‘ಶ್ರೀರಾಮ ಕರೆ ಕಳಿಸಿದ್ದಾನೆ; ನನ್ನ ಪೂರ್ವಜನ್ಮದ ಪುಣ್ಯ’: ಅಯೋಧ್ಯೆಯ ಆಹ್ವಾನ ಸ್ವೀಕರಿಸಿದ ರಿಷಬ್​ ಶೆಟ್ಟಿ

ರಿಷಬ್​ ಶೆಟ್ಟಿ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದಾರೆ. ನಟನಾಗಿ, ನಿರ್ದೇಶಕನಾಗಿ ಅವರಿಗೆ ಬಹಳ ಬೇಡಿಕೆ ಇದೆ. ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡ ಅವರು ‘ಕಾಂತಾರ: ಚಾಪ್ಟರ್​ 1’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈಗ ಅವರು ಅಯೋಧ್ಯೆಗೆ ತೆರಳುವ ಅವಕಾಶ ಪಡೆದಿದ್ದಾರೆ. ಈ ಅವಕಾಶಕ್ಕಾಗಿ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

‘ಶ್ರೀರಾಮ ಕರೆ ಕಳಿಸಿದ್ದಾನೆ; ನನ್ನ ಪೂರ್ವಜನ್ಮದ ಪುಣ್ಯ’: ಅಯೋಧ್ಯೆಯ ಆಹ್ವಾನ ಸ್ವೀಕರಿಸಿದ ರಿಷಬ್​ ಶೆಟ್ಟಿ
ಅಯೋಧ್ಯೆಯ ಆಹ್ವಾನ ಸ್ವೀಕರಿಸಿದ ರಿಷಬ್​ ಶೆಟ್ಟಿ
Follow us
ಮದನ್​ ಕುಮಾರ್​
|

Updated on: Jan 19, 2024 | 10:24 PM

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ (Ram Mandir Inauguration) ಸಕಲ ತಯಾರಿ ನಡೆದಿದೆ. ಜನವರಿ 22ರಂದು ನಡೆಯುವ ಅಭೂತಪೂರ್ವ ಸಮಾರಂಭಕ್ಕಾಗಿ ಬಹುಕೋಟಿ ಜನರು ಕಾದಿದ್ದಾರೆ. ರಾಮ ಮಂದಿರ (Ram Mandir) ಉದ್ಘಾಟನೆಯ ಕ್ಷಣವನ್ನು ನೇರವಾಗಿ ಕಣ್ತುಂಬಿಕೊಳ್ಳುವ ಅವಕಾಶ ಕೆಲವೇ ಮಂದಿಗೆ ಸಿಗಲಿದೆ. ಭಾರತೀಯ ಚಿತ್ರರಂಗದ ಹಲವು ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿದೆ. ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರನ್ನೂ ಆಹ್ವಾನಿಸಲಾಗಿದೆ. ಅಯೋಧ್ಯೆಯಿಂದ ಬಂದ ಆಹ್ವಾನ ಪತ್ರಿಕೆಯನ್ನು ರಿಷಬ್​ ಶೆಟ್ಟಿ (Rishab Shetty) ಸ್ವೀಕರಿಸಿದ್ದಾರೆ. ಈ ಸಂದರ್ಭದ ಫೋಟೋವನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇಂಥ ಮಹತ್ವದ ಅವಕಾಶ ಸಿಕ್ಕಿದ್ದಕ್ಕೆ ಅವರಿಗೆ ಬಹಳ ಖುಷಿ ಆಗಿದೆ.

‘ಶ್ರೀರಾಮ ಜಯ ರಾಮ ಜಯ ಜಯ ರಾಮ. ಬಾಲ್ಯದಿಂದಲೂ ನಮ್ಮ ಮನೆಗಳಲ್ಲಿ ರಾಮನಾಮವ ಭಜಿಸುತ್ತಾ, ರಾಮ ಪ್ರೇಮವ ಭುಜಿಸುತ್ತಾ, ಆತನ ಆದರ್ಶಪ್ರಾಯ ಜೀವನದ ಕಥೆಗಳನ್ನು ಗುರು ಹಿರಿಯರಿಂದ ಕೇಳುತ್ತಾ ಬೆಳೆದವರು ನಾವು. ಇಂದು ಆ ಶ್ರೀರಾಮ ತಾನು ಮಗುವಾಗಿ ಆಡಿದ, ಪ್ರಭುವಾಗಿ ಆಳಿದ ಆ ಅಯೋಧ್ಯೆಗೆ ಬರುವಂತೆ ಕರೆ ಕಳಿಸಿದ್ದಾನೆ. ಇದು ನನ್ನ ಪೂರ್ವ ಜನ್ಮದ ಪುಣ್ಯವೇ ಸರಿ! ಶ್ರೀರಾಮನಿಗೆ ಜಯವಾಗಲಿ, ಅಯೋಧ್ಯೆಗೆ ಜಯವಾಗಲಿ’ ಎಂದು ರಿಷಬ್​ ಶೆಟ್ಟಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ಉದ್ಘಾಟನೆ: ಶಾರುಖ್​, ಸಲ್ಮಾನ್​, ಆಮಿರ್​ ಖಾನ್​ಗೆ ನೀಡಿಲ್ಲ ಆಹ್ವಾನ

ರಿಷಬ್​ ಶೆಟ್ಟಿ ಅವರು ‘ಕಾಂತಾರ’ ಸಿನಿಮಾದ ಯಶಸ್ಸಿನಿಂದ ಪ್ಯಾನ್​ ಇಂಡಿಯಾ ಸ್ಟಾರ್​ ಆದರು. ನಟನಾಗಿ, ನಿರ್ದೇಶಕನಾಗಿ ಅವರಿಗೆ ಬಹಳ ಬೇಡಿಕೆ ಇದೆ. ರಾಷ್ಟ್ರ ಮಟ್ಟದಲ್ಲಿ ಅವರು ಗುರುತಿಸಿಕೊಂಡಿದ್ದಾರೆ. ಈಗ ‘ಕಾಂತಾರ: ಚಾಪ್ಟರ್​ 1’ ಸಿನಿಮಾದ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಇದರ ನಡುವೆ ಅವರು ಅಯೋಧ್ಯೆಗೆ ತೆರಳುವ ಅವಕಾಶ ಪಡೆದಿದ್ದಾರೆ. ಈ ಅವಕಾಶಕ್ಕಾಗಿ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ರಿಷಬ್​ ಶೆಟ್ಟಿ ಜೊತೆ ಅಮಿತಾಭ್​ ಬಚ್ಚನ್​, ರಜನಿಕಾಂತ್​, ಯಶ್​, ಆಲಿಯಾ ಭಟ್​, ರಣಬೀರ್​ ಕಪೂರ್​, ಅಕ್ಷಯ್​ ಕುಮಾರ್​, ಕಂಗನಾ ರಣಾವತ್​, ಆಯುಷ್ಮಾನ್​ ಖುರಾನಾ, ರಣದೀಪ್​ ಹೂಡಾ, ಅನುಷ್ಕಾ ಶರ್ಮಾ, ಅನುಪಮ್​ ಖೇರ್​, ಅಜಯ್​ ದೇವಗನ್​, ಮಾಧುರಿ ದೀಕ್ಷಿತ್​, ಪ್ರಭಾಸ್​, ರಾಮ್​ ಚರಣ್​, ಮೋಹನ್​ಲಾಲ್​, ಸಂಜಯ್​ ಲೀಲಾ ಬನ್ಸಾಲಿ, ಸನ್ನಿ ಡಿಯೋಲ್​, ಚಿರಂಜೀವಿ ಮುಂತಾದ ಸೆಲೆಬ್ರಿಟಿಗಳು ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್