AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಬಂಗಾರದ ಬೆಳೆ ತೆಗೆದ ‘ಕಾಂತಾರ’; ಇಲ್ಲಿದೆ ಸಂಪೂರ್ಣ ಲೆಕ್ಕಾಚಾರ

‘ಕಾಂತಾರ’ ಸಿನಿಮಾ ಕರ್ನಾಟಕದಲ್ಲಿ ಎಷ್ಟು ಗಳಿಕೆ ಮಾಡಿದೆ ಎನ್ನುವ ಬಗ್ಗೆ ಈವರೆಗೆ ಅಧಿಕೃತವಾಗಿ ಲೆಕ್ಕಾಚಾರ ಸಿಕ್ಕಿಲ್ಲ. ಆದರೆ, 1 ಕೋಟಿ ಟಿಕೆಟ್​​ಗಳು ಮಾರಾಟ ಆಗಿವೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಪ್ರತಿ ಟಿಕೆಟ್​ಗೆ ಸರಾಸರಿ 130-150 ರೂಪಾಯಿ ಹಿಡಿದರೂ ಈ ಚಿತ್ರದ ಒಟ್ಟೂ ಗಳಿಕೆ 150 ಕೋಟಿ ರೂಪಾಯಿ ಆಸುಪಾಸಿನಲ್ಲಿರಲಿದೆ.

ಕರ್ನಾಟಕದಲ್ಲಿ ಬಂಗಾರದ ಬೆಳೆ ತೆಗೆದ ‘ಕಾಂತಾರ’; ಇಲ್ಲಿದೆ ಸಂಪೂರ್ಣ ಲೆಕ್ಕಾಚಾರ
ರಿಷಬ್
TV9 Web
| Edited By: |

Updated on:Nov 10, 2022 | 2:36 PM

Share

‘ಕಾಂತಾರ’ ಸಿನಿಮಾ (Kantara Movie) ಕನ್ನಡದಲ್ಲಿ ರಿಲೀಸ್ ಆಗಿ 40 ದಿನಗಳ ಮೇಲಾಗಿದೆ. ಆದಾಗ್ಯೂ ಸಿನಿಮಾದ ಅಬ್ಬರ ಕಡಿಮೆ ಆಗಿಲ್ಲ. ಈಗಲೂ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸಿರುವ ಈ ಚಿತ್ರ ಮಾಡಿದ ದಾಖಲೆಗಳಿಗೆ ಲೆಕ್ಕವೇ ಇಲ್ಲ. ಈಗ ಬಾಲಿವುಡ್​ನಲ್ಲೂ ಈ ಚಿತ್ರ ಅಬ್ಬರಿಸುತ್ತಿದೆ. ಹಿಂದಿಯಲ್ಲಿ ಈ ಚಿತ್ರದ ಗಳಿಕೆ 70 ಕೋಟಿ ರೂಪಾಯಿ ಸಮೀಪಿಸಿದೆ. ಹಾಗಾದರೆ, ‘ಕಾಂತಾರ’ ಸಿನಿಮಾ ಕರ್ನಾಟಕದಲ್ಲಿ ಗಳಿಕೆ ಮಾಡಿದ್ದು ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ.

‘ಕಾಂತಾರ’ ಸಿನಿಮಾ ಕರ್ನಾಟಕದಲ್ಲಿ ಎಷ್ಟು ಗಳಿಕೆ ಮಾಡಿದೆ ಎನ್ನುವ ಬಗ್ಗೆ ಈವರೆಗೆ ಅಧಿಕೃತವಾಗಿ ಲೆಕ್ಕಾಚಾರ ಸಿಕ್ಕಿಲ್ಲ. ಆದರೆ, 1 ಕೋಟಿ ಟಿಕೆಟ್​​ಗಳು ಮಾರಾಟ ಆಗಿವೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಪ್ರತಿ ಟಿಕೆಟ್​ಗೆ ಸರಾಸರಿ 130-150 ರೂಪಾಯಿ ಹಿಡಿದರೂ ಈ ಚಿತ್ರದ ಒಟ್ಟೂ ಗಳಿಕೆ 150 ಕೋಟಿ ರೂಪಾಯಿ ಆಸುಪಾಸಿನಲ್ಲಿರಲಿದೆ. ಬಾಲಿವುಡ್​​ ಗಳಿಕೆಯನ್ನು ಸೇರಿದೆ ಸಿನಿಮಾದ ಕಲೆಕ್ಷನ್ 200 ಕೋಟಿ ರೂಪಾಯಿ ಮೇಲಾಗಲಿದೆ. ತಮಿಳು , ತೆಲುಗು ಹಾಗೂ ಮಲಯಾಳಂ ಕಲೆಕ್ಷನ್ ಸೇರಿದರೆ ಈ ಚಿತ್ರದ ಬಾಕ್ಸ್ ಆಫೀಸ್ ಕಲೆಕ್ಷನ್ 300 ಕೋಟಿ ರೂ. ದಾಟಿದೆ.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

‘ಹೊಂಬಾಳೆ ಫಿಲ್ಮ್ಸ್​’ ಕಾಂತಾರ ಚಿತ್ರವನ್ನು ನಿರ್ಮಾಣ ಮಾಡಿದೆ. ಕಡಿಮೆ ಬಜೆಟ್​ನಲ್ಲಿ ಸಿದ್ಧವಾದ ಈ ಚಿತ್ರದಿಂದ ತಂಡಕ್ಕೆ ಸಖತ್ ಲಾಭ ಆಗಿದೆ. ವಿಜಯ್ ಕಿರಗಂದೂರು ಅವರು ಈ ಚಿತ್ರದಿಂದ ಬಂಗಾರದ ಬೆಳೆ ತೆಗೆದಿದ್ದಾರೆ. ಅದೇ ರೀತಿ ರಿಷಬ್ ಶೆಟ್ಟಿ ಅವರ ಖ್ಯಾತಿ ದ್ವಿಗುಣಗೊಂಡಿದೆ. ರಿಷಬ್ ಅವರಿಗೆ ಪರಭಾಷೆಗಳಿಂದ ಸಾಕಷ್ಟು ಆಫರ್​ಗಳು ಬರೋಕೆ ಆರಂಭ ಆಗಿದೆ.

ಇದನ್ನೂ ಓದಿ: Manasi Sudhir: ‘ಕಾಂತಾರ’ ಚಿತ್ರದ ಶಿವನ ತಾಯಿ ಕಮಲಾ ಅಲಿಯಾಸ್​ ಮಾನಸಿ ಸುಧೀರ್​ ಬಗ್ಗೆ ಇಲ್ಲಿದೆ ಇಂಟರೆಸ್ಟಿಂಗ್​ ವಿಚಾರ

‘ಕಾಂತಾರ’ ಚಿತ್ರದಲ್ಲಿ ಕಾಡಿನ ಕಥೆ ಇದೆ. ಕಾಡನ್ನು ಹಾಗೂ ಕಾಡಿನ ಪ್ರಾಣಿಗಳನ್ನು ಉಳಿಸಬೇಕು ಎನ್ನುವ ಸಂದೇಶ ಈ ಚಿತ್ರದಿಂದ ಸಿಕ್ಕಿದೆ. ಭೂತ ಕೋಲದ ವಿಚಾರದಿಂದ ಚಿತ್ರದ ಮೆರುಗು ಹೆಚ್ಚಿದೆ. ಈ ಚಿತ್ರ ನವೆಂಬರ್ ಅಂತ್ಯಕ್ಕೆ ಒಟಿಟಿಗೆ ಕಾಲಿಡಲಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಲಭ್ಯವಾಗಬೇಕಿದೆ.

Published On - 2:35 pm, Thu, 10 November 22

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ