ಪರಭಾಷೆಯಲ್ಲಿ 100 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಹಿಂದಿಯಲ್ಲಿ ನಿಂತಿಲ್ಲ ಅಬ್ಬರ

‘ಕಾಂತಾರ’ ಸಿನಿಮಾ ಸೆಪ್ಟೆಂಬರ್ 30ರಂದು ಕನ್ನಡದಲ್ಲಿ ರಿಲೀಸ್ ಆಯಿತು. ಇದಾದ ಕೆಲ ವಾರಗಳ ಬಳಿಕ ಹಿಂದಿಯಲ್ಲಿ, ತೆಲುಗಿನಲ್ಲಿ ಹಾಗೂ ತಮಿಳಿನಲ್ಲಿ ಸಿನಿಮಾ ಬಿಡುಗಡೆ ಆಯಿತು. ಈ ಚಿತ್ರ ನೋಡಿದ ಪರಭಾಷಿಗರು ಭೇಷ್ ಎಂದರು.

ಪರಭಾಷೆಯಲ್ಲಿ 100 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಹಿಂದಿಯಲ್ಲಿ ನಿಂತಿಲ್ಲ ಅಬ್ಬರ
ಕಾಂತಾರ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 28, 2022 | 7:40 PM

‘ಕಾಂತಾರ’ ಸಿನಿಮಾ (Kantara Movie) ನಿತ್ಯ ಹೊಸ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಕಡಿಮೆ ಬಜೆಟ್​ನಲ್ಲಿ ಸಿದ್ಧವಾದ ಈ ಚಿತ್ರ ನೂರಾರು ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಚಿತ್ರದಿಂದ ಹೊಂಬಾಳೆ ಫಿಲ್ಮ್ಸ್​ಗೆ ಒಳ್ಳೆಯ ಲಾಭ ಆಗಿದೆ. ಈ ಚಿತ್ರದಿಂದ ರಿಷಬ್ ಶೆಟ್ಟಿ (Rishab Shetty) ಅವರು ವಿಶ್ವ ಮಟ್ಟದಲ್ಲಿ ಖ್ಯಾತಿ ಪಡೆದರು. ‘ಕಾಂತಾರ’ ರಿಲೀಸ್ ಆಗಿ ಒಂದು ತಿಂಗಳಾಗಿದೆ. ಆದಾಗ್ಯೂ ಈ ಚಿತ್ರದ ಅಬ್ಬರ ಕಡಿಮೆ ಆಗುತ್ತಿಲ್ಲ. ಸಿನಿಮಾ ನೋಡಿದ ಬಹುತೇಕರು ಮೆಚ್ಚುಗೆಯ ಮಾತನ್ನು ಆಡಿದ್ದಾರೆ. ಡಬ್ ಆಗಿ ತೆರೆಕಂಡ ಮೂರು ಭಾಷೆಗಳಲ್ಲಿ ‘ಕಾಂತಾರ’ 100 ಕೋಟಿ ರೂಪಾಯಿ ಬಾಚಿದೆ. ಈ ಮೂಲಕ ಚಿತ್ರ ಒಳ್ಳೆಯ ಕಮಾಯಿ ಮಾಡುತ್ತಿದೆ.

‘ಕಾಂತಾರ’ ಸಿನಿಮಾ ಸೆಪ್ಟೆಂಬರ್ 30ರಂದು ಕನ್ನಡದಲ್ಲಿ ರಿಲೀಸ್ ಆಯಿತು. ಇದಾದ ಕೆಲ ವಾರಗಳ ಬಳಿಕ ಹಿಂದಿಯಲ್ಲಿ, ತೆಲುಗಿನಲ್ಲಿ ಹಾಗೂ ತಮಿಳಿನಲ್ಲಿ ಸಿನಿಮಾ ಬಿಡುಗಡೆ ಆಯಿತು. ಈ ಚಿತ್ರ ನೋಡಿದ ಪರಭಾಷಿಗರು ಭೇಷ್ ಎಂದರು. ಮೂಲಗಳ ಪ್ರಕಾರ ತೆಲುಗು, ತಮಿಳು ಹಾಗೂ ಹಿಂದಿ ಸೇರಿ ಈ ಚಿತ್ರ 100 ಕೋಟಿ ರೂಪಾಯಿ ಬಾಚಿಕೊಂಡಿದೆ.

ಹಿಂದಿಯಲ್ಲಿ ಈ ಚಿತ್ರ ಅಬ್ಬರಿಸುತ್ತಿದೆ. ಈ ಬಗ್ಗೆ ಪಕ್ಕಾ ಲೆಕ್ಕ ಸಿಕ್ಕಿದೆ. ಗುರುವಾರ (ಅಕ್ಟೋಬರ್ 27) ಈ ಚಿತ್ರ ಬಾಲಿವುಡ್​ನಲ್ಲಿ 2.60 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾದ ಹಿಂದಿ ಭಾಗದ ಕಲೆಕ್ಷನ್ 31.70 ಕೋಟಿ ರೂಪಾಯಿ ಆಗಿದೆ. ಇದು ಚಿತ್ರತಂಡದ ಖುಷಿಯನ್ನು ಹೆಚ್ಚಿಸಿದೆ. ಕನ್ನಡದ ಚಿತ್ರ ಬಾಲಿವುಡ್​ನಲ್ಲಿ ಇಷ್ಟು ಒಳ್ಳೆಯ ಗಳಿಕೆ ಮಾಡುತ್ತಿರುವುದು ಕರ್ನಾಟಕದವರ ಪಾಲಿಗೆ ಹೆಮ್ಮೆಯ ವಿಚಾರ.

ಇದನ್ನೂ ಓದಿ: ಬಾಲಿವುಡ್​ಗೆ ಖುಷಿ ತಂದ ದೀಪಾವಳಿ; ‘ಕಾಂತಾರ’ ಎದುರು ‘ರಾಮ್ ಸೇತು’, ‘ಥ್ಯಾಂಕ್​ ಗಾಡ್’ ಕಲೆಕ್ಷನ್ ಎಷ್ಟು?

ಈ ಮೊದಲು ಹಿಂದಿಗೆ ಡಬ್ ಆಗಿ ತೆರೆಕಂಡಿದ್ದ ‘ಕೆಜಿಎಫ್’ ಚಿತ್ರ 44 ಕೋಟಿ ರೂಪಾಯಿ ಬಾಚಿಕೊಂಡಿತ್ತು. ‘ಕಾಂತಾರ’ ಚಿತ್ರ ನುಗ್ಗುತ್ತಿರುವ ವೇಗ ನೋಡಿದರೆ ಈ ಸಿನಿಮಾ ಬಾಲಿವುಡ್​ನಲ್ಲಿ ‘ಕೆಜಿಎಫ್’ ದಾಖಲೆಯನ್ನು ಮುರಿಯುವ ಎಲ್ಲಾ ಸಾಧ್ಯತೆ ಗೋಚರವಾಗುತ್ತಿದೆ. ‘ಕಾಂತಾರ’ ಚಿತ್ರಮಂದಿರದಲ್ಲಿ ಅಬ್ಬರಿಸುತ್ತಿರುವ ಮಧ್ಯೆ ಈ ಚಿತ್ರ ಒಟಿಟಿಗೆ ಯಾವಾಗ ತೆರೆಗೆ ಬರಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ
ಬಸನಗೌಡ ಯತ್ನಾಳ್ ಸ್ವಪ್ರತಿಷ್ಠೆಗಾಗಿ ಹೋರಾಟ ಮಾಡುತ್ತಿದ್ದಾರೆ: ಯಡಿಯೂರಪ್ಪ
ಬಸನಗೌಡ ಯತ್ನಾಳ್ ಸ್ವಪ್ರತಿಷ್ಠೆಗಾಗಿ ಹೋರಾಟ ಮಾಡುತ್ತಿದ್ದಾರೆ: ಯಡಿಯೂರಪ್ಪ
ಭಾರತದ ಅತಿದೊಡ್ಡ ಸಕ್ಕರೆ ಕಾರ್ಖಾನೆ ಚಿಂಚೋಳಿಯಲ್ಲಿ ಸ್ಥಾಪಿಸಿರುವೆ: ಯತ್ನಾಳ್
ಭಾರತದ ಅತಿದೊಡ್ಡ ಸಕ್ಕರೆ ಕಾರ್ಖಾನೆ ಚಿಂಚೋಳಿಯಲ್ಲಿ ಸ್ಥಾಪಿಸಿರುವೆ: ಯತ್ನಾಳ್