ವಿಶ್ವ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ರೂ. ಕ್ಲಬ್ ಸೇರಿದ ‘ಕಾಂತಾರ’ ಚಿತ್ರ; ರಿಷಬ್ ಶೆಟ್ಟಿ ಓಟಕ್ಕಿಲ್ಲ ಬ್ರೇಕ್

‘ಕಾಂತಾರ’ ಸಿನಿಮಾ ಕನ್ನಡದಲ್ಲಿ ರಿಲೀಸ್ ಆಗಿದ್ದು ಸೆಪ್ಟೆಂಬರ್ 30ರಂದು. ಈಗಲೂ ಅನೇಕ ಕಡೆಗಳಲ್ಲಿ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ಹಿಂದಿಯಲ್ಲಂತೂ ಸಿನಿಮಾದ ಕಲೆಕ್ಷನ್ ತಗ್ಗುವ ಮಾತೇ ಇಲ್ಲ.

ವಿಶ್ವ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ರೂ. ಕ್ಲಬ್ ಸೇರಿದ ‘ಕಾಂತಾರ’ ಚಿತ್ರ; ರಿಷಬ್ ಶೆಟ್ಟಿ ಓಟಕ್ಕಿಲ್ಲ ಬ್ರೇಕ್
ಕಾಂತಾರ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 03, 2022 | 11:25 AM

ನಟನಾಗಿ ನಿರ್ದೇಶಕನಾಗಿ ‘ಕಾಂತಾರ’  ಚಿತ್ರದ (Kantara Movie) ಮೂಲಕ ರಿಷಬ್ ಶೆಟ್ಟಿ ಅವರು ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಸಿನಿಮಾದಿಂದ ರಿಷಬ್ ಶೆಟ್ಟಿ (Rishab Shetty) ಅವರು ಗೆದ್ದು ಬೀಗಿದ್ದಾರೆ. ಸಿನಿಮಾ ತೆರೆಗೆ ಬಂದು ಹಲವು ವಾರಗಳು ಕಳೆದರೂ ಚಿತ್ರದ ಓಟ ನಿಲ್ಲುತ್ತಿಲ್ಲ. ಬಾಲಿವುಡ್​ನಲ್ಲಿ ದೊಡ್ಡ ದೊಡ್ಡ ಸಿನಿಮಾಗಳು ರಿಲೀಸ್ ಆದ ಹೊರತಾಗಿಯೂ ಈ ಚಿತ್ರಕ್ಕೆ ಯಾವುದೇ ಸಮಸ್ಯೆ ಉಂಟಾಗಿಲ್ಲ. ಈಗ ಈ ಚಿತ್ರ ವಿಶ್ವ ಮಟ್ಟದಲ್ಲಿ 300 ಕೋಟಿ ರೂಪಾಯಿ ಕ್ಲಬ್ ಸೇರಿದೆ ಎಂದು ವರದಿ ಆಗಿದೆ. ಇದು ಚಿತ್ರತಂಡದ ಖುಷಿಯನ್ನು ಹೆಚ್ಚಿಸಿದೆ.

‘ಕಾಂತಾರ’ ಸಿನಿಮಾ ಕನ್ನಡದಲ್ಲಿ ರಿಲೀಸ್ ಆಗಿದ್ದು ಸೆಪ್ಟೆಂಬರ್ 30ರಂದು. ಈಗಲೂ ಅನೇಕ ಕಡೆಗಳಲ್ಲಿ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ಹಿಂದಿಯಲ್ಲಂತೂ ಸಿನಿಮಾದ ಕಲೆಕ್ಷನ್ ತಗ್ಗುವ ಮಾತೇ ಇಲ್ಲ. ಹಿಂದಿಯಲ್ಲಿ ಈ ಚಿತ್ರ ವೀಕೆಂಡ್ ಸಂದರ್ಭದಲ್ಲಿ ನಾಲ್ಕು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದರೆ ವಾರದ ದಿನಗಳಲ್ಲಿ 2 ಕೋಟಿ ರೂಪಾಯಿ ಆಸುಪಾಸಲ್ಲಿ ಕಲೆಕ್ಷನ್ ಮಾಡುತ್ತಿದೆ. ತೆಲುಗು, ತಮಿಳು ಹಾಗೂ ಮಲಯಾಳಂನಲ್ಲೂ ಸಿನಿಮಾ ಉತ್ತಮ ಕಮಾಯಿ ಮಾಡುತ್ತಿದೆ. ಇದರಿಂದ ಸಹಜವಾಗಿಯೇ ಚಿತ್ರದ ಕಲೆಕ್ಷನ್ ಹೆಚ್ಚಿದೆ.

ಹಿಂದಿಯಲ್ಲಿ ಈ ಸಿನಿಮಾದ ಗಳಿಕೆ 50 ಕೋಟಿ ರೂಪಾಯಿ ಸಮೀಪಿಸಿದೆ. ಕನ್ನಡದಲ್ಲೂ ಈ ಚಿತ್ರ ನೂರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ತೆಲುಗು ಮಂದಿ ಚಿತ್ರವನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ. ಈ ಎಲ್ಲಾ ಕಾರಣದಿಂದ ಚಿತ್ರದ ಗಳಿಕೆ 300 ಕೋಟಿ ರೂಪಾಯಿ ದಾಟಿದೆ. ಇನ್ನೂ ಕೆಲವು ವಾರ ಚಿತ್ರದ ಅಬ್ಬರ ಹೀಗೆಯೇ ಇರಲಿದೆ ಎಂಬುದು ಬಾಕ್ಸ್ ಆಫೀಸ್ ಪಂಡಿತರ ಅಭಿಪ್ರಾಯ.

ಇದನ್ನೂ ಓದಿ: ಕೋಯಿಕ್ಕೋಡ್ ಆಯ್ತು ಈಗ ಪಾಲಕ್ಕಾಡ್ ಕೋರ್ಟ್ ಸರದಿ; ‘ಕಾಂತಾರ’ ತಂಡಕ್ಕೆ ಸಂಕಷ್ಟ ತಂದ ಕೇರಳ ನ್ಯಾಯಾಲಯದ ಆದೇಶ

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಚಿತ್ರದಿಂದ ದೊಡ್ಡ ಮಟ್ಟದ ಗೆಲುವು ಕಂಡಿದ್ದಾರೆ. ಈ ಚಿತ್ರದಿಂದ ಅವರಿಗೆ ಸಾಲು ಸಾಲು ಆಫರ್​ಗಳು ಬರುತ್ತಿವೆ. ಅಲ್ಲು ಅರವಿಂದ್ ಜತೆ ಅವರು ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚೆಗೆ ಅಲ್ಲು ಅರವಿಂದ್ ಅವರು ಘೋಷಣೆ ಮಾಡಿದ್ದರು. ‘ಕೆಜಿಎಫ್’ ಚಿತ್ರ ನಿರ್ಮಾಣ ಮಾಡಿದ್ದ ‘ಹೊಂಬಾಳೆ ಫಿಲ್ಮ್ಸ್​’ ‘ಕಾಂತಾರ’ ಚಿತ್ರವನ್ನು ನಿರ್ಮಾಣ ಮಾಡಿದೆ. ಈ ಕಾರಣಕ್ಕೆ ಪರಭಾಷೆಯಲ್ಲಿ ಸಿನಿಮಾಗೆ ದೊಡ್ಡ ಮಟ್ಟದ ಹೈಪ್ ಸಿಕ್ಕಿದೆ.

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ