Rishab Shetty: ‘ಕಾಂತಾರ’ ಥೀಮ್​ನಲ್ಲಿ ದುರ್ಗಾ ಪೂಜೆ ಮಾಡಿದ ಕೋಲ್ಕತ್ತಾ ಜನರು

ಪಶ್ಚಿಮ ಬಂಗಾಳದಲ್ಲಿ ನವರಾತ್ರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಬೀದಿ ಬೀದಿಗಳಲ್ಲಿ ದುರ್ಗೆಯ ಪೂಜೆ ಮಾಡಲಾಗುತ್ತದೆ. ದುರ್ಗಾ ಮಾತೆಯ ಮೂರ್ತಿ ಇಟ್ಟು ಪೂಜೆ ಮಾಡಲಾಗುತ್ತದೆ. ಈಗ ಅಲ್ಲಿನ ಜನರು ‘ಕಾಂತಾರ’ ಥೀಮ್​ನಲ್ಲಿ ದುರ್ಗಾ ಪೂಜೆ ಮಾಡಿದ್ದಾರೆ.

Rishab Shetty: ‘ಕಾಂತಾರ’ ಥೀಮ್​ನಲ್ಲಿ ದುರ್ಗಾ ಪೂಜೆ ಮಾಡಿದ ಕೋಲ್ಕತ್ತಾ ಜನರು
ಕಾಂತಾರ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Oct 20, 2023 | 10:28 AM

ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ರಿಲೀಸ್ ಆಗಿ ಒಂದು ವರ್ಷ ಕಳೆದಿದೆ. ಆದಾಗ್ಯೂ ಸಿನಿಮಾದ ಹವಾ ಕಡಿಮೆ ಆಗಿಲ್ಲ. ಈ ಚಿತ್ರ ರಿಲೀಸ್ ಆದ ಸಂದರ್ಭದಲ್ಲಿ ಕಾಂತಾರ ಗೆಟಪ್​ನಲ್ಲಿ ಅನೇಕರು ಕಾಣಿಸಿಕೊಂಡಿದ್ದರು. ಕಾಂತಾರ ಸ್ಟೈಲ್​ನಲ್ಲಿ ಗಣಪತಿ ಮೂರ್ತಿಯನ್ನು ಸಿದ್ಧಪಡಿಸಲಾಗಿತ್ತು. ಈಗ ದೂರದ ಕೋಲ್ಕತ್ತಾದಲ್ಲಿ ಕಾಂತಾರ ಥೀಮ್​ನಲ್ಲಿ ದುರ್ಗಾ ಪೂಜೆ ಮಾಡಲಾಗಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ. ಇದು ‘ಕಾಂತಾರ’ ಸಿನಿಮಾದ ಹವಾ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ನವರಾತ್ರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಬೀದಿ ಬೀದಿಗಳಲ್ಲಿ ದುರ್ಗೆಯ ಪೂಜೆ ಮಾಡಲಾಗುತ್ತದೆ. ದುರ್ಗಾ ಮಾತೆಯ ಮೂರ್ತಿ ಇಟ್ಟು ಪೂಜೆ ಮಾಡಲಾಗುತ್ತದೆ. ಈಗ ಅಲ್ಲಿನ ಜನರು ‘ಕಾಂತಾರ’ ಥೀಮ್​ನಲ್ಲಿ ದುರ್ಗಾ ಪೂಜೆ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅನೇಕರು ‘ಕಾಂತಾರ’ ಸಿನಿಮಾದ ಪ್ರಭಾವವನ್ನು ಕೊಂಡಾಡಿದ್ದಾರೆ.

‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಅವರು ಎರಡು ಶೇಡ್​ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿ ಅನೇಕರು ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ದೈವಾರಾಧನೆ ವಿಚಾರವನ್ನು ಇಟ್ಟುಕೊಂಡು ರಿಷಬ್ ಶೆಟ್ಟಿ ಈ ಸಿನಿಮಾ ಮಾಡಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ 30ರಂದು ಸಿನಿಮಾ ರಿಲೀಸ್ ಆಯಿತು. ಮೊದಲು ಕನ್ನಡದಲ್ಲಿ ಮಾತ್ರ ಚಿತ್ರ ಬಿಡುಗಡೆ ಆಯಿತು. ಈ ಚಿತ್ರಕ್ಕೆ ಸಿಕ್ಕ ರೆಸ್ಪಾನ್ಸ್ ನೋಡಿ ಪರಭಾಷೆಯಿಂದಲೂ ಚಿತ್ರಕ್ಕೆ ಬೇಡಿಕೆ ಸೃಷ್ಟಿ ಆಯಿತು. ಹೀಗಾಗಿ, ಹಿಂದಿ ಮೊದಲಾದ ಭಾಷೆಗೆ ಸಿನಿಮಾನ ಡಬ್ ಮಾಡಿ ರಿಲೀಸ್ ಮಾಡಲಾಯಿತು. ಅಲ್ಲಿಯೂ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ.

ಇದನ್ನೂ ಓದಿ: ವಿರಾಟ್ ಶತಕದ ಬಳಿಕ ರಿಷಬ್ ಶೆಟ್ಟಿ ಸಂಭ್ರಮ ಹೇಗಿತ್ತು ನೋಡಿ..

ಸದ್ಯ ಎಲ್ಲರ ಗಮನ ‘ಕಾಂತಾರ 2’ ಚಿತ್ರದ ಮೇಲಿದೆ. ರಿಷಬ್ ಶೆಟ್ಟಿ ಅವರು ಸ್ಕ್ರಿಪ್ಟ್ ಕೆಲಸ ಪೂರ್ಣಗೊಳಿಸಿದ್ದಾರೆ. ಇದು ‘ಕಾಂತಾರ’ ಚಿತ್ರದ ಪ್ರೀಕ್ವೆಲ್ ಎಂದು ರಿಷಬ್ ಶೆಟ್ಟಿ ಅವರೇ ಘೋಷಣೆ ಮಾಡಿದ್ದಾರೆ. ಈ ಮೊದಲು ಆಗಸ್ಟ್​ನಲ್ಲಿ ಸಿನಿಮಾ ಶೂಟಿಂಗ್ ಆರಂಭ ಆಗಲಿದೆ ಎಂದು ಹೇಳಲಾಗಿತ್ತು. ಆ ಬಳಿಕ ಸೆಪ್ಟೆಂಬರ್ ಎನ್ನುವ ಸುದ್ದಿ ಹುಟ್ಟಿಕೊಂಡಿತು. ಅಕ್ಟೋಬರ್ ತಿಂಗಳು ಪೂರ್ಣಗೊಳ್ಳುತ್ತಾ ಬಂದರೂ ಚಿತ್ರದ ಶೂಟಿಂಗ್ ಶುರುವಾಗಿಲ್ಲ. ದೊಡ್ಡ ಬಜೆಟ್​ನಲ್ಲಿ ಈ ಸಿನಿಮಾ ಸಿದ್ಧವಾಗುತ್ತಿದೆ ಎನ್ನಲಾಗಿದೆ. ‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಹೊಂಬಾಳೆ ಫಿಲ್ಮ್ಸ್ ಚಿತ್ರಕ್ಕೆ ಬಂಡವಾಳ ಹೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:11 am, Fri, 20 October 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ