿಸಿಕೊಡುತ್ತೇನೆ. ಆದರೆ ಇಲ್ಲಿಯವರೆಗೆ ಇವರು ಕಟ್ಟಿದ ತೆರಿಗೆ ಹಣವನ್ನು ಹಿಂದಿರುಗಿಸಿಕೊಡಬಹುದಾ ರಾಜಕೀಯ ನಾಯಕರೇ?’ ಎಂದು ದೈವ ಮರುಪ್ರಶ್ನೆ ಕೇಳುತ್ತದೆ.

ಇದನ್ನೂ ಓದಿ: ‘ಮೋದಿ ಹಲವು ಬಾರಿ ಕಾಂತಾರ ಬಗ್ಗೆ ಮಾತಾಡಿದ್ದು ಕೇಳಿ ಖುಷಿ ಆಯ್ತು’: ಪ್ರಧಾನಿ ಭೇಟಿ ಬಗ್ಗೆ ರಿಷಬ್​ ಪ್ರತಿಕ್ರಿಯೆ

ದೈವ ಹೇಳಿದ್ದಕ್ಕೆ ಆತ ಒಪ್ಪುವುದಿಲ್ಲ. ಎಲ್ಲಿಗೆ ಹೋಗಬೇಕೋ ಅಲ್ಲಿಗೆ ಹೋಗುತ್ತೇನೆ ಎಂದು ಅವನು ಹೇಳುತ್ತಾನೆ. ಅದಕ್ಕೆ ಉತ್ತರಿಸುವ ದೈವ, ‘ಸೀರೆ, ಸಾರಾಯಿ ಹಂಚ್ತಿ.. ಆದ್ರೆ ಇದರ ತೀರ್ಮಾನವನ್ನು ಮತಗಟ್ಟೆಯಲ್ಲಿ ನಾನು ಮಾಡುತ್ತೇನೆ. ಈ ತೆರಿಗೆ ಹಣ ಊರಿನವರದ್ದು. ಅದರ ತೀರ್ಮಾನ ಇವತ್ತಲ್ಲ. ಮುಂದೊಂದು ದಿನ ಪ್ರಜಾಕೀಯ ಬರಬೇಕಾಗುತ್ತದೆ’ ಎಂದು ಹೇಳುವ ರೀತಿಯಲ್ಲಿ ವಿಡಿಯೋ ಎಡಿಟ್​ ಮಾಡಲಾಗಿದೆ.

ಈ ವಿಡಿಯೋ ಚೆನ್ನಾಗಿದೆ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ. ಆದರೆ ತಮ್ಮ ಸ್ವಾರ್ಥಕ್ಕಾಗಿ ದೈವದ ಹೆಸರನ್ನು ಈ ರೀತಿ ಬಳಕೆ ಮಾಡಿಕೊಂಡಿರುವುದು ಸರಿಯಲ್ಲ ಎಂದು ಕೂಡ ಕೆಲವರು ಅಭಿಪ್ರಾಯಪಟ್ಟಿದ್ದಾರೆ. ‘ಕಾಂತಾರ’ ಸಿನಿಮಾ ತೆರೆಕಂಡ ಬಳಿಕ ಭೂತಕೋಲದ ಬಗ್ಗೆ ಜನರಲ್ಲಿ ಆಸಕ್ತಿ ಹೆಚ್ಚಿತು. ಈ ಚಿತ್ರದಲ್ಲಿ ತೋರಿಸಿದ ದೃಶ್ಯವನ್ನು ಅನೇಕರು ಸೋಶಿಯಲ್​ ಮೀಡಿಯಾದಲ್ಲಿ ಅನುಕರಿಸಿದ್ದು ಕೂಡ ಉಂಟು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:03 pm, Sun, 19 February 23