AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ‘ಮೋದಿ ಹಲವು ಬಾರಿ ಕಾಂತಾರ ಬಗ್ಗೆ ಮಾತಾಡಿದ್ದು ಕೇಳಿ ಖುಷಿ ಆಯ್ತು’: ಪ್ರಧಾನಿ ಭೇಟಿ ಬಗ್ಗೆ ರಿಷಬ್​ ಪ್ರತಿಕ್ರಿಯೆ

Rishab Shetty | PM Narendra Modi: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ರಿಷಬ್​ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ‘ನಮ್ಮ ಕಾಂತಾರ ಚಿತ್ರದ ಬಗ್ಗೆ ಅವರು ಸಾಕಷ್ಟು ತಿಳಿದಿದ್ದಾರೆ’ ಎಂದು ರಿಷಬ್​ ಹೇಳಿದ್ದಾರೆ.

Rishab Shetty: ‘ಮೋದಿ ಹಲವು ಬಾರಿ ಕಾಂತಾರ ಬಗ್ಗೆ ಮಾತಾಡಿದ್ದು ಕೇಳಿ ಖುಷಿ ಆಯ್ತು’: ಪ್ರಧಾನಿ ಭೇಟಿ ಬಗ್ಗೆ ರಿಷಬ್​ ಪ್ರತಿಕ್ರಿಯೆ
ರಿಷಬ್ ಶೆಟ್ಟಿ, ನರೇಂದ್ರ ಮೋದಿ
ಮದನ್​ ಕುಮಾರ್​
|

Updated on:Feb 13, 2023 | 4:33 PM

Share

ನಟ ರಿಷಬ್​ ಶೆಟ್ಟಿ (Rishab Shetty) ಅವರಿಗೆ ‘ಕಾಂತಾರ’ ಸಿನಿಮಾದಿಂದ ಸಿಕ್ಕ ಖ್ಯಾತಿ ಅಷ್ಟಿಷ್ಟಲ್ಲ. ಸಾಮಾನ್ಯ ಪ್ರೇಕ್ಷಕರು ಮಾತ್ರವಲ್ಲದೇ ಅನೇಕ ಗಣ್ಯರು ಈ ಚಿತ್ರದ ಬಗ್ಗೆ ಮಾತಾಡಿದ್ದಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡ ‘ಕಾಂತಾರ’ (Kantara Movie) ಸಿನಿಮಾವನ್ನು ಕೊಂಡಾಡಿದ್ದಾರೆ. ಭಾನುವಾರ (ಫೆಬ್ರವರಿ 12) ಸಂಜೆ ರಾಜಭವನದಲ್ಲಿ ಮೋದಿ (Narendra Modi) ಅವರನ್ನು ಭೇಟಿ ಆಗುವ ಅವಕಾಶ ರಿಷಬ್​ ಶೆಟ್ಟಿಗೆ ಸಿಕ್ಕಿತು. ಈ ವೇಳೆ ಏನೆಲ್ಲ ಮಾತುಕತೆ ನಡೆಯಿತು ಎಂಬುದನ್ನು ಅವರು ವಿವರಿಸಿದ್ದಾರೆ. ‘ಕಾಂತಾರ’ ಸಿನಿಮಾ ಬಗ್ಗೆ ಪ್ರಧಾನಿ ಮಾತನಾಡಿದ್ದು ರಿಷಬ್​ಗೆ ಹೆಚ್ಚು ಖುಷಿ ನೀಡಿದೆ. ಇದು ಅವರ ಪಾಲಿನ ಹೆಮ್ಮೆಯ ಕ್ಷಣ. ಇದಕ್ಕಾಗಿ ರಿಷಬ್​ ಶೆಟ್ಟಿಗೆ ಅಭಿಮಾನಿಗಳು, ಆಪ್ತರು ಮತ್ತು ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

‘ಕನಸು ನನಸಾದ ಕ್ಷಣ ಇದು. ಪ್ರಧಾನ ಮಂತ್ರಿ ಅವರನ್ನು ನಾನು ಮಹಾನ್​ ನಾಯಕರೆಂದು ತಿಳಿದಿದ್ದೇನೆ. ಅವರನ್ನು ಭೇಟಿ ಮಾಡಿದ್ದಕ್ಕೆ ತುಂಬ ಖುಷಿ ಆಯಿತು. ಕನ್ನಡ ಚಿತ್ರರಂಗ ಮತ್ತು ಭಾರತೀಯ ಚಿತ್ರರಂಗದಲ್ಲಿ ಏನೆಲ್ಲ ನಡೆಯುತ್ತಿದೆ? ನಮಗೆ ಇಲ್ಲಿ ಇನ್ನೂ ಏನೆಲ್ಲ ಬೇಕು ಎಂಬ ಬಗ್ಗೆ ಅವರು ಕೇಳಿದರು. ಮುಂದಿನ ದಿನಗಳಲ್ಲಿ ಅವರು ಏನೆಲ್ಲ ಮಾಡಬಹುದು ಎಂಬುದನ್ನೂ ಹೇಳಿದರು’ ಎಂದಿದ್ದಾರೆ ರಿಷಬ್​ ಶೆಟ್ಟಿ.

ಇದನ್ನೂ ಓದಿ: ಮೋದಿ ಭೇಟಿ ಮಾಡಿದ ಖುಷಿಯಲ್ಲಿ ಶ್ರದ್ಧಾ; ಮೊದಲ ಭೇಟಿಯಲ್ಲೇ ‘ಅಯ್ಯೋ’ ಎಂದ ಪ್ರಧಾನಿ

ಇದನ್ನೂ ಓದಿ
Image
ಮೋದಿ ಭೇಟಿ ಮಾಡಿದ ಖುಷಿಯಲ್ಲಿ ಶ್ರದ್ಧಾ; ಮೊದಲ ಭೇಟಿಯಲ್ಲೇ ‘ಅಯ್ಯೋ’ ಎಂದ ಪ್ರಧಾನಿ
Image
PM Narendra Modi: ಪ್ರಧಾನಿ ಜತೆ ಸ್ಯಾಂಡಲ್​ವುಡ್ ಮಂದಿ; ಇಲ್ಲಿದೆ ಫೋಟೋ ಗ್ಯಾಲರಿ
Image
ಪಿಎಂ ಮೋದಿ ಭೇಟಿ ವೇಳೆ ವಿಶೇಷ ಮನವಿ ಇಟ್ಟ ರಾಕಿಂಗ್ ಸ್ಟಾರ್ ಯಶ್​; ಏನದು?
Image
ಪ್ರಧಾನಿ ಮೋದಿ ಔತಣಕೂಟದಲ್ಲಿ ಯಶ್, ರಿಷಬ್ ಶೆಟ್ಟಿ ಭಾಗಿ; ಫೋಟೋ ವೈರಲ್

‘ನಮ್ಮ ಕಾಂತಾರ ಚಿತ್ರದ ಬಗ್ಗೆ ತುಂಬ ಮಾತನಾಡಿದರು. ಈ ಚಿತ್ರದ ಬಗ್ಗೆ ಅವರು ಸಾಕಷ್ಟು ತಿಳಿದಿದ್ದಾರೆ. ನಮ್ಮ ನಾಡಿನ ಕಥೆ, ನಮ್ಮ ಜನಪದ, ನಮ್ಮ ನಂಬಿಕೆ, ಸಂಪ್ರದಾಯವನ್ನು ಇಟ್ಟುಕೊಂಡು ಮಾಡಿದ ಕಾಂತಾರ ಸಿನಿಮಾ ಜಾಗತಿಕ ಮಟ್ಟಕ್ಕೆ ಹೋಗಿದ್ದಕ್ಕೆ ಅಭಿನಂದನೆ ತಿಳಿಸಿದರು. ಅವರ ಬಾಯಲ್ಲಿ ಹಲವು ಬಾರಿ ಕಾಂತಾರ ಸಿನಿಮಾ ಬಗ್ಗೆ ಕೇಳಿ ಖುಷಿ ಆಯಿತು’ ಎಂದು ರಿಷಬ್​ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: ಪಿಎಂ ಮೋದಿ ಭೇಟಿ ವೇಳೆ ವಿಶೇಷ ಮನವಿ ಇಟ್ಟ ರಾಕಿಂಗ್ ಸ್ಟಾರ್ ಯಶ್​; ಏನದು?

ಇದೇ ರೀತಿ, ಯಶ್​, ವಿಜಯ್​ ಕಿರಗಂದೂರು, ಅಶ್ವಿನಿ ಪುನೀತ್​ ರಾಜ್​ಕುಮಾರ್​, ಅಯ್ಯೋ ಶ್ರದ್ಧಾ, ವೆಂಕಟೇಶ್​ ಪ್ರಸಾದ್​, ಜಾವಗಲ್​ ಶ್ರೀನಾಥ್​ ಅವರು ಕೂಡ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ‘ಎಲ್ಲವನ್ನೂ ಅವರು ತುಂಬ ಶ್ರದ್ಧೆಯಿಂದ ಕೇಳಿದರು. ನಮ್ಮ ಚಿತ್ರರಂಗದ ಬಗ್ಗೆ ಅವರ ಮನಸ್ಸಿನಲ್ಲಿ ಏನಿದೆ ಎಂಬುದು ಕೂಡ ತಿಳಿಸಿದರು. ಸರ್ಕಾರದಿಂದ ಚಿತ್ರರಂಗದವರು ಏನನ್ನು ನಿರೀಕ್ಷಿಸುತ್ತಿದ್ದಾರೆ ಅಂತ ವಿಚಾರಿಸಿದರು. ಚಿತ್ರರಂಗದ ಬಗ್ಗೆ ಸಣ್ಣ ಸಣ್ಣ ವಿಚಾರಗಳನ್ನು ಕೂಡ ಅವರು ತಿಳಿದುಕೊಂಡಿರುವುದು ನನಗೆ ಅಚ್ಚರಿ ಎನಿಸಿತು’ ಎಂದು ಯಶ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:21 pm, Mon, 13 February 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!