ತಾವು ಓದಿದ ಕೆರಾಡಿ ಕನ್ನಡ ಮಾಧ್ಯಮ ಶಾಲೆ ದತ್ತು ಪಡೆದ ನಟ, ನಿರ್ದೇಶಕ ರಿಷಬ್ ಶೆಟ್ಟಿ
ರಿಷಬ್ ಶೆಟ್ಟಿ ಅವರಿಗೆ ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ, ಅಭಿಮಾನ ಇದೆ. ಹಾಗಾಗಿ ಕೆರಾಡಿಯ ಕನ್ನಡ ಮಾಧ್ಯಮ ಶಾಲೆಗೆ ತೆರಳಿ ಒಂದಷ್ಟು ಸಮಯ ಕಳೆದಿದ್ದಾರೆ. ಅಲ್ಲಿನ ಮಕ್ಕಳು ಮತ್ತು ಶಿಕ್ಷಕರ ಜೊತೆ ಅವರು ಮಾತುಕತೆ ಮಾಡಿದ್ದಾರೆ. ಈ ವೇಳೆ ಶಾಲೆಯನ್ನು ದತ್ತು ಪಡೆಯುವ ಬಗ್ಗೆ ತಿಳಿಸಿದ್ದಾರೆ.
ನಟ ರಿಷಬ್ ಶೆಟ್ಟಿ (Rishab Shetty) ಅವರು ಸಿನಿಮಾ ಮಾತ್ರವಲ್ಲದೇ ಒಂದಷ್ಟು ಸಾಮಾಜಿಕ ಕೆಲಸಗಳ ಮೂಲಕವೂ ಗಮನ ಸೆಳೆಯುತ್ತಿದ್ದಾರೆ. ಕನ್ನಡದ ಶಾಲೆಗಳ ಉಳಿವಿಗಾಗಿ ಅವರು ಪ್ರಯತ್ನಿಸುತ್ತಿದ್ದಾರೆ. ಅದರ ಅಂಗವಾಗಿ, ತಾವು ಓದಿದ ಕೆರಾಡಿ ಕನ್ನಡ ಮಾಧ್ಯಮ ಶಾಲೆಯನ್ನು (Kannada Medium School) ಅವರು ದತ್ತು ತೆಗೆದುಕೊಂಡಿದ್ದಾರೆ. ರಿಷಬ್ ಶೆಟ್ಟಿ ಅವರ ಈ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಸದ್ಯ ‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿರುವ ರಿಷಬ್ ಶೆಟ್ಟಿ ಅವರು ತಾವು ಓದಿದ ಶಾಲೆಗೆ ಭೇಟಿ ನೀಡಿದ್ದಾರೆ.
ರಿಷಬ್ ಶೆಟ್ಟಿ ಅವರಿಗೆ ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ, ಅಭಿಮಾನ ಇದೆ. ತಮ್ಮ ಸಿನಿಮಾಗಳಲ್ಲಿ ಕೂಡ ಕರಾವಳಿಯ ವಿಷಯಗಳನ್ನು ಆಯ್ದುಕೊಳ್ಳುತ್ತಾರೆ. ‘ಕಾಂತಾರ: ಚಾಪ್ಟರ್ 1’ ಚಿತ್ರದ ಕೆಲಸಗಳ ಬಿಡುವಿನಲ್ಲಿ ಕೆರಾಡಿಯ ಕನ್ನಡ ಮಾಧ್ಯಮ ಶಾಲೆಗೆ ತೆರಳಿ ಒಂದಷ್ಟು ಸಮಯ ಕಳೆದಿದ್ದಾರೆ. ಅಲ್ಲಿನ ಮಕ್ಕಳು ಮತ್ತು ಶಿಕ್ಷಕರ ಜೊತೆ ಅವರು ಮಾತುಕತೆ ಮಾಡಿದ್ದಾರೆ.
ಇದನ್ನೂ ಓದಿ: ‘ಕಾಂತಾರ ಪ್ರೀಕ್ವೆಲ್ನಲ್ಲಿ ನಟಿಸಲು ಅವಕಾಶ ಕೊಡಿ’; ರಿಷಬ್ ಶೆಟ್ಟಿ ಬಳಿ ಚಾನ್ಸ್ ಕೇಳಿದ ಖ್ಯಾತ ನಟಿ
ಸಾಮಾಜಿಕ ಕೆಲಸಗಳಿಗಾಗಿ ರಿಷಬ್ ಶೆಟ್ಟಿ ಅವರು ತಮ್ಮದೇ ಫೌಂಡೇಶನ್ ಆರಂಭಿಸಿದ್ದಾರೆ. ‘ರಿಷಬ್ ಶೆಟ್ಟಿ ಫೌಂಡೇಶನ್’ ಮೂಲಕ ಅನೇಕ ಕಾರ್ಯಗಳು ಆಗುತ್ತಿವೆ. ಕನ್ನಡ ಶಾಲೆಯನ್ನು ಉಳಿಸುವ ಮತ್ತು ಬೆಳೆಸುವ ಕಾರ್ಯದಲ್ಲಿ ಅವರು ನಿರತರಾಗಿದ್ದಾರು. ಕೆರಾಡಿಯ ಕನ್ನಡ ಮಾಧ್ಯಮ ಶಾಲೆಯನ್ನು ದತ್ತು ಪಡೆದಿದ್ದಕ್ಕಾಗಿ ರಿಷಬ್ ಶೆಟ್ಟಿ ಅವರಿಗೆ ಊರಿನ ಹಿರಿಯರು ಮತ್ತು ಪ್ರಮುಖರು ಅಭಿನಂದನೆ ತಿಳಿಸಿದ್ದಾರೆ.
ಇದನ್ನೂ ಓದಿ: ರಿಷಬ್ ಶೆಟ್ಟಿ-ಪ್ರಗತಿ ಶೆಟ್ಟಿ ಫ್ಯಾಮಿಲಿಯ ಚಂದದ ಫೋಟೋಗಳು ಇಲ್ಲಿವೆ..
ನಟನಾಗಿ, ನಿರ್ದೇಶಕನಾಗಿ ಮತ್ತು ನಿರ್ಮಾಪಕನಾಗಿ ರಿಷಬ್ ಶೆಟ್ಟಿ ಅವರು ಕನ್ನಡ ಚಿತ್ರರಂಗದಲ್ಲಿ ನೆಲೆ ಕಂಡುಕೊಂಡಿದ್ದಾರೆ. ‘ಕಿರಿಕ್ ಪಾರ್ಟಿ’, ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’, ‘ಕಾಂತಾರ’ ರೀತಿಯ ಸಿನಿಮಾಗಳ ಮೂಲಕ ಅವರು ತಮ್ಮ ಛಾಪು ಮೂಡಿಸಿದ್ದಾರೆ. ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಸಿನಿಮಾದಲ್ಲಿ ಕನ್ನಡ ಶಾಲೆಯ ಉಳಿವಿನ ಬಗ್ಗೆ ಸಂದೇಶ ನೀಡಿದ್ದರು. ರಿಯಲ್ ಲೈಫ್ನಲ್ಲಿಯೂ ಅದೇ ಕಾರ್ಯವನ್ನು ಮಾಡುವ ಮೂಲಕ ರಿಷಬ್ ಶೆಟ್ಟಿ ಅವರು ಅನೇಕರಿಗೆ ಮಾದರಿ ಆಗಿದ್ದಾರೆ. ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಅವರ ನಿರ್ದೇಶನದಲ್ಲಿ ಮೂಡಿಬರಲಿರುವ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಬಗ್ಗೆ ಭಾರಿ ನಿರೀಕ್ಷೆ ಇದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.