AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ‘ಕೆಜಿಎಫ್ 2’ ಮಾಡಿದ್ದ ದಾಖಲೆಯನ್ನು ಮುರಿದ ‘ಕಾಂತಾರ’; ನಿಲ್ಲುತ್ತಿಲ್ಲ ಅಬ್ಬರ

‘ಕಾಂತಾರ’ ಚಿತ್ರ ದೇಶ-ವಿದೇಶಗಳಲ್ಲಿ ಜನಮೆಚ್ಚುಗೆ ಗಳಿಸಿ ಭರ್ಜರಿ ಯಶಸ್ಸು ಕಂಡಿದೆ. ಈಗ ಈ ಚಿತ್ರ ಕರ್ನಾಟಕದಲ್ಲಿ ಹೊಸ ದಾಖಲೆ ಬರೆದಿರುವ ಬಗ್ಗೆ ‘ಹೊಂಬಾಳೆ ಫಿಲ್ಮ್ಸ್’ ಮಾಹಿತಿ ಹಂಚಿಕೊಂಡಿದೆ.

ಕರ್ನಾಟಕದಲ್ಲಿ ‘ಕೆಜಿಎಫ್ 2’ ಮಾಡಿದ್ದ ದಾಖಲೆಯನ್ನು ಮುರಿದ ‘ಕಾಂತಾರ’; ನಿಲ್ಲುತ್ತಿಲ್ಲ ಅಬ್ಬರ
ಕಾಂತಾರ
TV9 Web
| Edited By: |

Updated on:Oct 24, 2022 | 4:17 PM

Share

‘ಕಾಂತಾರ’ ಸಿನಿಮಾ (Kantara Movie) ಬಾಕ್ಸ್ ಆಫೀಸ್​ನಲ್ಲಿ ಹೊಸ ಹೊಸ ದಾಖಲೆ ಬರೆದು ಮುಂದೆ ಸಾಗುತ್ತಿದೆ. ಇದರ ಜತೆಗೆ ಹಲವು ಚಿತ್ರಗಳು ಬರೆದ ದಾಖಲೆಗಳನ್ನು ಮುರಿಯುತ್ತಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಈ ಚಿತ್ರಕ್ಕೆ ಸಿನಿಪ್ರಿಯರು ತಲೆ ಬಾಗಿದ್ದಾರೆ. ವಿಜಯ್ ಕಿರಗಂದೂರು ಅವರ ‘ಹೊಂಬಾಳೆ ಫಿಲ್ಮ್ಸ್​’ (Hombale Films) ನಿರ್ಮಾಣದ ‘ಕೆಜಿಎಫ್ 2’ ಮಾಡಿದ್ದ ದಾಖಲೆಯನ್ನು ‘ಕಾಂತಾರ’ ಸಿನಿಮಾ ಮುರಿದಿದೆ. ಈ ಮೂಲಕ ಮತ್ತಷ್ಟು ರೆಕಾರ್ಡ್​ ಸೃಷ್ಟಿ ಮಾಡುವ ಸಾಧ್ಯತೆ ಗೋಚರವಾಗಿದೆ.

ಸೆಪ್ಟೆಂಬರ್ 30ರಂದು ‘ಕಾಂತಾರ’ ಸಿನಿಮಾ ರಿಲೀಸ್ ಆಯಿತು. ಇಂದಿಗೆ (ಅಕ್ಟೋಬರ್ 24) ಈ ಚಿತ್ರ ರಿಲೀಸ್ ಆಗಿ 25 ದಿನ ಕಳೆದಿದೆ. ‘ಕಾಂತಾರ’ ಚಿತ್ರ ದೇಶ-ವಿದೇಶಗಳಲ್ಲಿ ಜನಮೆಚ್ಚುಗೆ ಗಳಿಸಿ ಭರ್ಜರಿ ಯಶಸ್ಸು ಕಂಡಿದೆ. ಈಗ ಈ ಚಿತ್ರ ಕರ್ನಾಟಕದಲ್ಲಿ ಹೊಸ ದಾಖಲೆ ಬರೆದಿರುವ ಬಗ್ಗೆ ‘ಹೊಂಬಾಳೆ ಫಿಲ್ಮ್ಸ್’ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ
Image
Kantara: ‘ಕಾಂತಾರ’ ಚಿತ್ರದಿಂದ ಅಲ್ಲು ಅರ್ಜುನ್​ ತಂದೆಗೆ ಭಾರಿ ಲಾಭ; ಎಷ್ಟಕ್ಕೆ ನಡೆಯಿತು ತೆಲುಗು ವ್ಯವಹಾರ?
Image
Rishab Shetty: ಒಂದೇ ದಿನಕ್ಕೆ 15 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಪರಭಾಷೆಯಲ್ಲಿ ಭರ್ಜರಿ ಕಮಾಯಿ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Image
Rishab Shetty: ರಿಷಬ್​ ಶೆಟ್ಟಿ ಕಾಲಿಗೆ ಬಿದ್ದ ಖ್ಯಾತ ಯೂಟ್ಯೂಬರ್​; ಹಿಂದಿ ಪ್ರೇಕ್ಷಕರಲ್ಲಿ ಹೆಚ್ಚಿತು ‘ಕಾಂತಾರ’ ಸೆನ್ಸೇಷನ್​

ಹೊಂಬಾಳೆ ಬ್ಯಾನರ್​ನಲ್ಲಿ ಈವರೆಗೆ ನಿರ್ಮಾಣವಾದ ಚಿತ್ರಗಳ ಪೈಕಿ ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ಜನರು ವೀಕ್ಷಿಸಿದ ಚಲನಚಿತ್ರ ಎಂಬ ಹೆಗ್ಗಳಿಕೆಗೆ ‘ಕಾಂತಾರ’ ಪಾತ್ರವಾಗಿದೆ. ಕರ್ನಾಟಕದಲ್ಲಿ 25 ದಿನಗಳಲ್ಲಿ 77 ಲಕ್ಷ ಮಂದಿ ‘ಕಾಂತಾರ’ ಚಿತ್ರವನ್ನು ವೀಕ್ಷಿಸಿದ್ದಾರೆ. ಇದು ಚಿತ್ರತಂಡದ ಖುಷಿಯನ್ನು ಹೆಚ್ಚಿಸಿದೆ.

‘ಹೊಂಬಾಳೆ ಫಿಲ್ಮ್ಸ್​ ಸಂಸ್ಥೆ 2017ರಲ್ಲಿ ‘ರಾಜಕುಮಾರ’ ಸಿನಿಮಾ ರಿಲೀಸ್ ಮಾಡಿತು. ಈ ಚಿತ್ರಕ್ಕೆ ಪುನೀತ್ ಹೀರೋ ಆಗಿದ್ದರು ಹಾಗೂ ಸಂತೋಷ್​ ಆನಂದ್ ರಾಮ್ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಚಿತ್ರವನ್ನು ಕರ್ನಾಟಕದಲ್ಲಿ 65 ಲಕ್ಷ ಜನರು ವೀಕ್ಷಿಸಿದ್ದರು.

2018ರಲ್ಲಿ ರಿಲೀಸ್ ಆದ ಹೊಂಬಾಳೆ ಫಿಲ್ಮ್ಸ್​​ನ ‘ಕೆಜಿಎಫ್ 1’ ಹಲವು ದಾಖಲೆ ಬರೆದಿತ್ತು. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಈ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದರು. ಈ ಚಿತ್ರವನ್ನು ಕರ್ನಾಟಕದಲ್ಲಿ 75 ಲಕ್ಷ ಜನರು ವೀಕ್ಷಿಸಿದ್ದರು. 2022ರಲ್ಲಿ ಬಿಡುಗಡೆಯಾದ ‘ಕೆಜಿಎಫ್ 2’ ದೇಶ-ವಿದೇಶಗಳಲ್ಲಿ ಭರ್ಜರಿ ಯಶಸ್ಸು ಕಂಡಿತ್ತು. ಯಶ್ ಅಭಿನಯದ ಈ ಚಿತ್ರ ಬಾಲಿವುಡ್​ನಲ್ಲಿ ಮಾಡಿದ ದಾಖಲೆಗಳಿಗೆ ಲೆಕ್ಕವೇ ಇಲ್ಲ. ಕರ್ನಾಟಕದಲ್ಲಿ ಈ ಚಿತ್ರವನ್ನು 72 ಲಕ್ಷ ಮಂದಿ ವೀಕ್ಷಿಸಿದ್ದರು. ಹೊಂಬಾಳೆ ಫಿಲ್ಮ್ಸ್​ ಅಡಿಯಲ್ಲಿ ನಿರ್ಮಾಣಗೊಂಡು ರಿಲೀಸ್ ಆದ ಚಿತ್ರಗಳು ಮಾಡಿದ ಎಲ್ಲಾ ದಾಖಲೆಗಳನ್ನು ‘ಕಾಂತಾರ’ ಉಡೀಸ್ ಮಾಡಿದೆ.

Published On - 4:16 pm, Mon, 24 October 22

Follow Us
TV9 Web
TV9 Web

TV9 Kannada

Read More
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್