Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara Remuneration: 400 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ‘ಕಾಂತಾರ’ ಚಿತ್ರದಿಂದ ರಿಷಬ್ ಶೆಟ್ಟಿಗೆ ಸಿಕ್ಕಿದ್ದೆಷ್ಟು?

ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಜತೆ ಕಿಶೋರ್, ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್ ಮೊದಲಾದವರು ನಟಿಸಿದ್ದಾರೆ. ಅವರ ಸಂಭಾವನೆ ಬಗ್ಗೆ ಈಗ ಮಾಹಿತಿ ಸಿಕ್ಕಿದೆ.

Kantara Remuneration: 400 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ‘ಕಾಂತಾರ’ ಚಿತ್ರದಿಂದ ರಿಷಬ್ ಶೆಟ್ಟಿಗೆ ಸಿಕ್ಕಿದ್ದೆಷ್ಟು?
ರಿಷಬ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 20, 2022 | 10:38 AM

ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ (Kantara Movie) ಸೂಪರ್ ಹಿಟ್ ಆಗಿದೆ. ವಿಶ್ವ ಮಟ್ಟದಲ್ಲಿ ಈ ಸಿನಿಮಾ ಸದ್ದು ಮಾಡಿದೆ. ಈ ಚಿತ್ರದಿಂದ ಜಗತ್ತಿಗೆ ಕರಾವಳಿಯ ಸಂಸ್ಕೃತಿ ಪರಿಚಯವಾಗಿದೆ. ಈ ಸಿನಿಮಾ 400 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಸಿನಿಮಾ ಈಗ ಒಟಿಟಿಯಲ್ಲೂ ಸದ್ದು ಮಾಡುತ್ತಿದೆ. ಈ ಚಿತ್ರದಲ್ಲಿ ನಟಿಸಿದ ಕಲಾವಿದರ ಸಂಭಾವನೆ ಬಗ್ಗೆ ಮಾಹಿತಿ ಹೊರ ಬಿದ್ದಿದೆ. ರಿಷಬ್ ಶೆಟ್ಟಿ ಪಡೆದ ಸಂಭಾವನೆ ವಿಚಾರ ಅನೇಕರಿಗೆ ಅಚ್ಚರಿ ಮೂಡಿಸಿದೆ.

‘ಕಾಂತಾರ’ ಸಿನಿಮಾ ಕನ್ನಡದಲ್ಲಿ 100 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಚಿತ್ರದ ಒಟ್ಟಾರೆ ಕಲೆಕ್ಷನ್ 400 ಕೋಟಿ ರೂಪಾಯಿ ದಾಟಿದೆ ಎನ್ನಲಾಗಿದೆ. ಈ ಸಿನಿಮಾಗಳು ಮಾಡಿದ ದಾಖಲೆಗಳಿಗೆ ಲೆಕ್ಕವೇ ಇಲ್ಲ. ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಜತೆ ಕಿಶೋರ್, ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್ ಮೊದಲಾದವರು ನಟಿಸಿದ್ದಾರೆ. ಅವರ ಸಂಭಾವನೆ ಬಗ್ಗೆ ನ್ಯೂಸ್​18 ವೆಬ್ ಸೈಟ್ ವರದಿ ಮಾಡಿದೆ.

ಕಿಶೋರ್ ಅವರಿಗೆ ಚಿತ್ರರಂಗದಲ್ಲಿ ಅಪಾರ ಅನುಭವ ಇದೆ. ಅವರು ಈ ಚಿತ್ರಕ್ಕಾಗಿ ಒಂದು ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಪ್ರಮೋದ್ ಶೆಟ್ಟಿ ಅವರು ಚಿತ್ರದುದ್ದಕ್ಕೂ ಕಾಣಿಸಿಕೊಳ್ಳುತ್ತಾರೆ. ಅವರು 60 ಲಕ್ಷ ರೂಪಾಯಿ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ. ಅಚ್ಯುತ್ ಕುಮಾರ್ ಅವರು ಈ ಚಿತ್ರಕ್ಕಾಗಿ 40 ಲಕ್ಷ ರೂಪಾಯಿ ಜೇಬಿಗೆ ಇಳಿಸಿಕೊಂಡಿದ್ದಾರೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ಇದನ್ನೂ ಓದಿ: Lionel Messi: ‘ಕಾಂತಾರ’ ರೀತಿ ಕಾಣಿಸಿದ ಮೆಸ್ಸಿ-ಮರಡೋನಾ; ವಿಶ್ವ ಮಟ್ಟದಲ್ಲಿ ಕನ್ನಡ ಸಿನಿಮಾ ಕ್ರೇಜ್​

ಸಪ್ತಮಿ ಗೌಡ ಅವರ ಪಾತ್ರಕ್ಕೆ ತುಂಬಾನೇ ತೂಕ ಇದೆ. ಅವರು ಈ ಚಿತ್ರಕ್ಕಾಗಿ ಒಂದು ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ರಿಷಬ್ ಶೆಟ್ಟಿ ಅವರು ಈ ಚಿತ್ರದ ಮುಖ್ಯ ರುವಾರಿ. ಸಿನಿಮಾಗೆ ಕಥೆ ಬರೆದು ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಿಂದ 4 ಕೋಟಿ ರೂಪಾಯಿ ಪಡೆದಿದ್ದಾರೆ ಎನ್ನಲಾಗಿದೆ.

‘ಕಾಂತಾರ’ ಬಜೆಟ್ ಎಷ್ಟು?

‘ಕಾಂತಾರ’ ಸಿನಿಮಾದ ಬಜೆಟ್ ಕೇವಲ 15 ಕೋಟಿ ರೂಪಾಯಿ. ಈ ಸಿನಿಮಾ ಗಳಿಕೆ ಮಾಡಿದ್ದು 406 ಕೋಟಿ ರೂಪಾಯಿ. ಈ ಚಿತ್ರದ ಒಟಿಟಿ ಹಕ್ಕು ಹಾಗೂ ಟಿವಿ ಹಕ್ಕು ದೊಡ್ಡ ಮಟ್ಟಕ್ಕೆ ಮಾರಾಟವಾಗಿದೆ. ಈ ಚಿತ್ರದಿಂದ ಹೊಂಬಾಳೆ ಫಿಲ್ಮ್ಸ್​ಗೆ ದೊಡ್ಡ ಮಟ್ಟದ ಲಾಭ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ