Kantara: ‘ಕಾಂತಾರ’ ಶಿವನ ಪಾತ್ರದಲ್ಲಿ ಪುನೀತ್​; ಹೇಗಿದೆ ನೋಡಿ ಅಭಿಮಾನಿ ಕಲ್ಪನೆಯಲ್ಲಿ ಮೂಡಿದ ಪೋಸ್ಟರ್​

Puneeth Rajkumar | Kantara Movie: ‘ಕಾಂತಾರ’ ಚಿತ್ರದ ಕಥಾನಾಯಕ ಶಿವನ ಪಾತ್ರವನ್ನು ಪುನೀತ್​ ನಿರ್ವಹಿಸಿದ್ದರೆ ಹೇಗಿರುತ್ತಿತ್ತು ಎಂದು ಈ ರೀತಿಯಾಗಿ ಕಲ್ಪಿಸಿಕೊಳ್ಳಲಾಗಿದೆ. ಇದನ್ನು ನೋಡಿ ಅಭಿಮಾನಿಗಳು ಎಮೋಷನಲ್​ ಆಗುತ್ತಿದ್ದಾರೆ.

Kantara: ‘ಕಾಂತಾರ’ ಶಿವನ ಪಾತ್ರದಲ್ಲಿ ಪುನೀತ್​; ಹೇಗಿದೆ ನೋಡಿ ಅಭಿಮಾನಿ ಕಲ್ಪನೆಯಲ್ಲಿ ಮೂಡಿದ ಪೋಸ್ಟರ್​
ಡಿಜಿಟಲ್ ಆರ್ಟಿಸ್ಟ್ ಕುಶಾಲ್ ಹಿರೇಮಠ್ ರಚಿಸಿದ ಪೋಸ್ಟರ್
Follow us
TV9 Web
| Updated By: ಮದನ್​ ಕುಮಾರ್​

Updated on:Nov 11, 2022 | 9:12 AM

ತುಳುನಾಡಿನ ಸಂಸ್ಕೃತಿಯನ್ನು ಸಾರುವ ‘ಕಾಂತಾರ’ (Kantara) ಸಿನಿಮಾ ಭರ್ಜರಿ ಗೆಲುವು ಕಂಡಿದೆ. ಕನ್ನಡ ಚಿತ್ರರಂಗಕ್ಕೆ ಈ ಸಿನಿಮಾ ಹೆಮ್ಮೆ ತಂದಿದೆ. ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಗೆ ಬಹುದೊಡ್ಡ ಗೆಲುವು ಸಿಕ್ಕಿದೆ. ರಿಷಬ್​ ಶೆಟ್ಟಿ (Rishab Shetty) ನಟನೆ ಮತ್ತು ನಿರ್ದೇಶನದ ಬಗ್ಗೆ ಪರಭಾಷೆ ಮಂದಿ ಕೂಡ ಶಹಭಾಷ್​ ಎಂದಿದ್ದಾರೆ. ಗಲ್ಲಾ ಪೆಟ್ಟಿಗೆಯಲ್ಲಿ ಈ ಸಿನಿಮಾ 300 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಆರಂಭದಲ್ಲಿ ಈ ಕಥೆಯನ್ನು ಪುನೀತ್ ರಾಜ್​ಕುಮಾರ್ ಅವರಿಗೆ ಹೇಳಲಾಗಿತ್ತು. ಕಾರಣಾಂತರ ಅವರು ಈ ಚಿತ್ರದಲ್ಲಿ ನಟಿಸಲಿಲ್ಲ. ಒಂದು ವೇಳೆ ನಟಿಸಿದ್ದರೆ ಅವರ ಗೆಟಪ್​ ಹೇಗಿರುತ್ತಿತ್ತು? ಕಲಾವಿದರೊಬ್ಬರ ಕಲ್ಪನೆಯಲ್ಲಿ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ‘ಕಾಂತಾರ’ ಗೆಟಪ್​ನಲ್ಲಿ ಪುನೀತ್​ ರಾಜ್​ಕುಮಾರ್ (Puneeth Rajkumar) ಅವರ ಪೋಸ್ಟರ್​ ಸಿದ್ಧಗೊಂಡಿದ್ದು, ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಡಿಜಿಟಲ್​ ಆರ್ಟಿಸ್ಟ್​ ಕುಶಾಲ್​ ಹಿರೇಮಠ್​ ಅವರು ಈ ಪೋಸ್ಟರ್​ ರಚಿಸಿದ್ದಾರೆ. ಪುನೀತ್​ ಅವರ ಬೇರೆ ಫೋಟೋವನ್ನು ಬಳಸಿಕೊಂಡು ಈ ರೀತಿ ವಿನ್ಯಾಸ ಮಾಡಲಾಗಿದೆ. ‘ಕಾಂತಾರ’ ಚಿತ್ರದ ಕಥಾನಾಯಕ ಶಿವನ ಪಾತ್ರವನ್ನು ಪುನೀತ್​ ನಿರ್ವಹಿಸಿದ್ದರೆ ಅವರ ಗೆಟಪ್​ ಹೇಗಿರುತ್ತಿತ್ತು ಎಂದು ಈ ರೀತಿಯಾಗಿ ಅವರು ಕಲ್ಪಿಸಿಕೊಂಡಿದ್ದಾರೆ. ಈ ಫೋಟೋ ನೋಡಿ ಅಪ್ಪು ಅಭಿಮಾನಿಗಳು ಎಮೋಷನಲ್​ ಆಗುತ್ತಿದ್ದಾರೆ.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

‘ಹೊಂಬಾಳೆ ಫಿಲ್ಮ್ಸ್​’ ನಿರ್ಮಾಣ ಸಂಸ್ಥೆ ಜೊತೆಗೆ ಪುನೀತ್​ ರಾಜ್​ಕುಮಾರ್​ ಅವರು ಆಪ್ತ ಒಡನಾಟ ಹೊಂದಿದ್ದಾರೆ. ‘ಕಾಂತಾರ’ ಚಿತ್ರವನ್ನು ಅವರೇ ಮಾಡಬೇಕು ಎಂದು ಆರಂಭದಲ್ಲಿ ಅಂದುಕೊಳ್ಳಲಾಗಿತ್ತು. ಆದರೆ ಈ ಪಾತ್ರಕ್ಕೆ ರಿಷಬ್​ ಶೆಟ್ಟಿ ಅವರು ಸೂಕ್ತ ಎಂದು ಸ್ವತಃ ಪುನೀತ್​ ಸೂಚಿಸಿದ ಬಳಿಕ ಆ ಪಾತ್ರ ರಿಷಬ್​ ಪಾಲಾಯಿತು. ಇಂದು ‘ಕಾಂತಾರ’ ಎಲ್ಲೆಡೆ ಜಯಭೇರಿ ಭಾರಿಸುತ್ತಿದೆ. ಈ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಪುನೀತ್​ ರಾಜ್​ಕುಮಾರ್​ ಅವರು ನಮ್ಮೊಂದಿಗೆ ಇಲ್ಲವಲ್ಲ ಎಂದು ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

ಕನ್ನಡ ಪಾತ್ರವಲ್ಲದೇ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗೂ ಡಬ್​ ಆಗಿ ‘ಕಾಂತಾರ’ ತೆರೆಕಂಡಿದೆ. ಹಿಂದಿ ಪ್ರೇಕ್ಷಕರು ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಉತ್ತರ ಭಾರತದಲ್ಲಿ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಹಿಂದಿ ವರ್ಷನ್​ನಿಂದ ಈವರೆಗೂ 70 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ. ರಿಷಬ್​ ಶೆಟ್ಟಿ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಮಿಂಚುತ್ತಿದ್ದಾರೆ. ಒಂದು ವೇಳೆ ಪುನೀತ್​ ರಾಜ್​ಕುಮಾರ್​ ಅವರು ಇದ್ದಿದ್ದರೆ ಈ ಚಿತ್ರದ ಗೆಲುವನ್ನು ಖಂಡಿತ ಸಂಭ್ರಮಿಸುತ್ತಿದ್ದರು.

ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಪ್ರಾಜೆಕ್ಟ್​ ‘ಗಂಧದ ಗುಡಿ’ ಬಿಡುಗಡೆಯಾಗಿ ಮೆಚ್ಚುಗೆ ಪಡೆದುಕೊಂಡಿದೆ. ಕರ್ನಾಟಕದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ಬಗ್ಗೆ ತಿಳಿಸಿಕೊಡುವ ಈ ಸಾಕ್ಷ್ಯಚಿತ್ರಕ್ಕೆ ಅಮೋಘವರ್ಷ ನಿರ್ದೇಶನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:12 am, Fri, 11 November 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ