AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್ ರೇಸ್​ಗೆ ‘ಕಾಂತಾರ’, ಸಿನಿಮಾಗೆ ಪ್ರೀಕ್ವೆಲ್​; ವಿಜಯ್ ಕಿರಗಂದೂರು ಕೊಟ್ರು ಬಿಗ್​​ ಅಪ್​ಡೇಟ್

For Your Consideration ಮೂಲಕ ‘ಆರ್​ಆರ್​ಆರ್​’ ಸಿನಿಮಾ ಆಸ್ಕರ್​ ರೇಸ್​ಗೆ ಎಂಟ್ರಿ ಪಡೆಯಲು ಪ್ರಯತ್ನಿಸಿತ್ತು. ಈಗ ‘ಕಾಂತಾರ’ ಸಿನಿಮಾ ಕೂಡ ಇದೇ ರೀತಿಯ ಪ್ರಯತ್ನ ಮಾಡಿದೆ.

ಆಸ್ಕರ್ ರೇಸ್​ಗೆ ‘ಕಾಂತಾರ’, ಸಿನಿಮಾಗೆ ಪ್ರೀಕ್ವೆಲ್​; ವಿಜಯ್ ಕಿರಗಂದೂರು ಕೊಟ್ರು ಬಿಗ್​​ ಅಪ್​ಡೇಟ್
ವಿಜಯ್ ಕಿರಗಂದೂರು
TV9 Web
| Edited By: |

Updated on:Dec 22, 2022 | 9:11 AM

Share

ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ಬಗ್ಗೆ ದಿನಕ್ಕೊಂದು ಹೊಸ ವಿಚಾರ ಹುಟ್ಟಿಕೊಳ್ಳುತ್ತಿದೆ. ಈ ಸಿನಿಮಾ ದಿನಕ್ಕೊಂದು ದಾಖಲೆ ಮಾಡುತ್ತಲೇ ಇದೆ. ಈ ಚಿತ್ರ ನೋಡಿದ ಅನೇಕರು ಮಂತ್ರಮುಗ್ಧರಾಗಿದ್ದಾರೆ. ಒಟಿಟಿಗೆ ಕಾಲಿಟ್ಟ ಈ ಚಿತ್ರವನ್ನು ಪ್ರೇಕ್ಷಕರು ಹಲವು ಬಾರಿ ವೀಕ್ಷಣೆ ಮಾಡಿದ್ದಾರೆ. ಈಗ ರಿಷಬ್ ಶೆಟ್ಟಿ ಅವರ ‘ಕಾಂತಾರ’ (Kantara Movie) ಆಸ್ಕರ್​ ರೇಸ್​ಗೆ ಇಳಿಯಲು ಪ್ರಯತ್ನ ಮಾಡಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್​​ನ ವಿಜಯ್ ಕಿರಗಂದೂರು ಅವರು ಮಾಹಿತಿ ನೀಡಿದ್ದಾರೆ. ‘ಆರ್​ಆರ್​ಆರ್​’ ಮಾದರಿಯಲ್ಲೇ ‘ಕಾಂತಾರ’ ಕೂಡ ಆಸ್ಕರ್​ ರೇಸ್​ಗೆ ತೆರಳಲು ಪ್ರಯತ್ನಿಸಿದೆ. ಕನ್ನಡದ ಸಿನಿಮಾವೊಂದು ಆಸ್ಕರ್​ ರೇಸ್​ಗೆ ಇಳಿಯುತ್ತಿರುವುದು ಇದೇ ಮೊದಲು ಅನ್ನೋದು ವಿಶೇಷ.

ಫಿಲ್ಮ್​ ಫೆಡರೇಷನ್​ ಆಫ್​ ಇಂಡಿಯಾ’ ಕಡೆಯಿಂದ ‘ಆರ್​ಆರ್​ಆರ್​’ ಸಿನಿಮಾ ಆಸ್ಕರ್​ ಸ್ಪರ್ಧೆಗೆ ಅರ್ಹತೆ ಪಡೆದಿರಲಿಲ್ಲ. ಈ ಕಾರಣಕ್ಕೆ For Your Consideration ಮೂಲಕ ‘ಆರ್​ಆರ್​ಆರ್​’ ಸಿನಿಮಾ ಆಸ್ಕರ್​ ರೇಸ್​ಗೆ ಎಂಟ್ರಿ ಪಡೆಯಲು ಪ್ರಯತ್ನಿಸಿತ್ತು. ಈಗ ‘ಕಾಂತಾರ’ ಸಿನಿಮಾ ಕೂಡ ಇದೇ ರೀತಿಯ ಪ್ರಯತ್ನ ಮಾಡಿದೆ. ಇಂಡಿಯಾ ಟುಡೆಗೆ ನೀಡಿದ ಸಂದರ್ಶನದಲ್ಲಿ ವಿಜಯ್ ಅವರು ಈ ಬಗ್ಗೆ ಮಾತನಾಡಿದ್ದಾರೆ.

‘ಆಸ್ಕರ್​ ರೇಸ್​​ನಲ್ಲಿ ಸ್ಪರ್ಧೆ ಮಾಡಲು ನಾವು ಅರ್ಜಿ ಸಲ್ಲಿಕೆ ಮಾಡಿದ್ದೇವೆ. ಅಂತಿಮ ನಾಮನಿರ್ದೇಶನ ಪಟ್ಟಿ ಇನ್ನಷ್ಟೇ ಬರಬೇಕಿದೆ’ ಎಂದು ಅವರು ಹೇಳಿದ್ದಾರೆ. ಈ ಮೂಲಕ ಕುತೂಹಲ ಹೆಚ್ಚಿಸಿದ್ದಾರೆ. ‘ಕಾಂತಾರ’ ಚಿತ್ರಕ್ಕೆ ಸೀಕ್ವೆಲ್ ಬರಲಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಈ ಬಗ್ಗೆಯೂ ವಿಜಯ್ ಅವರು ಮಾತನಾಡಿದ್ದಾರೆ. ‘ರಿಷಬ್ ಶೆಟ್ಟಿ ಅವರು ಬೇರೆ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ಮರಳಿದ ನಂತರದಲ್ಲಿ ಈ ಸಿನಿಮಾಗೆ ಸೀಕ್ವೆಲ್ ಮಾಡಬೇಕೋ ಅಥವಾ ಪ್ರೀಕ್ವೆಲ್ ಮಾಡಬೇಕೋ ಎಂಬ ಬಗ್ಗೆ ಚರ್ಚೆ ಮಾಡುತ್ತೇವೆ. ‘ಕಾಂತಾರ 2’ ಮಾಡಲು ನಾವು ಪ್ಲ್ಯಾನ್ ಮಾಡಿಕೊಂಡಿರುವುದು ನಿಜ ಆದರೆ, ಅದಕ್ಕೆ ಟೈಮ್​​ಲೈನ್​’ ಎಂದಿದ್ದಾರೆ ವಿಜಯ್.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ಇದನ್ನೂ ಓದಿ: Lionel Messi: ‘ಕಾಂತಾರ’ ರೀತಿ ಕಾಣಿಸಿದ ಮೆಸ್ಸಿ-ಮರಡೋನಾ; ವಿಶ್ವ ಮಟ್ಟದಲ್ಲಿ ಕನ್ನಡ ಸಿನಿಮಾ ಕ್ರೇಜ್​

‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ರಿಷಬ್ ಈ ಚಿತ್ರಕ್ಕಾಗಿ ನಾಲ್ಕು ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ಹಲವು ಆಫರ್​ಗಳು ಅವರನ್ನು ಅರಸಿ ಬರುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:12 am, Thu, 22 December 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ